ಬೆಂಗಳೂರು(ಆ.13):  ಡಿ.ಜೆ.ಹಳ್ಳಿ ಗಲಭೆ ವೇಳೆ ಪೊಲೀಸರ ಗುಂಡೇಟಿನಿಂದ ಮೃತಪಟ್ಟ ಮೂವರ ಪೈಕಿ ಇಬ್ಬರಿಗೆ ವ್ಯಕ್ತಿಗಳಿಗೆ ಮರಣೋತ್ತರ ಪರೀಕ್ಷೆಯಲ್ಲಿ ಕೋವಿಡ್‌ ಸೋಂಕು ದೃಢಪಟ್ಟಿದೆ.

"

ಮಂಗಳವಾರ ರಾತ್ರಿ ಡಿ.ಜೆ.ಹಳ್ಳಿಯಲ್ಲಿ ಸ್ಥಳೀಯ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ನಿವಾಸ ಹಾಗೂ ಪೊಲೀಸ್‌ ಠಾಣೆ ಮುಂಭಾಗ ಪುಂಡರ ಗುಂಪು ನಡೆಸಿದ ಗಲಭೆ ನಿಯಂತ್ರಿಸಲು ಪೊಲೀಸರು ನಡೆಸಿದ ಫೈರಿಂಗ್‌ ವೇಳೆ ಮೂವರು ಮೃತಪಟ್ಟಿದ್ದರು. ಬಳಿಕ ಮೃತದೇಹಗಳನ್ನು ಬೌರಿಂಗ್‌ ಆಸ್ಪತ್ರೆಗೆ ವರ್ಗಾಯಿಸಿ ಮರಣೋತ್ತರ ಕೋವಿಡ್‌ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ, ಇಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಗಲಭೆಯಲ್ಲಿ ಮನೆ ಕಳೆದುಕೊಂಡ ಶಾಸಕ ಅಖಂಡ ಹೋಟೆಲ್‌ನಲ್ಲಿ!

ಸೋಂಕು ದೃಢಪಟ್ಟ ಇಬ್ಬರ ಮೃತದೇಹವನ್ನು ಸರ್ಕಾರದ ಮಾರ್ಗಸೂಚಿ ಅನುಸಾರ ಸುರಕ್ಷಾ ಕ್ರಮಗಳನ್ನು ಅನುಸರಿಸಿ ಬಿಬಿಎಂಪಿ ಸಿಬ್ಬಂದಿ ಟ್ಯಾನರಿ ರಸ್ತೆಯ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಸಿದ್ದಾರೆ. ಇನ್ನು, ಸೋಂಕು ದೃಢಪಡದ ಮತ್ತೋರ್ವ ವ್ಯಕ್ತಿಯ ಮೃತದೇಹವನ್ನು ಕುಟುಂಬವರಿಗೆ ಹಸ್ತಾಂತರಿಸಲಾಗಿದೆ. ಅವರು ಕೂಡ ಇದೇ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.