ಬೆಂಗಳೂರು, (ಏ.03) : ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆರ್ಭಟ ಜೋರಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ನಿಯಮ ಜಾರಿಗೆ ತಂದಿದೆ.

ಇನ್ನು ಇಂದು (ಶನಿವಾರ) ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ನೋಡುವುದಾದ್ರೆ, 4373 ಜನರಿಗೆ ಕೊರೋನಾ ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿದ್ದು, 19 ಸೋಂಕಿತರು ಸಾವನ್ನಪ್ಪಿದ್ದಾರೆ.

ನೈಟ್ ಕರ್ಫ್ಯೂ, ವೀಕೆಂಡ್ ಲಾಕ್‍ಡೌನ್ ಆಗುತ್ತಾ? ಸಚಿವ ಸುಧಾಕರ್​ ಕೊಟ್ಟ ಸ್ಪಷ್ಟನೆ ಇದು!

 ಇದರಿಂದಾಗಿ ಸೋಂಕಿತರ ಸಂಖ್ಯೆ 10,10,602ಕ್ಕೇರಿದೆ. ಇವರಲ್ಲಿ ಕಳೆದ 24 ಗಂಟೆಗಳಲ್ಲಿ 4373 ಸೋಂಕಿತರು ಸೇರಿದಂತೆ ಇದುವರೆಗೆ 961359 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 3002 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು 6 ಜನ ಸೋಂಕಿತರು ಮೃತಪಟ್ಟಿದ್ದು, 26,554 ಸಕ್ರಿಯ ಪ್ರಕರಣಗಳು ಇವೆ.

ಜಿಲ್ಲಾವಾರು ಸಂಖ್ಯೆ