ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಸೆ.13ರಂದು ಎತ್ತಿನಗಾಡಿ ಮೂಲಕ ವಿಧಾನಸೌಧಕ್ಕೆ ಆಗಮಿಸಿದ್ದ ನಾಯಕರು ಪ್ರತಿಪಕ್ಷ ಕಾಂಗ್ರೆಸ್‌ ಇಂದು ಸೈಕಲ್‌ ಜಾಥಾ ಮೂಲಕ ಪ್ರತಿಭಟನೆ ನಡೆಸಲಿದೆ.  

 ಬೆಂಗಳೂರು (ಸೆ.20): ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಸೆ.13ರಂದು ಎತ್ತಿನಗಾಡಿ ಮೂಲಕ ವಿಧಾನಸೌಧಕ್ಕೆ ಆಗಮಿಸಿ ವಿಭಿನ್ನ ರೀತಿಯ ಪ್ರತಿಭಟನೆ ನಡೆಸಿದ ಪ್ರತಿಪಕ್ಷ ಕಾಂಗ್ರೆಸ್‌ ಇಂದು ಸೈಕಲ್‌ ಜಾಥಾ ಮೂಲಕ ಪ್ರತಿಭಟನೆ ನಡೆಸಲಿದೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹಾಗೂ ಪಕ್ಷದ ಇತರೆ ಅನೇಕ ಶಾಸಕರು, ವಿಧಾನ ಪರಿಷತ್‌ ಸದಸ್ಯರು ಕೆಪಿಸಿಸಿ ಕಚೇರಿಯಿಂದ ವಿಧಾನಸೌಧಕ್ಕೆ ಸೈಕಲ್‌ ಜಾಥಾ ನಡೆಸಲಿದ್ದಾರೆ.

ಕಾಂಗ್ರೆಸ್​​ ಹೇಳಿದ್ದು ಸತ್ಯ: ಸ್ವಪಕ್ಷದ ವಿರುದ್ಧವೇ ಈಶ್ವರಪ್ಪ ಅಸಮಾಧಾನ

ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದು, ಕೂಡಲೇ ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ಮೇಲಿನ ರಾಜ್ಯದ ಪಾಲಿನ ತೆರಿಗೆಯನ್ನು ಇಳಿಸಬೇಕು. ಅದೇ ರೀತಿ ಕೇಂದ್ರ ಸರ್ಕಾರ ತೈಲೋತ್ಪನ್ನಗಳ ಮೇಲೆ ವಿಧಿಸುತ್ತಿರುವ ತೆರಿಗೆಯನ್ನು ಶೇ.50ರಷ್ಟುಇಳಿಸಬೇಕೆಂದು ಆಗ್ರಹಿಸಲಿದ್ದಾರೆ.

ದರ ಏರಿಕೆ ಖಂಡಿಸಿ ಕಾಂಗ್ರೆಸ್‌ ಈಗಾಗಲೇ ಹಲವು ಪ್ರತಿಭಟನೆ ನಡೆಸಿದೆ. ಆದರೆ ಇದೀಗ ಅಧಿವೇಶನದ ಸಂದರ್ಭದಲ್ಲಿ ಜನರ ಗಮನ ಸೆಳೆಯುವ ನಿಟ್ಟಿನಲ್ಲಿ ವಿಭಿನ್ನ ಮಾದರಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ.