ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಆರ್ಟಿಕಲ್ 370 ರದ್ದತಿಯೇ ಕಾರಣ ಎಂದು ಶ್ರೀರಂಗಪಟ್ಟಣದ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಂಡ್ಯ (ಏ.23): ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಆರ್ಟಿಕಲ್ 370 ರದ್ದತಿಯೇ ಕಾರಣ ಎಂದು ಶ್ರೀರಂಗಪಟ್ಟಣದ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಈ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದು, ಅವರಲ್ಲಿ ಮೂವರು ಕನ್ನಡಿಗರು ಸೇರಿದ್ದಾರೆ. ಆರ್ಟಿಕಲ್ 370 ತೆಗೆಯುವ ಮುನ್ನ ಚೆನ್ನಾಗಿ ಯೋಚಿಸಬೇಕಿತ್ತು. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅತಿಯಾದ ಆತ್ಮವಿಶ್ವಾಸ ಹಾಗೂ ದುಡುಕಿನ ನಿರ್ಧಾರದಿಂದ ಈ ಘಟನೆ ಸಂಭವಿಸಿದೆ.
ಇದನ್ನೂ ಓದಿ: ಪಹಲ್ಗಾಮ್ ದಾಳಿ: ರಾಜೂಗೌಡ ಆಕ್ರೋಶ, 'ಇವರೇ ಉಗ್ರರಿಗಿಂತ ಡೇಂಜರ್..' ಎಂದಿದ್ದು ಯಾರಿಗೆ?
ಕಾಶ್ಮೀರದ ಜನರ ಭಾವನೆಗಳನ್ನು ಅರ್ಥಮಾಡಿಕೊಂಡು, ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದರೆ ಈ ದಾಳಿಯನ್ನು ತಡೆಯಬಹುದಿತ್ತು. ಉಗ್ರರ ದಾಳಿಯಲ್ಲಿ ಮೂವರು ಕನ್ನಡಿಗರು ಸೇರಿದಂತೆ ಸುಮಾರು 26 ಮಂದಿ ಮೃತಪಟ್ಟಿದ್ದಾರೆ. ಈ ಘಟನೆಗೆ ಪರೋಕ್ಷವಾಗಿ ಬಿಜೆಪಿಯೇ ಕಾರಣ ಎಂಬ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಶಾಸಕನ ಈ ವಿವಾದಾತ್ಮಕ ಹೇಳಿಕೆಯಿಂದ ಕೆರಳಿರುವ ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
