ಕರ್ನಾಟಕದಲ್ಲಿ ಕೊರೋನಾ ಎರಡನೇ ಅಬ್ಬರ ಜೋರಾಗಿದ್ದು, ದಿನದಿಂದ ದಿನಕ್ಕೆ ಪಾಸಿಟಿವ್ ಕೇಸ್‌ಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದೆ.

ಬೆಂಗಳೂರು, (ಮಾ.28): ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರು ಜೋರಾಗುತ್ತಿದೆ. ಇಂದು (ಭಾನುವಾರ) ಒಂದೇ ದಿನ 3082 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, 12 ಜನ ಸೋಂಕಿತರು ಮೃತಪಟ್ಟಿದ್ದಾರೆ. 

Add Asianetnews Kannada as a Preferred SourcegooglePreferred

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,87,012 ಕ್ಕೆ ಏರಿಕೆಯಾಗಿದ್ರೆ, ಇದುವರೆಗೆ 12,504 ಜನ ಸೋಂಕಿತರು ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಆಘಾತಕಾರಿ ಸುದ್ದಿ: ಇಂತಹ ಲಕ್ಷಣ ಇದ್ದವರಲ್ಲೇ ಕೊರೋನಾ ಸೋಂಕು ಹೆಚ್ಚಳ..!

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1285 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,51,412 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 23,037 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 204 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವತ್ತು ಬೆಂಗಳೂರಿನಲ್ಲಿ 2004 ಜನರಿಗೆ ಸೋಂಕು ತಗುಲಿದ್ದು, 7 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ಸಿಲಿಕಾನ್ ಸಿಟಿಯಲ್ಲಿ 15,882 ಸಕ್ರಿಯ ಪ್ರಕರಣಗಳು ಇವೆ.