ಆನೇಕಲ್ ತಾಲ್ಲೂಕಿನ ಉರಗನದೊಡ್ಡಿ ಬಳಿ ಇಳಿಜಾರು ರಸ್ತೆಯಲ್ಲಿ ಕಂಟೈನರ್ ಲಾರಿಯೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದಿದೆ. ಈ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿಗಣಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು (ಅ.26): ಆನೇಕಲ್ ತಾಲ್ಲೂಕಿನ ಉರಗನದೊಡ್ಡಿ ಗ್ರಾಮದ ಬಳಿ ಇಳಿಜಾರು ರಸ್ತೆಯಲ್ಲಿ ಶನಿವಾರ ಬೆಳಗ್ಗೆ ಭಯಾನಕ ರಸ್ತೆ ಅಪಘಾತ ಸಂಭವಿಸಿದೆ. ಕಂಟೈನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ. ಈ ದುರಂತದಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರಿಬ್ಬರ ದೇಹಗಳು ಕಂಟೈನರ್ ಕೆಳಗೆ ಸಿಲುಕಿಕೊಂಡಿದ್ದು, ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸಹಾಯದಿಂದ ಹೊರತೆಗೆಯಲಾಗಿದೆ. ಗಾಯಾಳುಗಳನ್ನು ತಕ್ಷಣವೇ ಆನೇಕಲ್‌ನ ಖಾಸಗಿ ಆಸ್ಪತ್ರೆಗೆ ರವಾನಿಸಲಾ.

ಇದನ್ನೂ ಓದಿ: ಇಂದು ಮಾಲಾ ಹುಟ್ಟು ಹಬ್ಬ, ನಿನ್ನೆ BMTC ಬಸ್‌ಗೆ ಬಲಿ! ಸಂಭ್ರಮದ ಮನೆಯಲ್ಲೀಗ ಕಣ್ಣೀರು, ನೋವು!

ಚಾಲಕನ ನಿರ್ಲಕ್ಷ್ಯದಿಂದ ದುರಂತ:

ಘಟನೆಯಲ್ಲಿ ಲಾರಿಯ ಚಾಲಕ ಮತ್ತು ಸಹಾಯಕ ಸೇರಿದಂತೆ ಒಟ್ಟು ಆರು ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಇಳಿಜಾರಿನಲ್ಲಿ ವೇಗವಾಗಿ ಬಂದ ಲಾರಿ ನಿಯಂತ್ರಣ ತಪ್ಪಿ ಉರುಳಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. 

ರಸ್ತೆ ಸುರಕ್ಷತೆಗೆ ಸಾರ್ವಜನಿಕರು ಒತ್ತಾಯ

ಜಿಗಣಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.ಈ ರಸ್ತೆಯಲ್ಲಿ ಹೆಚ್ಚುತ್ತಿರುವ ಅಪಘಾತಗಳು ಸ್ಥಳೀಯರಲ್ಲಿ ಆತಂಕ ಮೂಡಿಸಿವೆ. ರಸ್ತೆ ಸುರಕ್ಷತೆಗೆ ಗಮನ ಹರಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.