Asianet Suvarna News Asianet Suvarna News

ಮಡಿವಾಳ ಸಮುದಾಯಕ್ಕೆ ನನ್ನ ತಂದೆ ಸ್ವತಃ ಕೈಯಿಂದ ಕುಕ್ಕರ್ ಕೊಟ್ಟಿಲ್ಲ; ಉಲ್ಟಾ ಹೊಡೆದ ಸಿಎಂ ಪುತ್ರ !

'ಸಿಎಂ ಸಿದ್ದರಾಮಯ್ಯ ಚುನಾವಣೆಗೋಸ್ಕರ ಕುಕ್ಕರ್ ಕೊಟ್ಟಿದ್ದಾರೆ ಅಂತಾ ಎಲ್ಲೂ ಹೇಳಿಲ್ಲ ಎಂದು ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

Cooker distribution issue for Madiwala community issue yathindra siddaramaiah statement at mysuru rav
Author
First Published Sep 22, 2023, 7:30 PM IST

ಮೈಸೂರು (ಸೆ.22): 'ಸಿಎಂ ಸಿದ್ದರಾಮಯ್ಯ ಚುನಾವಣೆಗೋಸ್ಕರ ಕುಕ್ಕರ್ ಕೊಟ್ಟಿದ್ದಾರೆ ಅಂತಾ ಎಲ್ಲೂ ಹೇಳಿಲ್ಲ ಎಂದು ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಮಡಿವಾಳ ಸಮುದಾಯಕ್ಕೆ ಕುಕ್ಕರ್ ಹಾಗೂ ಐರನ್ ಬಾಕ್ಸ್ ಹಂಚಿಕೆ ವಿಚಾರ ಸಂಬಂಧ ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಹೇಳಿದ್ದೇ ಒಂದು, ಮಾಧ್ಯಮಗಳು ತೋರಿಸುತ್ತಿರುವುದೇ ಇನ್ನೊಂದು. ಆದರೂ ನಾನು ಮಾತನಾಡುವಾಗ ಸರಿಯಾಗಿ ಮಾತನಾಡದೇ ಇರಬಹುದು. ಆದರೆ ನನ್ನ ಹೇಳಿಕೆ ಆ ರೀತಿ ಅರ್ಥವನ್ನೂ ಕೊಟ್ಟಿರಬಹುದು. ಅದು ನಡೆದಿರುವುದು ಚುನಾವಣೆ ನೀತಿ ಸಂಹಿತೆಗೂ ಮುಂಚೆ ಎನ್ನುವ ಮೂಲಕ ಉಲ್ಟಾ ಹೊಡೆದರು.

ವಿಧಾನಸಭಾ ಚುನಾವಣೇಲಿ ಕುಕ್ಕರ್‌, ಇಸ್ತ್ರಿ ಪೆಟ್ಟಿಗೆ ಕೊಟ್ಟು ಸಿದ್ದರಾಮಯ್ಯ ಗೆದ್ದಿದ್ದಾರೆ; ಕೆಎಸ್ ಈಶ್ವರಪ್ಪ ಆರೋಪ

ಜನವರಿ 26 ರಂದು ಮಡಿವಾಳ ಸಂಘದ ರಾಜ್ಯಾಧ್ಯಕ್ಷ ನಂಜಪ್ಪ ಅವರ ಹುಟ್ಟುಹಬ್ಬದ ಪ್ರಯಕ್ತ ವಿತರಣೆ ಮಾಡಲಾಗಿದೆ. ನನ್ನ ತಂದೆ ಸಿಎಂ ಸಿದ್ದರಾಮಯ್ಯ ಸ್ವತಃ ಕೈಯಿಂದ ಕೂಡ ಕೊಟ್ಟಿಲ್ಲ. ಇದರ ಬಗ್ಗೆ ನಾನು ಮಾಡಿದ್ದು. ಆದರೆ ಮಾಧ್ಯಮದಲ್ಲಿ ಚುನಾವಣೆಗಾಗಿ ಹಂಚಿಕೆ ಮಾಡಲಾಗಿದೆ ಎಂದು ತೋರಿಸುತ್ತಿದ್ದಾರೆ. ಆ ಕಾರ್ಯಕ್ರಮದ ವೀಡಿಯೋ, ಪೋಟೋಗಳೂ ಇವೆ. ಈಗಲೂ ನೋಡಿ ಪರಿಶೀಲಿಸಬಹುದುದ. ಅದರಲ್ಲಿ ನಮ್ಮ ತಂದೆಯವರು ಕೈಯಿಂದ ದುಡ್ಡುಕೊಟ್ಟಿದ್ದಾಗಲಿ, ಕುಕ್ಕರ್ ಹಂಚಿದ್ದಾಗಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.

Follow Us:
Download App:
  • android
  • ios