ಕಾಂಗ್ರೆಸ್ ಶಾಸಕ ರಾಜು ಕಾಗೆ ಪುತ್ರಿ ಕೃತಿಕಾ ಕಾಗೆ ಹೃದಯ ಸಂಬಂಧಿ ಕಾಯಿಲೆಯಿಂದ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬೆಂಗಳೂರು (ಮಾ.1): ಬೆಳಗಾವಿ ಜಿಲ್ಲೆಯ ಕಾಗವಾಡದಕಾಂಗ್ರೆಸ್ ಶಾಸಕ ರಾಜು ಕಾಗೆ ಅವರ ಹಿರಿಯ ಪುತ್ರಿ ಕೃತಿಕಾ ಭರಮಗೌಡ ಕಾಗೆ ಇಂದು ಹೃದಯ ಸಂಬಂಧಿ ಕಾಯಿಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಕೃತಿಕಾ ಕಾಗೆ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ. 37 ವರ್ಷ ವಯಸ್ಸಾಗಿತ್ತು. ಮೃತರಿಗೆ ಮೂರುವರೆ ವರ್ಷದ ಹೆಣ್ಣುಮಗಳಿದ್ದಾಳೆ. ನಾಳೆ ರಾಜು ಕಾಗೆ ಅವರ ಸ್ವಗ್ರಾಮ ಉಗಾರದಲ್ಲಿ ಕೃತಿಕಾ ಕಾಗೆ ಅಂತ್ಯಕ್ರಿಯೆ ನಡೆಯಲಿದೆ ಕುಟುಂಬ ಮೂಲಗಳು ತಿಳಿಸಿವೆ.
ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
