ಶಾಸಕರ ಅತೃಪ್ತಿ ಶಮನಕ್ಕೆ ಸಿಎಂ ಯತ್ನ; 145 ಕೋಟಿ ರೂ. ಅನುದಾನ ಬಿಡುಗಡೆ
ಆಡಳಿತರೂಢ ಕಾಂಗ್ರೆಸ್‌ನ ಶಾಸಕರೇ ಅನುದಾನ ಬಿಡುಗಡೆ ಮಾಡದಿರುವ ಬಗ್ಗೆ ಅಸಮಾಧಾನ ಹೊರಹಾಕಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಅನುದಾನ ಬಿಡುಗಡೆಗೊಳಿಸಿದ್ದಾರೆ. 2023-24ನೇ ಸಾಲಿನ ಬಜೆಟ್‌ನಲ್ಲಿ ಒದಗಿಸಿರುವ ಅನುದಾನದಡಿ ಮೊದಲನೇ ಕಂತಿನಲ್ಲಿ 145.50 ಕೋಟಿ ರು. ಅನುದಾನವನ್ನು ಸರ್ಕಾರ ಬಿಡುಗಡೆಗೊಳಿಸಿ ಆದೇಶಿಸಿದೆ.

ಬೆಂಗಳೂರು (ಆ.18) : ಆಡಳಿತರೂಢ ಕಾಂಗ್ರೆಸ್‌ನ ಶಾಸಕರೇ ಅನುದಾನ ಬಿಡುಗಡೆ ಮಾಡದಿರುವ ಬಗ್ಗೆ ಅಸಮಾಧಾನ ಹೊರಹಾಕಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಅನುದಾನ ಬಿಡುಗಡೆಗೊಳಿಸಿದ್ದಾರೆ. 2023-24ನೇ ಸಾಲಿನ ಬಜೆಟ್‌ನಲ್ಲಿ ಒದಗಿಸಿರುವ ಅನುದಾನದಡಿ ಮೊದಲನೇ ಕಂತಿನಲ್ಲಿ 145.50 ಕೋಟಿ ರು. ಅನುದಾನವನ್ನು ಸರ್ಕಾರ ಬಿಡುಗಡೆಗೊಳಿಸಿ ಆದೇಶಿಸಿದೆ.
224 ವಿಧಾನಸಭಾ ಸದಸ್ಯರು ಮತ್ತು 67 ವಿಧಾನಪರಿಷತ್ ಸದಸ್ಯರಿಗೆ ಅನುದಾನ ಒದಗಿಸಲಾಗಿದೆ. ಪ್ರತಿ ಕ್ಷೇತ್ರಕ್ಕೆ ತಲಾ 50 ಲಕ್ಷ ರು.ನಂತೆ 145.50 ಕೋಟಿ ರು. ಒದಗಿಸಲಾಗಿದೆ. ಅನುದಾನದಡಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ವಿಧಾನಸಭೆ ಸದಸ್ಯರ ಅನುದಾನವನ್ನು ಉಪವಿಭಾಗಾಧಿಕಾರಿಗಳು ಮತ್ತು ವಿಧಾನಪರಿಷತ್ ಸದಸ್ಯರ ಅನುದಾನವನ್ನು ಜಿಲ್ಲಾಧಿಕಾರಿಗಳು ನಿರ್ವಹಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ. 2023-24ನೇ ಸಾಲಿನ ಮೊದಲನೇ ಕಂತಿನ ಅನುದಾನವನ್ನು ಜಿಲ್ಲಾಧಿಕಾರಿಗಳ ಪಿ.ಡಿ.ಖಾತೆಗೆ ಖಜಾನೆ-2ರ ಮೂಲಕ ಬಿಡುಗಡೆಗೊಳಿಸಲಾಗಿದೆ. ತದನಂತರ ಆಯಾ ಜಿಲ್ಲೆಯ ಉಪವಿಭಾಗಾಧಿಕಾರಿಗಳಿಗೆ ಅನುದಾನವನ್ನು ವರ್ಗಾವಣೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.
Ghar wapsi: ಕಾಂಗ್ರೆಸ್‌ಗೆ ಸೋಮಶೇಖರ್ ಕರೆ ತರಲು ಶಾಸಕ ಶ್ರೀನಿವಾಸ್‌ಗೆ ಡಿಕೆ ಶಿವಕುಮಾರ್ ಟಾಸ್ಕ್
ನಿಯಮಾನುಸಾರ ಹಣ ಬಳಕೆ ಪ್ರಮಾಣ ಪತ್ರವನ್ನು ಜಿಲ್ಲಾಧಿಕಾರಿಗಳ/ಉಪವಿಭಾಗಾಧಿಕಾರಿಗಳ ಸಹಿಯೊಂದಿಗೆ ಸರ್ಕಾರಕ್ಕೆ ಸಲ್ಲಿಸಬೇಕು. ಬಿಡುಗಡೆ ಮಾಡಿದ ಅನುದಾನವನ್ನು ನಿಗದಿತ ಅವಧಿಯಲ್ಲಿ ಮಾಡಿಕೊಳ್ಳಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಇತ್ತೀಚೆಗೆ ಶಾಸಕರ ಅನುದಾನ ಬಿಡುಗಡೆ ವಿಚಾರದಲ್ಲಿ ಕಾಂಗ್ರೆಸ್ ಶಾಸಕರೇ ಸರ್ಕಾರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ತದನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರ ಮತ್ತು ಸಚಿವರ ಜತೆ ಸರಣಿ ಸಭೆ ನಡೆಸಿ ಮನವೊಲಿಕೆ ಮಾಡಿದ್ದರು.
cauvery water dispute: ಕಾವೇರಿ ಜಲ ವಿವಾದ ಚರ್ಚೆಗೆ ಸರ್ವಪಕ್ಷ ಸಭೆ : ಡಿಕೆಶಿ