ಪಾಕ್ ಪರ ಘೋಷಣೆ ಕೂಗಿದವರ ಬಿಡುಗಡೆ: ಸರ್ಕಾರದ ಉದ್ದೇಶವೇ ಬೇರೆ..!
ಹುಬ್ಬಳ್ಳಿಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಮೂವರನ್ನ ಬಂಧಿಸಲಾಗಿತ್ತು. ಆದರೆ, ಇದೀಗ ದೇಶದ್ರೋಹದ ಹೇಳಿಕೆ ನೀಡಿದ್ದ ವಿದ್ಯಾರ್ಥಿಗಳನ್ನ ಬಿಡುಗಡೆಗೊಳಿಸಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಏನದು? ಸಂಪೂರ್ಣ ವಿವರ ಈ ಕೆಳಗಿನಂತಿದೆ.
ಹುಬ್ಬಳ್ಳಿ, [ಫೆ.16]: ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಸಂಭ್ರಮಿದ್ದ ಕೆಎಲ್‌ಇ ಸಂಸ್ಥೆಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳನ್ನ ರಿಲೀಸ್ ಮಾಡಲಾಗಿದೆ. ಆದರೂ ಅವರ ವಿಚಾರಣೆ ನಡೆಯುತ್ತಿದೆ.
ಕಾಶ್ಮೀರ ಮೂಲದ ತಾಲಿಬ್ ಮಾಜಿದ್, ಆಮಿರ್ ವಾನಿ ಮತ್ತು ಬಾಷಿತ್ ಸೋಫಿ ಬಂಧಿಸಿ ದೇಶ ದ್ರೋಹ ಕೇಸ್ ದಾಖಲಿಸಲಾಗಿತ್ತು. ಆದ್ರೀಗ ಪ್ರಕರಣಕ್ಕೆ ಹೊಸ ಟ್ವಸ್ಟ್ ಸಿಕ್ಕಿದೆ. ಸರ್ಕಾರವೇ ಅವರ ಬಂಧನದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ. ಸೂಕ್ತ ಸಾಕ್ಷ್ಯಾಧಾರ ಕಲೆಹಾಕದ ಹೊರತು ಬಂಧಿಸಿದಂತೆ ಸೂಚಿಸಿದೆ.
'ಪಾಕಿಸ್ತಾನ್ ಜಿಂದಾಬಾದ್'ಎಂದ ಹುಬ್ಬಳ್ಳಿಯ KLE ವಿದ್ಯಾರ್ಥಿಗಳು ಅರೆಸ್ಟ್
ಉಲ್ಟಾ ಹೊಡೆದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್
ದೇಶದ್ರೋಹ ಪ್ರಕರಣ ದಾಖಲಿಸಲು ಕೇಂದ್ರ ಗೃಹ ಇಲಾಖೆಯ ಮಾರ್ಗಗಳನ್ನ ಪಾಲಿಸಿ ತನಿಖೆ ನಡೆಸುವಂತೆ ಸೂಚಿಸಿದೆ. ಇನ್ನೊಂದೆಡೆ ಆರೋಪಿಗಳ ಬಂಧನದ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಆರ್.ದಿಲೀಪ್ ಈಗ ಉಲ್ಟಾ ಹೊಡೆದಿದ್ದಾರೆ. ಮೂವರು ವಿದ್ಯಾರ್ಥಿಗಳನ್ನು ಬಂಧಿಸಿಲ್ಲ. ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ ಎಂದು ವರಸೆ ಬದಲಿಸಿದ್ದಾರೆ.
ಮುಜುಗರ ತಪ್ಪಿಸಿಕೊಳ್ಳು ಸರ್ಕಾರದ ಪ್ಲಾನ್
ಕಾನೂನಾತ್ಮಕ ದೃಷ್ಟಿಯಿಂದ ದೇಶದ್ರೋಹ ಪ್ರಕರಣಕ್ಕೆ ಇನ್ನಷ್ಟು ಸಾಕ್ಷ್ಯಾಧಾರಗಳ ಅಗತ್ಯವಿದೆ. ಕೇವಲ ವಿಡಿಯೋ ಆಧಾರದ ಮೇಲೆ ಅವರನ್ನ ಬಂಧಿಸಿದ್ರೆ ಆರೋಪಿಗಳು ಜಾಮೀನಿನ ಮೇಲೆ ಹೊರಬರುವ ಸಾಧ್ಯೆತೆಯಿದೆ. ಅಲ್ಲದೇ, ಬೀದರ್ ನ ಶಾಹೀನ್ ಶಾಲೆ ಪ್ರಕರಣದಂತೆ ಈ ಪ್ರಕರಣದಲ್ಲೂ ಸರ್ಕಾರ ಮುಜುಗರಕ್ಕೀಡಾಗುವ ಸಾಧ್ಯತೆ ಇದೆ. ಹೀಗಾಗಿ, ಮೂವರನ್ನ ಗೌಪ್ಯ ಸ್ಥಳದಲ್ಲಿರಿಸಿ ವಿಚಾರಣೆ ನಡೆಸಲಾಗುತ್ತಿದೆ.
