ಬಿಜೆಪಿಗಿಂತ ಕಾಂಗ್ರೆಸ್ ಅವಧಿಯಲ್ಲಿ ಕಡಿಮೆ ಹಣ ವೆಚ್ಚ: ಅಶೋಕ್ ಟೀಕೆ
ರಾಜ್ಯ ಬಜೆಟ್‌ನ ₹3.22 ಲಕ್ಷ ಕೋಟಿ ಪೈಕಿ ₹1.79 ಲಕ್ಷ ಕೋಟಿ ವೆಚ್ಚ ಮಾಡಲಾಗಿದೆ. ಈವರೆಗೆ ಶೇ.55.69ರಷ್ಟು ಖರ್ಚಾಗಿದೆ. ಇನ್ನೂ ಶೇ.45ರಷ್ಟು ಅನ್ನು ಎರಡು ತಿಂಗಳಲ್ಲಿ ಖರ್ಚು ಮಾಡಬೇಕಿದೆ. ಬಿಜೆಪಿ ಸರ್ಕಾರಕ್ಕೆ ಹೋಲಿಸಿದರೆ ಕಾಂಗ್ರೆಸ್ ಸರ್ಕಾರ ಅನುದಾನವನ್ನು ಕಡಿಮೆ ಖರ್ಚು ಮಾಡಿದೆ ಎಂದು ಕಿಡಿಕಾರಿದ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್
ಬೆಂಗಳೂರು(ಜ.08): ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದಂತೆ ನಡೆಯದೆ ಪ್ರಸಕ್ತ ಹಣಕಾಸು ವರ್ಷದ ನಿಗದಿತ ಅವಧಿಯಲ್ಲಿ ಯಾವುದೇ ಅನುದಾನ ಖರ್ಚು ಮಾಡಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಾ ಪ್ರಹಾರ ನಡೆಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಬಜೆಟ್‌ನ ₹3.22 ಲಕ್ಷ ಕೋಟಿ ಪೈಕಿ ₹1.79 ಲಕ್ಷ ಕೋಟಿ ವೆಚ್ಚ ಮಾಡಲಾಗಿದೆ. ಈವರೆಗೆ ಶೇ.55.69ರಷ್ಟು ಖರ್ಚಾಗಿದೆ. ಇನ್ನೂ ಶೇ.45ರಷ್ಟು ಅನ್ನು ಎರಡು ತಿಂಗಳಲ್ಲಿ ಖರ್ಚು ಮಾಡಬೇಕಿದೆ. ಬಿಜೆಪಿ ಸರ್ಕಾರಕ್ಕೆ ಹೋಲಿಸಿದರೆ ಕಾಂಗ್ರೆಸ್ ಸರ್ಕಾರ ಅನುದಾನವನ್ನು ಕಡಿಮೆ ಖರ್ಚು ಮಾಡಿದೆ ಎಂದು ಕಿಡಿಕಾರಿದರು.
ಅಂಬೇಡ್ಕರ್ ಹೆಸರನ್ನು ಕಾಂಗ್ರೆಸ್ ಚುನಾವಣಾ ಬೂಟಾಟಿಕೆಗೆ ಮಾತ್ರ ಬಳಸುತ್ತದೆ; ಆರ್. ಅಶೋಕ
ದಿವಾಳಿಯ ಕಡೆಗೆ ರಾಜ್ಯದ ಪರಿಸ್ಥಿತಿ:
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 60 ಪರ್ಸೆಂಟ್ ಕಮಿಷನ್ ಸರ್ಕಾರವಾಗಿದ್ದು, ಸರ್ಕಾರವಾಗಿದ್ದು, ರಾಜ್ಯವು ದಿವಾಳಿ ಕಡೆಗೆ ಸಾಗುತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗುತ್ತಿಗೆದಾರರಿಗೆ ಪಾವತಿಸಲು ಸರ್ಕಾರದ ಬಳಿ ಹಣವಿಲ್ಲ. ಬಿಜೆಪಿ ಸರ್ಕಾರಕ್ಕೆ 40 ಪರ್ಸೆಂಟ್ ಎಂದು ಆರೋಪಿಸಿದ ಗುತ್ತಿಗೆದಾರರು, ಈಗ ಕಾಂಗ್ರೆಸ್ ಸರ್ಕಾರ 60 ಪರ್ಸೆಂಟ್ ಕಮಿಷನ್ ಎಂದು ಹೇಳಿ ದಯಾಮರಣಕ್ಕೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ. ಅಲ್ಲದೆ, ಕಾಂಗ್ರೆಸ್ ಸರ್ಕಾರ ಗುತ್ತಿಗೆದಾರರಿಂದ 65 ಪರ್ಸೆಂಟ್ ಕಮಿಷನ್ ಪಡೆಯಲು ಮುಂದಾಗಿದ್ದಾರೆ ಎಂದು ಅವರು ದೂರಿದರು.
ಹಣ ವೆಚ್ಚ ಮಾಡದ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಟಿ!
ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಹಾಗೂ ಇಲಾಖೆಯಡಿ ಬರುವ ವಿವಿಧ ನಿಗಮಗಳಲ್ಲಿ ಕೋಟಿ ಕೋಟಿ ಅನುದಾನ ಇದ್ದರೂ ಖರ್ಚು ಮಾಡದ ಅಧಿಕಾರಿಗಳಿಗೆ ಚಳಿ ಬಿಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು. ಸಂಬಂಧಿಸಿದ ಎಲ್ಲ ಅಧಿಕಾರಿಗಳಿಗೂ ಕೂಡಲೇ ನೋಟಿಸ್ ನೀಡಿ, ಉತ್ತರ ಸಮರ್ಪಕವಾಗಿಲ್ಲದಿದ್ದರೆ ತಕ್ಷಣ ಅಮಾನತು ಮಾಡಿ ಎಂದು ಮುಖ್ಯ ಕಾರ್ಯದರ್ಶಿಗೆ ಖಡಕ್ ಸೂಚನೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು ಅಧಿಕಾರಿಗಳು ಕೈಯಲ್ಲಿ ಸರ್ಕಾರದ ಅನುದಾನ ಇದ್ದರೂ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡದಿರುವುದು, ನಿಗಮಗಳ ಯೋಜನೆಗಳಿಗೆ ಹಣ ಬಳಸದೆ ಇಟ್ಟುಕೊಂಡಿರುವುದು, ಬಜೆಟ್‌ನಲ್ಲಿ ಘೋಷಿಸಿರುವ ಕಾರ್ಯಕ್ರಮಗಳನ್ನೂ ಅನುಷ್ಠಾನಗೊಳಿಸದೆ ಕೈಕಟ್ಟಿ ಕೂತಿರುವುದನ್ನು ಕಂಡು ಸಿಡಿಮಿಡಿಗೊಂಡರು.
ಫಲಾನುಭವಿಗಳಿಗೆ ಕೊಡಲು ಕೊಟ್ಟ ಹಣ ಇಟ್ಟುಕೊಂಡು ಕೂರುವುದಕ್ಕಾ ನೀವು ಇರೋದು? ವರ್ಷದ ಕೊನೇ ತಿಂಗಳಲ್ಲೇ ಖರ್ಚು ಮಾಡುವ ಅಸಹ್ಯ ಅಭ್ಯಾಸ ಬೆಳೆಸಿಕೊಂಡಿದ್ದೀರಿ ಎಂದು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಮಾರ್ಚ್ ಅಂತ್ಯದವರೆಗೆ ಕಾಯದೆ ಆಯವ್ಯಯದಲ್ಲಿ ಒದಗಿಸಿರುವ ಅನುದಾನ ಸಮರ್ಪಕವಾಗಿ ವೆಚ್ಚ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಬಿಜೆಪಿಯಲ್ಲಿ ಭಿನ್ನಮತ: ವರಿಷ್ಠರು ಹೇಳಿದಂತೆ ಯತ್ನಾಳ್ ಕೇಳುವುದು ಒಳಿತು, ಆರ್. ಅಶೋಕ್
ಇಲಾಖೆಯ 739 ಕೋಟಿ ಉಳಿಕೆ:
2024-25ನೇ ಸಾಲಿನ ಬಜೆಟ್‌ನಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಮೀಸಲಿಟ್ಟಿದ್ದ ₹5,377 ಕೋಟಿ ಅನುದಾನದ ಪೈಕಿ ಈವರೆಗೆ 3,631 ಕೋಟಿ ಬಿಡುಗಡೆಯಾಗಿದೆ. ₹2.892 ಕೋಟಿ ಮಾತ್ರ ವೆಚ್ಚ ಮಾಡಲಾಗಿದೆ. ಇನ್ನೂ 2739 ಕೋಟಿ ಹಾಗೇ ಉಳಿದಿದೆ. ಅಂಬೇಡ್ಕರ್ ನಿಗಮದಲ್ಲಿ 1900 ಕೋಟಿ, ಭೋವಿ ನಿಗಮದಲ್ಲಿ 107 ಕೋಟಿ ಸೇರಿ ಎಲ್ಲ ನಿಗಮಗಳಲ್ಲೂ ನೂರಾರು ಕೋಟಿ ಹಣ ಯಾಕೆ ಖರ್ಚು ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸೆಪ್ಟೆಂಬರ್ ಒಳಗೆ ವಿದ್ಯಾರ್ಥಿವೇತನ:
ಇನ್ನು ಮುಂದೆ ಪ್ರತಿ ವರ್ಷ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವನ್ನು ಸೆಪ್ಟೆಂಬರ್ ಅಂತ್ಯದೊಳಗೆ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನವನ್ನು ನವೆಂಬರ್ ಅಂತ್ಯದ ಒಳಗಾಗಿ ಪಾವತಿಸಲು ಕ್ರಮ ಕೈಗೊಳ್ಳಬೇಕು. ಆಧಾರ್ ಮತ್ತಿತರರ ಕಾರಣಗಳಿಂದ ವಿದ್ಯಾರ್ಥಿ ವೇತನದಲ್ಲಿ ಏಳಂಬವಾಗಬಾರದು ಎಂದು ಸೂಚಿಸಿದರು,