ಸಿದ್ದರಾಮಯ್ಯ ಅವರಿಗೆ ಹತ್ತು ದಿನಗಳ ಕಾಲ ಪ್ರಕೃತಿ ಚಿಕಿತ್ಸೆ  ಪ್ರಕೃತಿ ಚಿಕಿತ್ಸೆ ಪಡೆಯುವ ಸಲುವಾಗಿ ಶನಿವಾರ ಬೆಂಗಳೂರಿನ ಜಿಂದಾಲ್‌ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ದಾಖಲು

ಬೆಂಗಳೂರು (ಆ.21): ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹತ್ತು ದಿನಗಳ ಕಾಲ ಪ್ರಕೃತಿ ಚಿಕಿತ್ಸೆ ಪಡೆಯುವ ಸಲುವಾಗಿ ಶನಿವಾರ ಬೆಂಗಳೂರಿನ ಜಿಂದಾಲ್‌ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ದಾಖಲಾಗಲಿದ್ದಾರೆ. 

ಸೆಪ್ಟೆಂಬರ್‌ನಲ್ಲಿ ವಿಧಾನಮಂಡಲ ಅಧಿವೇಶನ ಶುರುವಾಗಲಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಶನಿವಾರವೇ ಚಿಕಿತ್ಸಾ ಕೇಂದ್ರಕ್ಕೆ ದಾಖಲಾಗಲಿದ್ದಾರೆ. 

ಜಾತಿಗಣತಿ ವರದಿ: ಕುಮಾರಸ್ವಾಮಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ತುಮಕೂರು ರಸ್ತೆ ಜಿಂದಾಲ್‌ ನಗರದಲ್ಲಿರುವ ಚಿಕಿತ್ಸಾ ಕೇಂದ್ರದಲ್ಲಿ ಹತ್ತು ದಿನ ಚಿಕಿತ್ಸೆ ಪಡೆದು ಆಗಸ್ಟ್‌ 31ರಂದು ಸಂಜೆ ವಾಪಸಾಗಲಿದ್ದಾರೆ ಎಂದು ಸಿದ್ದರಾಮಯ್ಯ ಕಚೇರಿ ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ವಿವಿಧ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಇದೀಗ ಕೊಂಚ ಬಿಡುವು ಪಡೆದುಕೊಂಡಿರುವ ಸಿದ್ದರಾಮಯ್ಯ ಜಿಂದಾಲ್‌ಗೆ ದಾಖಲಾಗಿದ್ದಾರೆ.