'ದೇಶದ್ರೋಹದ ಘೋಷಣೆ ಕೂಗಿದವರನ್ನು ಒದ್ದು ಒಳಗೆ ಹಾಕಿ'
ಪೋರೆನ್ಸಿಕ್ ತಜ್ಞರಿಗೆ ಆರೋಪಿಗಳ ಮೊಬೈಲ್, ಲ್ಯಾಪ್‌ಟಾಪ್
ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಡಿಯೋ ಚಿತ್ರೀಕರಣಕ್ಕೆ ಬಳಸಿದ ಮೊಬೈಲ್, ಲ್ಯಾಪ್‌ಟಾಪ್ ವಶಕ್ಕೆ ಪಡೆದಿದ್ದು, ಪೋರೆನ್ಸಿಕ್ ತಜ್ಞರಿಗೆ ಕಳಿಸಲಾಗಿದೆ. ಮತ್ತೊಂದಡೆ ವಿದ್ಯಾರ್ಥಿಗಳು ಪೋನ್ ಕರೆಗಳು, ಯಾವುದಾದರೂ ಸಂಘಟನೆ ಜೊತೆ ನಂಟು ಹೊಂದಿದ್ದಾರಾ ಎಂಬುದರ ಕುರಿತು ತನಿಖೆ ನಡೆಯುತ್ತಿದೆ.ಸೂಕ್ತ ಸಾಕ್ಷ್ಯಾಧಾರಗಳನ್ನು ಕ್ರೋಢಿಕರಿಸಿದ ಬಳಿಕವೇ ಬಂಧಿಸುವ ಸಾಧ್ಯತೆ ಇದೆ.
ಕಾಂಗ್ರೆಸ್ ನಾಯಕರ ಆಕ್ರೋಶ
ಮಾಜಿ ಸಿಎಂ ಸಿದ್ದರಾಮಯ್ಯ ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ ಹಾಗೂ ಯುಟಿ ಖಾದರ್ ಸರ್ಕಾರದ ನಿರ್ಧಾರಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಸರ್ಕಾರ, ಪೊಲೀಸ್ ಇಲಾಖೆ ವಿರುದ್ದ ಹರಿಹಾಯ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, ಪೊಲೀಸರು ಮಾಡುತ್ತಿರುವುದು ಸರಿಯಿಲ್ಲ. ಪೊಲೀಸರು ಒಂದೊಂದು ಪ್ರಕರಣದಲ್ಲಿ ಒಂದೊಂದು ರೀತಿ ತಾರತಮ್ಯ ಮಾಡುತ್ತಿದ್ದಾರೆ. ಪಾಕಿಸ್ತಾನ ಪರ ಘೋಷಣೆ ಕೂಗೋದು ನಿಜವಾದ ದೇಶದ್ರೋಹ.
ಪೊಲೀಸರು ಶಾಹಿನ್ ಶಾಲೆಯಂಥ ಪ್ರಕರಣದಲ್ಲಿ ಕೇಸ್ ಹಾಕುತ್ತಾರೆ. ಇಂಥವರನ್ನು ಬಿಟ್ಟು ಕಳಿಸುತ್ತಿರುವುದು ಸರಿಯಿಲ್ಲ.ಹುಬ್ಬಳ್ಳಿ ಪ್ರಕರಣದ ಬಗ್ಗೆ ಇನ್ನಷ್ಟು ಮಾಹಿತಿ ಪಡೆದುಕೊಳ್ತೀನಿ. ಎಲ್ಲ ವಿಚಾರಗಳನ್ನು ಸದನದಲ್ಲಿ ಚರ್ಚೆ ಮಾಡುತ್ತೇನೆ ಎಂದು ಹೇಳಿದರು.