Asianet Suvarna News Asianet Suvarna News

'ಸಿದ್ದು ಹತ್ಯೆ' ವಿವಾದಾತ್ಮಕ ಹೇಳಿಕೆ; ಎಫ್‌ಐಆರ್‌ ರದ್ದು ಕೋರಿ ಹೈಕೋರ್ಟ್ ಗೆ ಅಶ್ವತ್ಥನಾರಾಯಣ

ಟಿಪ್ಪುವನ್ನು ಉರಿಗೌಡ-ನಂಜೇಗೌಡರು ಮುಗಿಸಿದಂತೆ ಸಿದ್ದರಾಮಯ್ಯ ಅವರನ್ನು ಮುಗಿಸಬೇಕು ಎಂಬ ಹೇಳಿಕೆ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಲು ಕೋರಿ ಮಾಜಿ ಸಚಿವ ಹಾಗೂ ಶಾಸಕ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಹೈಕೋರ್ಚ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಮಂಗಳವಾರ ವಿಚಾರಣೆ ನಡೆಯಲಿದೆ.

Controversial statement abt siddaramaiah ashwath naryana appeal to the High Court to quash the FIR rav
Author
First Published May 29, 2023, 9:43 PM IST

ಬೆಂಗಳೂರು (ಮೇ.29) : ಟಿಪ್ಪುವನ್ನು ಉರಿಗೌಡ-ನಂಜೇಗೌಡರು ಮುಗಿಸಿದಂತೆ ಸಿದ್ದರಾಮಯ್ಯ ಅವರನ್ನು ಮುಗಿಸಬೇಕು ಎಂಬ ಹೇಳಿಕೆ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಲು ಕೋರಿ ಮಾಜಿ ಸಚಿವ ಹಾಗೂ ಶಾಸಕ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಮಂಗಳವಾರ ವಿಚಾರಣೆ ನಡೆಯಲಿದೆ.

ಪ್ರಕರಣ ಸಂಬಂಧ ಮೈಸೂರಿನ ದೇವರಾಜ ಠಾಣೆಯ ಪೊಲೀಸರು ಮೇ 24ರಂದು ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್‌(FIR) ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಿರುವ ತಕರಾರು ಅರ್ಜಿಯಲ್ಲಿ ಶಾಸಕ ಅಶ್ವತ್ಥ ನಾರಾಯಣ(Dr CN ashwath naryana) ಕೋರಿದ್ದಾರೆ. ಜೊತೆಗೆ, ಅರ್ಜಿ ಇತ್ಯರ್ಥವಾಗುವರೆಗೆ ಎಫ್‌ಐಆರ್‌ಗೆ ತಡೆ ನೀಡಬೇಕು ಎಂದು ಮಧ್ಯಂತರ ಮನವಿ ಮಾಡಿದ್ದಾರೆ. ದೇವರಾಜ ಠಾಣಾ ಪೊಲೀಸರು ಮತ್ತು ದೂರುದಾರರಾದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಅವರನ್ನು ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿಸಲಾಗಿದೆ.

FIR ದಾಖಲಿಸಿದ್ದಕ್ಕೆ ಅಶ್ವತ್ಥ್‌ನಾರಾಯಣ ಆಕ್ರೋಶ

 

ಅಶ್ವತ್ಥ ನಾರಾಯಣ ಅವರ ಪರ ವಕೀಲ ಹಿರಿಯ ವಕೀಲೆ ಲಕ್ಷ್ಮೇ ಅಯ್ಯಂಗಾರ್‌ ಹಾಜರಾಗಿ, ಅರ್ಜಿದಾರರು ವಿವಾದಕ್ಕೆ ಕಾರಣವಾಗಿರುವ ಭಾಷಣ ಮಾಡಿ ಹಲವು ತಿಂಗಳು ಕಳೆದಿವೆ. ತಮ್ಮ ಭಾಷಣದ ಕುರಿತು ಸ್ಪಷ್ಟನೆ ಸಹ ನೀಡಿದ್ದಾರೆ. ಅದೊಂದು ಮುಗಿದ ಅಧ್ಯಾಯವಾಗಿದೆ. ಆದರೆ, ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದು ಕೆಲವೇ ದಿನದಲ್ಲಿ ಅರ್ಜಿದಾರರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಹಾಗಾಗಿ, ಅರ್ಜಿಯನ್ನು ಮಧ್ಯಾಹ್ನ ವಿಚಾರಣೆಗೆ ತುರ್ತಾಗಿ ಪರಿಗಣಿಸಬೇಕು ಎಂದು ಕೋರಿದರು.

ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ, ಮಂಗಳವಾರ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲಾಗುವುದು ಎಂದು ತಿಳಿಸಿತು.

