ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಮತಾಂತರ ವಿಚಾರ ಕಳೆದ ಎರಡು ದಿನಗಳಿಂದ ಭಾರೀ ಸದ್ದು ಮಾಡುತ್ತಿದೆ. ಮಸೀದಿ ಹೋರಾಟದ ಬಳಿಕ ಇದೀಗ ಬಲವಂತದ ಮತಾಂತರದ ವಿರುದ್ಧ ಹಿಂದೂಪರ ಸಂಘಟನೆಗಳು ಸಿಡಿದೆದ್ದಿವೆ. ಮುಸ್ಲಿಂ ಮತ್ತು ಕ್ರಿಶ್ಚಿಯನ್ ಮಿಷನರಿಗಳ ವಿರುದ್ಧ ಆರೋಪ ಮಾಡಿರುವ ಹಿಂದೂ ಸಂಘಟನೆಗಳು, ಸದ್ದಿಲ್ಲದೆ ಅಮಾಯಕರನ್ನು ಟಾರ್ಗೆಟ್ ಮಾಡಿ, ಲಕ್ಷ ಲಕ್ಷ ಹಣದ ಆಮಿಷ ಒಡ್ಡುವ ಮೂಲಕ ಮತಾಂತರಗೊಳಿಸುತ್ತಿರುವ ಆರೋಪ ಮಾಡಿವೆ.

ಮಂಡ್ಯ (ಏ.15): ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಮತಾಂತರ ವಿಚಾರ ಕಳೆದ ಎರಡು ದಿನಗಳಿಂದ ಭಾರೀ ಸದ್ದು ಮಾಡುತ್ತಿದೆ. ಮಸೀದಿ ಹೋರಾಟದ ಬಳಿಕ ಇದೀಗ ಬಲವಂತದ ಮತಾಂತರದ ವಿರುದ್ಧ ಹಿಂದೂಪರ ಸಂಘಟನೆಗಳು ಸಿಡಿದೆದ್ದಿವೆ. ಮುಸ್ಲಿಂ ಮತ್ತು ಕ್ರಿಶ್ಚಿಯನ್ ಮಿಷನರಿಗಳ ವಿರುದ್ಧ ಆರೋಪ ಮಾಡಿರುವ ಹಿಂದೂ ಸಂಘಟನೆಗಳು, ಸದ್ದಿಲ್ಲದೆ ಅಮಾಯಕರನ್ನು ಟಾರ್ಗೆಟ್ ಮಾಡಿ, ಲಕ್ಷ ಲಕ್ಷ ಹಣದ ಆಮಿಷ ಒಡ್ಡುವ ಮೂಲಕ ಮತಾಂತರಗೊಳಿಸುತ್ತಿರುವ ಆರೋಪ ಮಾಡಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಲವಂತದ ಮತಾಂತರದ ವಿರುದ್ಧ ಶ್ರೀರಂಗಪಟ್ಟಣ ಹಿಂದೂ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ಇಂದು ಬೆಳಿಗ್ಗೆ 10:30ಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆಗೆ ಕರೆ ನೀಡಲಾಗಿದೆ. ಶ್ರೀರಂಗಪಟ್ಟಣ ಬಸ್ ನಿಲ್ದಾಣದಿಂದ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿವರೆಗೆ ನಡೆಯಲಿರುವ ಈ ಮೆರವಣಿಗೆಯ ಮೂಲಕ ಬಲವಂತದ ಮತಾಂತರವನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಒತ್ತಾಯಿಸಲಾಗುವುದು ಎಂದು ಸಂಘಟನೆಗಳು ತಿಳಿಸಿವೆ.

ಇದನ್ನೂ ಓದಿ: ಮಂಡ್ಯ: ಮತಾಂತರಕ್ಕೆ ಒಪ್ಪದ ಪತ್ನಿ, ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ?

ಇತ್ತೀಚೆಗೆ ಶ್ರೀರಂಗಪಟ್ಟಣದಲ್ಲಿ ನಡೆದ ಘಟನೆಯೊಂದರಲ್ಲಿ, ಮತಾಂತರಕ್ಕೆ ಒಪ್ಪದ ಪತ್ನಿ ಹಾಗೂ ಅತ್ತೆಯ ಮೇಲೆ ಗಂಭೀರ ಹಲ್ಲೆ ನಡೆಸಿದ ಪ್ರಕರಣವೂ ಹಿಂದೂ ಸಂಘಟನೆಗಳ ಆಕ್ರೋಶ, ಹೋರಾಟಕ್ಕೆ ಕಾರಣವಾಗಿದೆ.ಈ ಘಟನೆಯಿಂದ ಕೆರಳಿರುವ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು, ಮತಾಂತರಕ್ಕೆ ಒಳಗಾಗದವರ ಮೇಲೆ ದೌರ್ಜನ್ಯ ನಡೆಸುತ್ತಿರುವವರನ್ನು ಕಾನೂನಿನ ಕಟಕಟೆಗೆ ಒಳಪಡಿಸಬೇಕೆಂದು ಪಟ್ಟು ಹಿಡಿದಿದ್ದಾರೆ.

ಬಲವಂತದ ಮತಾಂತರದ ವಿರುದ್ಧ ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಬೃಹತ್ ಜನಾಂದೋಲನಕ್ಕೆ ಕರೆ ನೀಡಲಾಗಿದ್ದು, ಶ್ರೀರಂಗಪಟ್ಟಣದಲ್ಲಿ ಇಂದು ನಡೆಯಲಿರುವ ಈ ಹೋರಾಟವು ರಾಜ್ಯದಾದ್ಯಂತ ಗಮನ ಸೆಳೆಯುವ ಸಾಧ್ಯತೆಯಿದೆ.