Anjanadri Hill: ನಂದಿಬೆಟ್ಟ ರೀತಿ ಅಂಜನಾದ್ರಿಯಲ್ಲಿ ರೋಪ್ ವೇ ನಿರ್ಮಾಣ: ಸಿಎಂ ಬೊಮ್ಮಾಯಿ
* ಕೊಪ್ಪಳ ಜಿಲ್ಲೆಯ ಅಂಜನಾದ್ರಿಯ ಸಕಲ ಅಭಿವೃದ್ಧಿಗೆ ಬದ್ಧ
* ನಂದಿ ಬೆಟ್ಟಕ್ಕೆ 93 ಕೋಟಿ, ವೆಚ್ಚದಲ್ಲಿ ರೋಪ್ ವೇ ನಿರ್ಮಾಣಕ್ಕೆ ಚಾಲನೆ
* ಆಂಜನಾದ್ರಿ ಬೆಟ್ಟಕ್ಕೂ ರೋಪ್ ವೇ ನಿರ್ಮಾಣಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ
ಚಿಕ್ಕಬಳ್ಳಾಪುರ(ಮಾ.02): ತಿರುಪತಿಯೇ ಆಂಜನೇಯ ಜನ್ಮಸ್ಥಳ ಎಂದು ತಿರುಮಲ ದೇವಸ್ಥಾನ ಆಡಳಿತ ಮಂಡಳಿ(ಟಿಟಿಡಿ) ಘೋಷಿಸಿದ ಬೆನ್ನಲ್ಲೇ ಚುರುಕಾಗಿರುವ ರಾಜ್ಯ ಸರ್ಕಾರ ಆಂಜನೇಯನ ಜನ್ಮಸ್ಥಳವೆಂದೇ ಪ್ರಸಿದ್ಧವಾಗಿರುವ ಕೊಪ್ಪಳ ಜಿಲ್ಲೆಯ ಅಂಜನಾದ್ರಿಯ ಸಕಲ ಅಭಿವೃದ್ಧಿಗೆ ಬದ್ಧ ಎಂದು ಘೋಷಿಸಿತ್ತು. ಇದೀಗ ಅಂಜನಾದ್ರಿ ಬೆಟ್ಟದಲ್ಲಿ ರೋಪ್ವೇ ನಿರ್ಮಾಣಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ತಾಲೂಕಿನ ನಂದಿಯಲ್ಲಿ ಮಂಗಳವಾರ ಶಿವರಾತ್ರಿ ಪ್ರಯುಕ್ತ ಹಮ್ಮಿಕೊಂಡಿದ್ದ ಶಿವೋತ್ಸವ ಕಾರ್ಯಕ್ರಮಕ್ಕೆ ಶಂಕನಾದ ಊದಿ ಚಾಲನೆ ನೀಡಿ ಮಾತನಾಡಿದ ಅವರು, ಈಗಾಗಲೇ ನಂದಿ ಬೆಟ್ಟಕ್ಕೆ 93 ಕೋಟಿ, ವೆಚ್ಚದಲ್ಲಿ ರೋಪ್ವೇ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಅದೇ ರೀತಿ ಹನುಮ ಜನ್ಮಸ್ಥಳವಾದ ಆಂಜನಾದ್ರಿ ಬೆಟ್ಟಕ್ಕೂ ರೋಪ್ವೇ ನಿರ್ಮಾಣಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
Hanuman Birthplace: ಅಯೋಧ್ಯೆ, ರಾಮಮಂದಿರ ಬಳಿಕ ಅಂಜನಾದ್ರಿ ಅಭಿವೃದ್ಧಿ: ಸಿಎಂ ಬೊಮ್ಮಾಯಿ
ಆಂಜನೇಯನ ಜನ್ಮಸ್ಥಳ ದಾಖಲೆ ಸಂಗ್ರಹ ಚುರುಕು
ಕೊಪ್ಪಳ: ಆಂಜನೇಯನ(Anjaneya) ಜನ್ಮಸ್ಥಳ(Birth Place) ಅಂಜನಾದ್ರಿಯನ್ನು ಅಭಿವೃದ್ಧಿಪಡಿಸಲು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ(Budget) ವಿಶೇಷ ಪ್ಯಾಕೇಜ್ ಘೋಷಿಸುವ ನಿರೀಕ್ಷೆಯಿದ್ದು, ಅದಕ್ಕಿಂತ ಮುನ್ನವೇ ‘ಅಂಜನಾದ್ರಿಯೇ ಆಂಜನೇಯನ ಜನ್ಮಸ್ಥಳ’ ಎಂದು ಘೋಷಿಸಲು ರಾಜ್ಯ ಸರ್ಕಾರ(Government of Karnataka) ಮುಂದಾಗಿದೆ ಎನ್ನಲಾಗಿದ್ದು, ಅದಕ್ಕೆ ಪೂರಕವಾಗಿ ದಾಖಲೆ ಸಂಗ್ರಹ ಕಾರ್ಯವನ್ನೂ ಚುರುಕುಗೊಳಿಸಿದೆ.
ಕೊಪ್ಪಳ(Koppal) ಜಿಲ್ಲಾಡಳಿತದಿಂದ ದಾಖಲೆಯನ್ನು ಮುಜರಾಯಿ ಇಲಾಖೆ ಸಂಗ್ರಹಿಸಿದೆ. ಇದಲ್ಲದೆ ನಾನಾ ಮೂಲದಿಂದ ದಾಖಲೆ ಸಂಗ್ರಹಿಸಲು ಮುಂದಾಗಿದೆ. ಇದಕ್ಕಾಗಿ ಫೆ. 23ರಂದು ಬೆಂಗಳೂರಿನಲ್ಲಿ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ(Shashikala Jolle) ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ಕರೆಯಲಾಗಿತ್ತು.
