ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಗೂಂಡಾಗಳನ್ನು ಓಲೈಸುತ್ತಿದೆ. ಯಾರು ದೇಶದ್ರೋಹ ಕೆಲಸ ಮಾಡುತ್ತಿದ್ದಾರೆ, ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿದ್ದಾರೋ ಅವರಿಗೆ ಕಾಂಗ್ರೆಸ್ ಕುಮ್ಮಕ್ಕು ಕೊಡುತ್ತಿದೆ ಎಂದು ಮಾಜಿ ಶಾಸಕ, ಮಾಜಿ ಸ್ಪೀಕರ್‌ ಕೆ.ಜಿ. ಬೋಪಯ್ಯ ಆರೋಪಿಸಿದ್ದಾರೆ.

ಮಡಿಕೇರಿ (ಅ.4) : ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಗೂಂಡಾಗಳನ್ನು ಓಲೈಸುತ್ತಿದೆ. ಯಾರು ದೇಶದ್ರೋಹ ಕೆಲಸ ಮಾಡುತ್ತಿದ್ದಾರೆ, ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿದ್ದಾರೋ ಅವರಿಗೆ ಕಾಂಗ್ರೆಸ್ ಕುಮ್ಮಕ್ಕು ಕೊಡುತ್ತಿದೆ ಎಂದು ಮಾಜಿ ಶಾಸಕ, ಮಾಜಿ ಸ್ಪೀಕರ್‌ ಕೆ.ಜಿ. ಬೋಪಯ್ಯ ಆರೋಪಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಗೂಂಡಾಗಳನ್ನು ಓಲೈಸುತ್ತಿದೆ ಎಂಬುದಕ್ಕೆ ಮೊನ್ನೆ ಶಿವಮೊಗ್ಗದ ರಾಗಿಗುಡ್ಡೆಯಲ್ಲಿ ನಡೆದ ಘಟನೆಯೇ ಸಾಕ್ಷಿ. ಮುಸಲ್ಮಾನರನ್ನು ಓಲೈಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಹಿಂದೆ ಡಿಜೆಹಳ್ಳಿ, ಕೆಜೆ ಹಳ್ಳಿಯಲ್ಲಿ ಎಂಎಲ್ಎ ಮನೆಯನ್ನೇ ಸರ್ವನಾಶ ಮಾಡಿದವರು. ಅವರ ಮೇಲಿನ ಕೇಸನ್ನು ವಾಪಸ್ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಗಂಭೀರ ಪ್ರಕರಣವನ್ನು ವಾಪಸ್ ಪಡೆಯಲು ಯತ್ನಿಸುತ್ತಿದೆ. ಗಂಭೀರ ಪ್ರಕರಣವನ್ನು ವಾಪಸ್ ಪಡೆಯುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಎನ್ಐಎ ತನಿಖೆ ಮಾಡಿ ಚಾರ್ಜ್ ಶೀಟ್ ಸಲ್ಲಿಸಿರುವ ಪ್ರಕರಣವನ್ನು ವಾಪಸ್ ಪಡೆಯುವುದು ಸರಿಯಲ್ಲ.

ಬೆಂಗಳೂರಿನಲ್ಲಿ ರೌಡಿಗಳ ಪುಂಡಾಟ; ಗಲಾಟೆ ಮಾಡಬೇಡಿ ಎಂದವನಿಗೆ ಮಾರಕಾಸ್ತ್ರದಿಂದ ಹಲ್ಲೆ!

ಇದು ಅತ್ಯಂತ ಜನ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ ಕೆಲಸ. ಇವರು ಕಾನೂನು ಸುವ್ಯವಸ್ಥೆ ಹೇಗೆ ಕಾಪಾಡುತ್ತಾರೆ ಎಂದು ಬೋಪಯ್ಯ ಪ್ರಶ್ನಿಸಿದರು.

ಪುಂಡರಿಗೆ, ಗೂಂಡಾಗಳಿಗೆ, ದೇಶದ್ರೋಹಿಗಳಿಗೆ ಉತ್ತೇಜನ ಕೊಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಅಧಿಕಾರಿಗಳು ಕಾನೂನಿನಂತೆ ಕೆಲಸ ಮಾಡಲಿ. ಇಲ್ಲದಿದ್ದರೆ ಮುಂದೆ ನಿಮಗೂ ತೊಂದರೆಯಾಗಲಿದೆ.ಅಧಿಕಾರ ಇದೆಯೆಂದು ಇಂತಹ ಗಂಭೀರ ಪ್ರಕರಣಗಳನ್ನು ವಾಪಸ್ ಪಡೆಯಬಾರದು. ಇದರ ಬಗ್ಗೆ ಕಾಂಗ್ರೆಸ್ ಸರ್ಕಾರ ಯೋಚಿಸಲಿ. ಅದರಲ್ಲೂ ಗೃಹ ಸಚಿವರು ಮತ್ತು ಉಪಮುಖ್ಯಮಂತ್ರಿ ಯೋಚಿಸಲಿ ಎಂದು ಬೋಪಯ್ಯ ಹೇಳಿದರು.

ಬಿಹಾರದಂತೆ ರಾಜ್ಯದಲ್ಲೂ ಜಾತಿಗಣತಿ ಜಾರಿಗೆ ಸಿಎಂ ನಿರ್ಧರಿಸಬೇಕು: ಸತೀಶ ಜಾರಕಿಹೊಳಿ