ಏನಿದು ವಿವಾದ?:

2023ರ ಫೆ.15ರಂದು ಮಂಡ್ಯದ ಸಾತನೂರಿನ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅಂದು ಸಚಿವರಾಗಿದ್ದ ಅಶ್ವತ್ಥನಾರಾಯಣ ಅವರು, ಟಿಪ್ಪುವನ್ನು ಉರಿಗೌಡ-ನಂಜೇಗೌಡರು(Urigowda Nanjegowda) ಮುಗಿಸಿದಂತೆ ಸಿದ್ದರಾಮಯ್ಯ(Siddaramaiah) ಅವರನ್ನು ಮುಗಿಸಬೇಕು ಎಂಬುದಾಗಿ ಹೇಳಿಕೆ ನೀಡಿದ್ದರು. ಈ ಸಂಬಂಧ ಮೈಸೂರಿನ ಕೆಪಿಸಿಸಿ ವಕ್ತಾರ ಲಕ್ಷ್ಮಣ್‌ ಅವರು ಫೆ.17ರಂದು ದೂರು ನೀಡಿದ್ದರು. ಆ ದೂರು ಆಧರಿಸಿ ಮೇ 24ರಂದು ಮೈಸೂರಿನ ದೇವರಾಜ ಠಾಣಾ ಪೊಲೀಸರು, ಕ್ರಿಮಿನಲ್‌ ಬೆದರಿಕೆ ಹಾಗೂ ಗಲಭೆಗೆ ಪ್ರಚೋದನೆ ನೀಡಿದ ಅಪರಾಧ ಸಂಬಂಧ ಎಫ್‌ಐಆರ್‌ ದಾಖಲಿಸಿದ್ದರು. ಆ ನಂತರ ಪ್ರಕರಣವನ್ನು ಮಂಡ್ಯ ಠಾಣೆಗೆ ವರ್ಗಾಯಿಸಲಾಗಿದೆ.

ಇದೀಗ ಎಫ್‌ಐಆರ್‌ ಪ್ರಶ್ನಿಸಿರುವ ಅಶ್ವತ್ಥ ನಾರಾಯಣ ಅವರು, ‘ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲಿಸುವ ಏಕೈಕ ಉದ್ದೇಶದಿಂದ ಭಾಷಣ ಮಾಡಲಾಗಿತ್ತು. ಆ ಕುರಿತು ಸದನ ಮತ್ತು ಸಾರ್ವಜನಿಕವಾಗಿ ಸ್ಪಷ್ಟನೆ ನೀಡಿದ್ದೇನೆ. ಸಿದ್ದರಾಮಯ್ಯ ಅವರಿಗೆ ಅಗೌರವ ತೋರಿಸುವ ಉದ್ದೇಶ ಇರಲಿಲ್ಲ. ಅವರೊಂದಿಗೆ ಯಾವುದೇ ವೈಯಕ್ತಿಕ ಭಿನ್ನಾಭಿಪ್ರಾಯ ಸಹ ಹೊಂದಿಲ್ಲ. ತಮ್ಮ ಭಾಷಣದ ನಂತರ ಯಾವುದೇ ಗಲಭೆ ನಡೆದಿಲ್ಲ. ಪ್ರಕರಣ ಈಗಾಗಲೇ ಮುಗಿದ ಅಧ್ಯಾಯ. ಹೀಗಿದ್ದರೂ ಅನಗತ್ಯವಾಗಿ ಎಫ್‌ಐಆರ್‌ ದಾಖಲಿಸಲಾಗಿದೆ. ಘಟನೆ ನಡೆದು ಹಲವು ತಿಂಗಳು ಕಳೆದರೂ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಪೊಲೀಸರು ಒತ್ತಡಕ್ಕೆ ಮನಿದು ಎಫ್‌ಐಆರ್‌ ದಾಖಲಿಸಿದ್ದು, ಅದನ್ನು ರದ್ದುಪಡಿಸಬೇಕು’ ಎಂದು ಕೋರಿದ್ದಾರೆ.

ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯನನ್ನು ಹೊಡೆದು ಹಾಕಿ ಎಂದಿದ್ದ ಅಶ್ವತ್ಥ್‌ ವಿರುದ್ಧ ಎಫ್‌ಐಆರ್‌

ಅಲ್ಲದೆ, ಎಫ್‌ಐಆರ್‌ಗೆ ತಡೆ ನೀಡದೆ ಹೋದರೆ ಶಾಸಕರಾಗಿರುವ ತಮಗೆ ಸಮಸ್ಯೆಯಾಗಲಿದೆ. ಆದ್ದರಿಂದ ಎಫ್‌ಐಆರ್‌ಗೆ ತಡೆ ನೀಡಬೇಕು ಎಂದು ಮಧ್ಯಂತರ ಮನವಿ ಮಾಡಿದ್ದಾರೆ.

Follow Us:
Download App:
  • android
  • ios