‘ಅಂಜನಾದ್ರಿಯೇ ಆಂಜನೇಯನ ಜನ್ಮಸ್ಥಳ’ ಎನ್ನುವ ವಿಷಯದ ಕುರಿತು ವಿಶೇಷ ಸಭೆಯನ್ನು ರಾಜ್ಯ ಸರ್ಕಾರ ಮೊದಲ ಬಾರಿಗೆ ಕರೆದಿರುವುದು ಮಹತ್ವದ ಬೆಳವಣಿಗೆಯಾಗಿದೆ. ಆಂಧ್ರದ(Andhra Pradesh) ಟಿಟಿಡಿ(TTD) ಕ್ಯಾತೆಗೆ ಕೊನೆಗೂ ಉತ್ತರ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಮುತುವರ್ಜಿ ವಹಿಸಿ ದಾಖಲೆ ಸಂಗ್ರಹಿಸುವಂತೆ ಸೂಚಿಸಿದ್ದಾರೆ. ಹೀಗಾಗಿ ಮುಜರಾಯಿ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಅವರು ಈ ಕುರಿತು ಕಾರ್ಯೋನ್ಮುಖರಾಗಿದ್ದಾರೆ.
ಬೆಂಗಳೂರಿನಲ್ಲಿ ಕರೆದಿರುವ ಸಭೆಯಲ್ಲಿ ಈಗಾಗಲೇ ಸಂಗ್ರಹಿಸಿರುವ ದಾಖಲೆಗಳು ಹಾಗೂ ಕೊಪ್ಪಳ ಜಿಲ್ಲಾಡಳಿತ ಒದಗಿಸಿರುವ ಮಾಹಿತಿಗಳನ್ನೊಳಗೊಂಡು ಚರ್ಚೆ ಮಾಡಲಾಗುತ್ತದೆ. ಅಲ್ಲದೆ ಮುಜರಾಯಿ ಇಲಾಖೆಯ ಆಗಮ ಪಂಡಿತರಿಂದಲೂ ಮಾಹಿತಿಯನ್ನು ಪಡೆಯಲಾಗುತ್ತದೆ.
Anjaneya Birth Place Dispute: ಹನುಮಂತ ಎರಡೆರಡು ಬಾರಿ ಜನಿಸಿದನೇ?: ಸಂಸದ ಕರಡಿ
ದಾಖಲೆಗಳ ಅಹ್ವಾನ:
ಈ ನಡುವೆ ಕೊಪ್ಪಳ ಜಿಲ್ಲಾಡಳಿತ ಅಂಜನಾದ್ರಿ(Anjandri) ಕುರಿತು ಅಗತ್ಯ ದಾಖಲೆಗಳನ್ನು ಬಹಿರಂಗವಾಗಿಯೇ ಅಹ್ವಾನಿಸಲು ಚಿಂತನೆ ನಡೆಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿ ‘ಅಂಜನಾದ್ರಿಯೇ ಆಂಜನೇಯನ ಜನ್ಮಸ್ಥಳ’ದ ದಾಖಲೆಗಳು ಇದ್ದವರು ಜಿಲ್ಲಾಡಳಿತಕ್ಕೆ ನೀಡುವಂತೆ ಕೋರಲು ಚಿಂತನೆ ನಡೆಸಿದೆ. ಈ ಮೂಲಕ ಅನೇಕರ ಬಳಿ ಇರುವ ದಾಖಲೆಗಳನ್ನು ಸೇರಿಸಿ ಕಿರುಹೊತ್ತಿಗೆ ತಯಾರಿಸಲು ಮುಂದಾಗಿದೆ.
ಅಮೆರಿಕ ಶಾಸನ ತಜ್ಞರ ಸಮರ್ಥನೆ
ಅಮೆರಿಕದ ಶಾಸನ ತಜ್ಞ ಫಿಲಿಫ್ ಲಿಟೆನ್ ಡಾಫರ್ ಅವರು ಹನುಮಂತ ಜನಿಸಿದ್ದು ಕೊಪ್ಪಳ ಜಿಲ್ಲೆಯ ಅಂಜನಾದ್ರಿಯ ಪ್ರದೇಶದಲ್ಲಿ ಎಂದು ತಮ್ಮ ಕೃತಿಯಲ್ಲಿ ಉಲ್ಲೇಖಿಸಿದ್ದಾನೆ. ‘ದ ಲೈಫ್ ಆಫ್ ಎ ಟೆಕ್ಸ್ಟ್’ ಕೃತಿಯಲ್ಲಿ ಈ ಕುರಿತು ಪ್ರಸ್ತಾಪ ಮಾಡಿದ್ದಾರೆ.
ಸಂಸದರಿಂದಲೂ ಸಂಗ್ರಹ:
ಸಂಸದ ಸಂಗಣ್ಣ ಕರಡಿ(Sanganna Karadi) ಅವರು ಸಂಶೋಧಕರು ಮತ್ತು ಇತಿಹಾಸ ತಜ್ಞರಿಂದಲೂ ಅಂಜನಾದ್ರಿಯ ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಪ್ರೊ. ಶರಣಬಸಪ್ಪ ಕೋಲ್ಕಾರ ಹಾಗೂ ಸಿದ್ಲಿಂಗಪ್ಪ ಕೊಟ್ನೆಕಲ್ ಅವರು ಬರೆದಿರುವ ಕೃತಿಗಳು ಸೇರಿದಂತೆ ಅನೇಕ ದಾಖಲೆಗಳನ್ನು ಸಂಗ್ರಹ ಮಾಡಿದ್ದಾರೆ. ಇವೆಲ್ಲವನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಹೇಳಿದ್ದಾರೆ.