ಬೆಂಗಳೂರು (ನ.09):  ಭಾನುವಾರ 2740 ಮಂದಿಯಲ್ಲಿ ಕೊರೋನಾ ಸೋಂಕಿನ ಹೊಸ ಪ್ರಕರಣಗಳು ಪತ್ತೆಯಾಗಿವೆ. 2,360 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 22 ಮಂದಿ ಮೃತಪಟ್ಟಿದ್ದಾರೆ.

ಸದ್ಯ ರಾಜ್ಯದಲ್ಲಿ 33,638 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 884 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಈವರೆಗೆ 8.46 ಲಕ್ಷ ಮಂದಿಗೆ ಕೊರೋನಾ ಸೋಂಕು ತಾಗಿದ್ದು, 8.01 ಲಕ್ಷ ಮಂದಿ ಗುಣಮುಖರಾಗಿದ್ದಾರೆ. 11,391 ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಎಚ್ಚರ ತಪ್ಪಿದ್ರೆ ಅಪಾಯ ಫಿಕ್ಸ್‌: ಚಳಿಗಾಲದಲ್ಲಿ ಕೊರೋನಾ ಆಯಸ್ಸು ಹೆಚ್ಚು...!

ಭಾನುವಾರ ದಾಖಲೆಯು 1.17 ಲಕ್ಷ ಕೊರೋನಾ ಪರೀಕ್ಷೆ ನಡೆಸಲಾಗಿದೆ. ನವೆಂಬರ್‌ 5 ರಂದು 1.16 ಲಕ್ಷ ಪರೀಕ್ಷೆ ನಡೆಸಿದ್ದು ಈವರೆಗಿನ ದಾಖಲೆಯಾಗಿತ್ತು. ಈವರೆಗೆ ಒಟ್ಟು 87.38 ಲಕ್ಷ ಜನರಿಗೆ ಪರೀಕ್ಷೆ ಮಾಡಲಾಗಿದೆ. 2271 ಮಂದಿ ಆಪ್ತ ಸಮಾಲೋಚನೆ ಸೇವೆ ಸೌಲಭ್ಯವನ್ನು ಬಳಸಿಕೊಂಡಿದ್ದಾರೆ.

ಬೆಂಗಳೂರು ನಗರದಲ್ಲಿ 11 ಮಂದಿ ಕೊರೋನಾದಿಂದ ಮೃತರಾಗಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ 3, ಬೆಳಗಾವಿ, ಧಾರವಾಡ, ಮೈಸೂರು 2, ಹಾವೇರಿ ಮತ್ತು ದಕ್ಷಿಣ ಕನ್ನಡದಲ್ಲಿ ತಲಾ ಒಬ್ಬರು ಸೋಂಕಿನಿಂದ ಮರಣವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ರಾಜ್ಯದಲ್ಲೇ ಅಧಿಕ 1579 ಹೊಸ ಪ್ರಕರಣಗಳು ದಾಖಲಾಗಿವೆ.