Asianet Suvarna News Asianet Suvarna News

ಕಾಂಗ್ರೆಸ್‌ನಿಂದಲೇ ರಾಜ್ಯದಲ್ಲಿ ಕೋಮುಗಲಭೆಗೆ ಯತ್ನ? ಬಿವೈ ವಿಜಯೇಂದ್ರ ಹೇಳಿದ್ದೇನು?

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನಕ್ಕೆ ರಾಜ್ಯ ಸರ್ಕಾರ ಇಳಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಆರೋಪಿಸಿದರು.

Congress trying to undermine law and order says Vijayendra alleges at yadgir rav
Author
First Published Jan 29, 2024, 5:02 AM IST | Last Updated Jan 29, 2024, 5:02 AM IST

 ಶಹಾಪುರ )ಜ.29): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನಕ್ಕೆ ರಾಜ್ಯ ಸರ್ಕಾರ ಇಳಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಆರೋಪಿಸಿದರು.

ಶಹಾಪುರ ನಗರಕ್ಕೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಕೆರೆಗೂಡು ಗ್ರಾಮದ ಪಂಚಾಯ್ತಿಯಲ್ಲಿ ಎಲ್ಲಾ ಸದಸ್ಯರು ಒಟ್ಟಿಗೆ ಚರ್ಚಿಸಿ, ತೀರ್ಮಾನ ಮಾಡಿ 108 ಅಡಿ ಧ್ವಜದ ಸ್ತಂಭ ನಿರ್ಮಿಸಿ, ಹನುಮಾನ್ ಧ್ವಜ ಹಾರಿಸಬೇಕೆಂದುಕೊಂಡಿದ್ದರು. ಏಕಾಏಕಿ ಪೊಲೀಸರು ಗ್ರಾಮಕ್ಕೆ ನುಗ್ಗಿ ಲಾಠಿ ಚಾರ್ಚ್ ಮಾಡಿ, ಏರಿಸಿದ ಧ್ವಜವನ್ನು ಇಳಿಸಿರುವುದು ಖಂಡನಿಯ ಎಂದರು.

 

ರಾಷ್ಟ್ರಪತಿಗಳನ್ನ ಏಕವಚನದಲ್ಲಿ ಸಂಬೋಧಿಸಿ ಅವಮಾನ; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರ ವಜಾಕ್ಕೆ ಎಚ್‌ಡಿಕೆ ಒತ್ತಾಯ

ರಾಜ್ಯದಲ್ಲಿರುವ ಕಾಂಗ್ರೆಸ್‌ ಸರ್ಕಾರ ಪೊಲೀಸರ ಮೂಲಕ ಗೂಂಡಾಗಿರಿ ಮಾಡುತ್ತಿದೆ. ಪೊಲೀಸರು ಗ್ರಾಮಸ್ಥರ ಮೇಲೆ ಲಾಠಿ ಚಾರ್ಚ್ ಮಾಡಿದ್ದಾರೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ ಮತ್ತು ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ ಅವರು ಭೇಟಿ ನೀಡಿದ್ದ ವೇಳೆ ಮತ್ತೊಮ್ಮೆ ಗ್ರಾಮಸ್ಥರ ಮೇಲೆ ಲಾಠಿ ಚಾಜ್ ಮಾಡಿ ಅವರನ್ನು ಬಂಧಿಸಿರುವುದು ಸರಿಯಲ್ಲ ಎಂದರು.

ಈ ಘಟನೆ ವಿರುದ್ಧ ಬಿಜೆಪಿ ವತಿಯಿಂದ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದ ಅವರು, ಮುಂದಿನ ಹೋರಾಟಗಳನ್ನು ಯಾವ ರೀತಿ ಕೈಗೊಳ್ಳಬೇಕೆಂಬುದು ಇಂದು ಸಂಜೆ ಚರ್ಚೆ ಮಾಡಲಾಗುತ್ತದೆ.

ಲೋಕಸಭೆ ಚುನಾವಣೆಯಲ್ಲಿ ಬೇರೇನೂ ಬೆಳೆ ಬೆಯುವುದಿಲ್ಲ ಎಂದು ಆಡಳಿತ ಸರ್ಕಾರಕ್ಕೆ ಮನವರಿಕೆ ಆಗಿದೆ. ಹಾಗಾಗಿ ಹುಚ್ಚುಚ್ಚಾಗಿ ರಾಜ್ಯ ಸರ್ಕಾರ ನಡೆದುಕೊಳ್ಳುತ್ತಿದೆ. ಇದಕ್ಕೆ ತಕ್ಕ ಉತ್ತರವನ್ನು ನೀಡುತ್ತೇವೆ ಎಂದರು.

ರಾಷ್ಟ್ರಧ್ವಜ ಹಾರಿಸುವ ಬದಲು ಹನುಮ ಧ್ವಜ ಹಾರಿಸಿದ್ದು ಸರಿಯಲ್ಲ: ಸಿಎಂ ಸಿದ್ದರಾಮಯ್ಯ

ಶ್ರೀರಾಮಮಂದಿರ ಸ್ಥಾಪನೆಯಿಂದ ಇಡೀ ದೇಶದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ ಎನ್ನುವ ಭಯದಲ್ಲಿ ಅವರಿದ್ದಾರೆ. ರಾಜ್ಯ ಸರಿಕಾರ ಹತಾಶವಾಗಿ ಮನಬಂದಂತೆ ನಡೆದುಕೊಳ್ಳುತ್ತಿದೆ ಎಂದರು.

Latest Videos
Follow Us:
Download App:
  • android
  • ios