ರಾಜ್ಯದಲ್ಲಿ ಕೊರೋನಾ ಅಬ್ಬರ ಮುಂದುವರೆದಿದ್ದು, ಶುಕ್ರವಾರ ಕೊರೋನಾ ಪಾಸಿಟಿವ್ ಕೇಸ್ ಹಾಗೂ ಸಾವನ್ನಪ್ಪಿದ್ದವರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ.

ಬೆಂಗಳೂರು, (ಏ.07): ರಾಜ್ಯದಲ್ಲಿ ಕೊರೋನಾ ಸ್ಫೋಟವಾಗಿದ್ದು, ಇಂದು (ಶುಕ್ರವಾರ) ಒಂದೇ ದಿನ 7955 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 46 ಜನ ಸೋಂಕಿತರು ಮೃತಪಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 10,48,085 ಕ್ಕೆ ಏರಿಕೆಯಾಗಿದ್ರೆ, ಮೃತಪಟ್ಟವರ ಸಂಖ್ಯೆ 12,813ಕ್ಕೇರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕದಲ್ಲಿ ನೈಟ್ ಕರ್ಫ್ಯೂ: ಏನಿರುತ್ತೆ? ಏನಿಲ್ಲ? ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 3220 ಸೋಂಕಿತರು ಗುಣಮುಖರಾಗಿದ್ದು, ಈ ಮೂಲಕ ಇದುವರೆಗೆ 9,77,169 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 

ಇನ್ನು ರಾಜ್ಯದಲ್ಲಿ ಬರೋಬ್ಬರಿ 58,084 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 378 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಕೂಡ ಕೊರೋನಾ ಸ್ಫೋಟವಾಗಿದ್ದು, 5576 ಜನರಿಗೆ ಸೋಂಕು ತಗುಲಿದೆ. 29 ಜನ ಸೋಂಕಿತರು ಸಾವನ್ನಪ್ಪಿದ್ದು, 42,525 ಸಕ್ರಿಯ ಪ್ರಕರಣಗಳಿವೆ.