ಮಂಡ್ಯ ಜಿಲ್ಲೆ ಮದ್ದೂರು ಸುತ್ತಮುತ್ತ ಗುರುವಾರ ರಾತ್ರಿ ಧಾರಾಕಾರ ಮಳೆಯಾಗಿದ್ದು, ಮದ್ದೂರಿನ ನಗರಕೆರೆ ರಸ್ತೆಯ ವೈದ್ಯನಾಥಪುರ ಆರ್ಚರ್‌ ಬಳಿ ತುಂಬಿ ಹರಿಯುತ್ತಿದ್ದ ಕಿರು ನಾಲೆಗೆ ಬಿದ್ದು ಸುಮಾರು 60 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿ ಅಸುನೀಗಿದ್ದಾನೆ. 

ಬೆಂಗಳೂರು(ಸೆ.02):  ರಾಜಧಾನಿ ಬೆಂಗಳೂರು, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ ಸೇರಿ ರಾಜ್ಯದ ಕೆಲವೆಡೆ ಶುಕ್ರವಾರ ಮಳೆಯಾಗಿದೆ.

ವಿದ್ಯಾರಣ್ಯಪುರ, ಹೆಬ್ಬಾಳ, ಕೆಂಪಾಪುರ ಸೇರಿ ಬೆಂಗಳೂರಿನ ಕೆಲವೆಡೆ ಶುಕ್ರವಾರ ಮಧ್ಯಾಹ್ನದ ನಂತರ ಸಾಧಾರಣ ಮಳೆಯಾಯಿತು. ಚಿತ್ರದುರ್ಗದಲ್ಲಿ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಯಿತು. ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ ಜಿಲ್ಲೆಗಳ ಕೆಲವೆಡೆಯೂ ಮಳೆಯಾಗಿದ್ದು, ರೈತರಲ್ಲಿ ಹರ್ಷ ಮೂಡಿಸಿತು. 

ಕೊನೆಗೂ ಶುಭಸುದ್ದಿ: ಇನ್ನು 4 ದಿನ ರಾಜ್ಯದಲ್ಲಿ ಉತ್ತಮ ಮಳೆ ಸಾಧ್ಯತೆ

ಈ ಮಧ್ಯೆ, ಮಂಡ್ಯ ಜಿಲ್ಲೆ ಮದ್ದೂರು ಸುತ್ತಮುತ್ತ ಗುರುವಾರ ರಾತ್ರಿ ಧಾರಾಕಾರ ಮಳೆಯಾಗಿದ್ದು, ಮದ್ದೂರಿನ ನಗರಕೆರೆ ರಸ್ತೆಯ ವೈದ್ಯನಾಥಪುರ ಆರ್ಚರ್‌ ಬಳಿ ತುಂಬಿ ಹರಿಯುತ್ತಿದ್ದ ಕಿರು ನಾಲೆಗೆ ಬಿದ್ದು ಸುಮಾರು 60 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿ ಅಸುನೀಗಿದ್ದಾನೆ. ಈತ ಚಿಂದಿ ಆಯುವ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮದ್ದೂರಿನಲ್ಲಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮಳೆ ಕಾರಣಕ್ಕೆ ಚಲಿಸಲಾಗದೆ ವಾಹನಗಳು ರಸ್ತೆ ಬದಿ ಸಾಲುಗಟ್ಟಿ ನಿಂತಿದ್ದವು.