ವಿಶ್ವವನ್ನೇ ಬೆಚ್ಚಿಬೀಳಿಸಿದ್ದ ಕೊರೋನಾ ಮಹಾಮಾರಿ ರಾಜ್ಯಕ್ಕೆ ಮತ್ತೆ ವಕ್ಕರಿಸಿದ್ದು, ಬೆಳಗಾವಿ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ತಲಾ ಒಬ್ಬರಿಗೆ ಕೊವೀಡ್ ಪಾಸಿಟಿವ್ ದೃಢಪಟ್ಟಿದೆ.
ಬೆಳಗಾವಿ / ಬಳ್ಳಾರಿ (ಮೇ.25): ವಿಶ್ವವನ್ನೇ ಬೆಚ್ಚಿಬೀಳಿಸಿದ್ದ ಕೊರೋನಾ ಮಹಾಮಾರಿ ರಾಜ್ಯಕ್ಕೆ ಮತ್ತೆ ವಕ್ಕರಿಸಿದ್ದು, ಬೆಳಗಾವಿ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ತಲಾ ಒಬ್ಬರಿಗೆ ಕೊವೀಡ್ ಪಾಸಿಟಿವ್ ದೃಢಪಟ್ಟಿದೆ. ನ್ಯುಮೋನಿಯಾದಿಂದ ಬಳಲುತ್ತಿದ್ದ ಬೆಳಗಾವಿ ನಗರದ 25 ವರ್ಷದ ಗರ್ಭಿಣಿಗೆ ಕೊವೀಡ್ ವೈರಸ್ ಕಂಡು ಬಂದಿದ್ದು, ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇವರ ಜತೆಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 8 ಜನರ ಪರೀಕ್ಷೆ ಮಾಡಲಾಗಿದ್ದು, ಎಲ್ಲರ ರಿಪೋರ್ಟ್ ನೆಗೆಟಿವ್ ಬಂದಿದೆ. ಕೊರೋನಾ ಮುಂಜಾಗ್ರತಾ ಕ್ರಮಕ್ಕಾಗಿ ಸರ್ಕಾರದಿಂದ ಗೈಡ್‌ಲೈನ್ಸ್ ಬಂದಿದ್ದು, ಸದ್ಯ ಆತಂಕ ಪಡುವ ಸ್ಥಿತಿ ಇಲ್ಲ ಎಂದು ಬೆಳಗಾವಿ ಡಿಎಚ್ಒ ಡಾ.ಈಶ್ವರ ಗಡಾದ ತಿಳಿಸಿದ್ದಾರೆ.
ಬಳ್ಳಾರಿಯಲ್ಲಿ ಕೊವೀಡ್ ಪಾಸಿಟಿವ್ ಆಗಿದ್ದ 40 ವರ್ಷದ ವ್ಯಕ್ತಿ ಗುಣಮುಖರಾಗಿ ಚೇತರಿಸಿಕೊಂಡಿದ್ದಾರೆ. ವಿಜಯನಗರ ಜಿಲ್ಲೆ ಹೊಸಪೇಟೆಯ 54 ವರ್ಷದ ಮಹಿಳೆಯಲ್ಲಿ ಕೊರೋನಾ ದೃಢಪಟ್ಟಿದ್ದು, ಹೋಂ ಐಸೋಲೇಷನ್‌ನಲ್ಲಿದ್ದಾರೆ. ಈ ಇಬ್ಬರೂ ಉಸಿರಾಟದ ಸಮಸ್ಯೆ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾಗ ಕೊರೋನಾ ತಪಾಸಣೆ ಮಾಡಲಾಗಿತ್ತು. ಆಗ ಇಬ್ಬರಿಗೆ ಪಾಸಿಟಿವ್ ದೃಢಪಟ್ಟಿದೆ. ಹೊಸಪೇಟೆ ಮಹಿಳೆ ಮುಂಬಯಿ ಟ್ರಾವೆಲ್ ಹಿಸ್ಟರಿ ಹೊಂದಿದ್ದು, ಬಳ್ಳಾರಿ ವ್ಯಕ್ತಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ ಎಂದು ಬಳ್ಳಾರಿ ಡಿಎಚ್ಒ ಡಾ.ಎಲ್.ಆರ್.ಶಂಕರ ನಾಯ್ಕ ಮಾಹಿತಿ ನೀಡಿದ್ದಾರೆ.
ನ್ಯುಮೋನಿಯಾದಿಂದ ಬಳಲುತ್ತಿದ್ದ ಬೆಳಗಾವಿ ನಗರದ 25 ವರ್ಷದ ಗರ್ಭಿಣಿಗೆ ಕೊವೀಡ್ ವೈರಸ್ ಕಂಡು ಬಂದಿದ್ದು, ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇವರ ಜತೆಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 8 ಜನರ ಪರೀಕ್ಷೆ ಮಾಡಲಾಗಿದ್ದು, ಎಲ್ಲರ ರಿಪೋರ್ಟ್ ನೆಗೆಟಿವ್ ಬಂದಿದೆ. ಕೊರೋನಾ ಮುಂಜಾಗ್ರತಾ ಕ್ರಮಕ್ಕಾಗಿ ಸರ್ಕಾರದಿಂದ ಗೈಡ್‌ಲೈನ್ಸ್ ಬಂದಿದ್ದು, ಸದ್ಯ ಆತಂಕ ಪಡುವ ಸ್ಥಿತಿ ಇಲ್ಲ ಎಂದು ಬೆಳಗಾವಿ ಡಿಎಚ್ಒ ಡಾ.ಈಶ್ವರ ಗಡಾದ ತಿಳಿಸಿದ್ದಾರೆ.