DK Shivakumar Birthday: ಅದ್ದೂರಿಯಾಗಿ ಡಿಕೆಶಿ ಹುಟ್ಟುಹಬ್ಬ ಆಚರಿಸಿದ ಕಾಂಗ್ರೆಸ್ ನಾಯಕರು!
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ ಅವರ 62ನೇ ವರ್ಷದ ಹುಟ್ಟುಹಬ್ಬವನ್ನು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ಮಧ್ಯರಾತ್ರಿ ಕೇಕ್ ಕತ್ತರಿಸುವ ಮೂಲಕ ಅದ್ದೂರಿಯಾಗಿ ಆಚರಿಸಲಾಯಿತು.
ಬೆಂಗಳೂರು (ಮೇ.15) ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ ಅವರ 62ನೇ ವರ್ಷದ ಹುಟ್ಟುಹಬ್ಬವನ್ನು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ಮಧ್ಯರಾತ್ರಿ ಕೇಕ್ ಕತ್ತರಿಸುವ ಮೂಲಕ ಅದ್ದೂರಿಯಾಗಿ ಆಚರಿಸಲಾಯಿತು.
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೇಕ್ ತಿನ್ನಿಸಿ, ಶುಭಾಶಯ ತಿಳಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮಾಜಿ ಸಚಿವ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ಮತ್ತಿತರರು ಜತೆಗಿದ್ದರು ಹುಟ್ಟು ಹಬ್ಬದ ಸಂಭ್ರಮ ಮುಗಿಸಿ, ಶಾಂಗ್ರಿಲಾ ಹೋಟೆಲ್ ನಿಂದ ತೆರಳುತ್ತಿರುವ ನಾಯಕರು ಒಬ್ಬೊಬ್ಬರಾಗಿ ತಮ್ಮ ತಮ್ಮ ಮನೆಗೆ ತೆರಳುತ್ತಿರುವ ಕೈ ನಾಯಕರು
ಡಿಕೆಶಿ ಟ್ವೀಟ್:
ರಾಜ್ಯದ ಮೂಲೆಮೂಲೆಗಳಿಂದ ಕಾರ್ಯಕರ್ತರು, ಮುಖಂಡರು ಹುಟ್ಟುಹಬ್ಬದ ಶುಭಾಶಯ ಹೇಳುತ್ತಿರುವ ಹಿನ್ನೆಲೆ ಟ್ವಿಟ್ ಮೂಲಕ ಧನ್ಯವಾದ ತಿಳಿಸಿದ ಡಿಕೆ ಶಿವಕುಮಾರ ಅವರು, ನನ್ನ ಜೀವನ ಕರ್ನಾಟಕದ ಜನರ ಸೇವೆಗೆ ಮುಡಿಪಾಗಿದೆ ನನ್ನ ಹುಟ್ಟುಹಬ್ಬದ ಮುನ್ನಾದಿನದಂದು, ಕರ್ನಾಟಕದ ಜನರು ನನಗೆ ಅತ್ಯುತ್ತಮ ಹುಟ್ಟುಹಬ್ಬದ ಉಡುಗೊರೆಯನ್ನು ನೀಡಿದ್ದಾರೆ ನನ್ನ ಕಾಂಗ್ರೆಸ್ ಕುಟುಂಬಕ್ಕೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.
ಸಿಎಂ ಆಯ್ಕೆಗೆ ಸಿಗದ ಒಮ್ಮತ: ನಾಳೆ ಮತ್ತೊಮ್ಮೆ ಶಾಸಕರ ಅಭಿಪ್ರಾಯ ಸಂಗ್ರಹ