ಹುಬ್ಬಳ್ಳಿ :  ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕಾಂಗ್ರೆಸ್ ಶಾಕಿ ಲಕ್ಷ್ಮೀ ಹೆಬ್ಬಾಳ್ಕರ್  ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಶಾಸಕರನ್ನು ಹಿಡಿದಿಟ್ಟುಕೊಳ್ಳಲಾಗದಿದ್ದರೆ ಸಿದ್ದರಾಮಯ್ಯ ಕೈಗೆ ಬಳೆ ತೊಟ್ಟುಕೊಳ್ಳಲಿ ಎಂದು ಹೇಳಿಕೆ ಸರಿಯಲ್ಲ. ಇದು ಅವರ ಸಂಸ್ಕೃತಿ ಹೇಗಿದೆ ಎನ್ನುವುದನ್ನು ತೋರಿಸುತ್ತದೆ. ಮಹಿಳೆಯಾಗಿ ಹೀಗೆ ಮಾತಾಡಿರುವುದು ದುರದೃಷ್ಟಕರ ಎಂದಿದ್ದಾರೆ. 

ವೀರಶೈವರು ಕಾಂಗ್ರೆಸ್ ಗೆ ಮತ ಹಾಕಲ್ಲ ಎನ್ನುವ ಬಿಎಸ್ ವೈ ಹೇಳಿಕೆ ಬಗ್ಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಭಾರತೀಯರು ಜಾತ್ಯಾತೀತರು ಎನ್ನುತ್ತೇವೆ. ಒಂದು ಜಾತಿಯನ್ನು ದ್ವೇಷಿಸುವುದು, ಮತ್ತೊಂದು ಜಾತಿಯನ್ನು ಪ್ರೀತಿಸುವುದು ಸರಿಯಲ್ಲ ಎಂದರು. 

ಇನ್ನು ರಾಜ್ಯದಲ್ಲಿ ಸರ್ಕಾರ ಬದಲಾವಣೆ ಆಗಲಿದೆ ಎನ್ನುವ ವಿಚಾರದ ಬಗ್ಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಯಾವುದೇ ಕಾರಣಕ್ಕೂ ಸರ್ಕಾರಕ್ಕೆ ಸಮಸ್ಯೆಯಾಗುವುದಿಲ್ಲ ಎಂದು ಭವಿಷ್ಯ ನುಡಿದರು.

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.