ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯಲ್ಲಿ ನಮೋ ಭಾರತ ವತಿಯಿಂದ ಆಯೋಜನೆಗೊಂಡಿದ್ದ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಿದ್ದು, ಶರ್ಟ್ ಬಿಚ್ಚಿ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಈ ಘಟನೆಯಿಂದ ಬಿಜೆಪಿ ಕಾರ್ಯಕರ್ತರು ಸಹ ಸಹ ತಿರುಗಿಬಿದ್ದು ಸ್ಥಳದಲ್ಲಿ ಕಲ್ಲು ತೂರಾಟದಿಂದ ಪರಿಸ್ಥಿತಿ ಉದ್ವಿಗ್ನವಾಗಿದೆ.

ಚಿಕ್ಕಮಗಳೂರು (ಫೆ.8): ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯಲ್ಲಿ ನಮೋ ಭಾರತ ವತಿಯಿಂದ ಆಯೋಜನೆಗೊಂಡಿದ್ದ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಿದ್ದು, ಶರ್ಟ್ ಬಿಚ್ಚಿ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಈ ಘಟನೆಯಿಂದ ಬಿಜೆಪಿ ಕಾರ್ಯಕರ್ತರು ಸಹ ಸಹ ತಿರುಗಿಬಿದ್ದು ಸ್ಥಳದಲ್ಲಿ ಕಲ್ಲು ತೂರಾಟದಿಂದ ಪರಿಸ್ಥಿತಿ ಉದ್ವಿಗ್ನವಾಗಿದೆ.

ನಮೋ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳಕ್ಕೆ 20ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ತೆರಳಿದ್ದರು. ಕಾರ್ಯಕ್ರಮಕ್ಕೆ ಚಕ್ರವರ್ತಿ ಸೂಲಿಬೆಲೆ ಆಗಮಿಸಿದ್ದರು. ಈ ವೇಳೆ ಮಹಡಿ ಮೇಲೆ ನಿಂತು ಕಪ್ಪು ಬಾವುಟ ಪ್ರದರ್ಶನ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು. ಇದರಿಂದ ರೊಚ್ಚಿಗೆದ್ದ 200ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಸಿಡಿದೆದ್ದರು. ಕಾಂಗ್ರೆಸ್ ಕಾರ್ಯಕರ್ತರು ಇದ್ದ ಬಿಲ್ಡಿಂಗ್ ಗೆ ಕಲ್ಲು ತೂರಿದ ಬಿಜೆಪಿ ಕಾರ್ಯಕರ್ತರು. ನೋಡನೋಡ್ತಿದ್ದಂತೆ ಉದ್ವಿಗ್ನತೆ ಸ್ವರೂಪ ಪಡೆದ ವಿಜಯಪುರ ರಸ್ತೆ.

ಡಿಕೆ ಸುರೇಶ್, ವಿನಯ್ ಕುಲಕರ್ಣಿ ಇಬ್ಬರೂ ದೇಶದ್ರೋಹಿಗಳು; ಖರ್ಗೆಗೆ ತಾಕತ್ತಿದ್ದರೆ ಪಕ್ಷದಿಂದ ಕಿತ್ತುಹಾಕಲಿ: ಈಶ್ವರಪ್ಪ ಸವಾಲು!

ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಬಿಜೆಪಿ ಕಾರ್ಯಕರು ಆಕ್ರೋಶಗೊಂಡು ಲೈಟ್‌ ಕಂಬ ಹತ್ತಿ ಹುಡುಕಾಡಲು ತೊಡಗಿದರು. ಸಿಟಿ ರವಿ ಸಹ ಕಪ್ಪು ಬಾವುಟ ಪ್ರದರ್ಶಿಸಿದವರ ವಿರುದ್ಧ ವೇದಿಕೆ ಬಿಟ್ಟು ರಸ್ತೆಗಿಳಿದು ಬಂದರು. ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಮಹಡಿ ಮೇಲಿದ್ದ ಕಾಂಗ್ರೆಸ್ ಕಾರ್ಯಕರ್ತರ ರಕ್ಷಣೆಗೆ ಪೊಲೀಸರು ಮುಂದಾದರು. ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದವರನ್ನೇ ರಕ್ಷಣೆ ಮಾಡ್ತೀರಾ ಅಂತಾ ಪೊಲೀಸರ ಜೊತೆಗೆ ಮಾತಿನ ಚಕಮಕಿ ನಡೆಸಿದ ಬಿಜೆಪಿ ಕಾರ್ಯಕರ್ತರು ಈ ವೇಳೆ ನೂಕಾಟ ತಳ್ಳಾಟವಾಗಿ ಕ್ಷಣಾರ್ಧದಲ್ಲಿ ಉದ್ವಿಗ್ನಗೊಂಡ ಪರಿಸ್ಥಿತಿ.

ಸಿಎಂ ಸಿದ್ದರಾಮಯ್ಯ ಸೇರಿ ಹಲವರಿಗೆ ₹10 ಸಾವಿರ ದಂಡ ವಿಧಿಸಿದ ಹೈಕೋರ್ಟ್; ನ್ಯಾಯಾಲಯಕ್ಕೆ ಖುದ್ದು ಹಾಜರಾಗಲು ಸೂಚನೆ ಏನಿದು ಪ್ರಕರಣ?

ಸದ್ಯ ಘಟನೆ ಮಾಹಿತಿ ಪಡೆಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಚಿಕ್ಕಮಗಳೂರು ಎಸ್‌ಪಿ ವಿಕ್ರಂ ಅಮಟೆ. 20ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.