ಕುವೆಂಪು ವಿರಚಿತ ‘ಜಯ ಭಾರತ ಜನನಿಯ ತನುಜಾತೇ’ ನಾಡಗೀತೆಗೆ ಬೌದ್ದರುದ್ಯಾನ ಪದ ಸೇರ್ಪಡೆ ಶಿಫಾರಸಿಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು (ಜು.18): ಕುವೆಂಪು ವಿರಚಿತ ‘ಜಯ ಭಾರತ ಜನನಿಯ ತನುಜಾತೇ’ ನಾಡಗೀತೆಗೆ ಬೌದ್ದರುದ್ಯಾನ ಪದ ಸೇರ್ಪಡೆ ಶಿಫಾರಸಿಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಸ್ಪಷ್ಟಪಡಿಸಿದ್ದಾರೆ.

 ಶುಕ್ರವಾರ ಈ ಕುರಿತು ಸ್ಪಷ್ಟೀಕರಣ ನೀಡಿರುವ ಅವರು, ರಾಷ್ಟ್ರಕವಿ ಕುವೆಂಪು ಅವರು ರಚಿಸಿದ ಜಯ ಭಾರತ ಜನನಿಯ ತನುಜಾತೇ ನಾಡಗೀತೆಗೆ ಬೌದ್ದರುದ್ಯಾನ ಸಾಲು ಸೇರಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಮಿತಿ ರಚಿಸಿತ್ತು ಎಂಬುದು ಸತ್ಯಕ್ಕೆ ದೂರವಾದ ಸಂಗತಿ ಎಂದಿದ್ದಾರೆ. 

ತಜ್ಞರ ಸಮಿತಿ ರಚಿಸಿದ್ದು ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ. ಸರ್ಕಾರದ ಆದೇಶದ ಪ್ರಕಾರ ಸಮಿತಿ ಅಧ್ಯಕ್ಷನಾಗಿದ್ದ ನಾನು ಗೌರವಾನ್ವಿತ ಸದಸ್ಯರ ಅಭಿಪ್ರಾಯವನ್ನು ಕ್ರೋಢೀಕರಿಸಿ ಸಂಸ್ಕೃತಿ ಇಲಾಖೆಗೆ ಸಲ್ಲಿಸಿ ನನ್ನ ಕರ್ತವ್ಯ ಪೂರೈಸಿದ್ದೇನೆ ಎಂದಿದ್ದಾರೆ.

ಇದರ ಹೊರತಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೂ ಈ ವಿಷಯಕ್ಕೂ ಯಾವುದೇ ಸಂಬಂಧವಿಲ್ಲ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸರ್ವ ಸದಸ್ಯರ ಸಭೆಯಲ್ಲಿ ಈ ವಿಷಯದ ಬಗೆಗೆ ಚರ್ಚೆಯೂ ಆಗಿಲ್ಲ ಎಂದು ಪುರುಷೋತ್ತಮ ಬಿಳಿಮಲೆ ಸ್ಪಷ್ಟಪಡಿಸಿದ್ದಾರೆ.