ಕೋವಿಡ್‌ ಭೀತಿ ಹಿನ್ನೆಲೆಯಲ್ಲಿ ನಗರದ ಹೋಟೆಲ್‌ಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಜಾರಿಗೊಳಿಸಲು ಬೃಹತ್‌ ಬೆಂಗಳೂರು ಹೋಟೆಲುಗಳ ಸಂಘ ಮುಂದಾಗಿದ್ದು, ಈ ಸಂಬಂಧ ಎಲ್ಲ ಮಾಲಿಕರಿಗೆ ಸೂಚಿಸಲಾಗಿದೆ.

ಬೆಂಗಳೂರು (ಡಿ.26) : ಕೋವಿಡ್‌ ಭೀತಿ ಹಿನ್ನೆಲೆಯಲ್ಲಿ ನಗರದ ಹೋಟೆಲ್‌ಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಜಾರಿಗೊಳಿಸಲು ಬೃಹತ್‌ ಬೆಂಗಳೂರು ಹೋಟೆಲುಗಳ ಸಂಘ ಮುಂದಾಗಿದ್ದು, ಈ ಸಂಬಂಧ ಎಲ್ಲ ಮಾಲಿಕರಿಗೆ ಸೂಚಿಸಲಾಗಿದೆ.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ವಿಭಾಗದ ಜತೆಗೆ ಸಭೆ ನಡೆಸಿರುವ ಸಂಘವು, ಈ ವಾರ ಸದಸ್ಯರ ಜೊತೆಗೆ ಮತ್ತೊಮ್ಮೆ ಸಭೆ ನಡೆಸಲು ನಿರ್ಧರಿಸಿದೆ. ಹೋಟೆಲ್‌ಗಳಲ್ಲಿ ಮಾÓ್ಕ…, ಸ್ಯಾನಿಟೈಸರ್‌, ಕೈಗವಸು ಕಡ್ಡಾಯವಾಗಿ ಬಳಸಲು ನಿರ್ಧರಿಸಲಾಗಿದೆ. ಜತೆಗೆ ಎರಡನೇ ಡೋಸ್‌, ಬೂಸ್ಟರ್‌ ಡೋಸ್‌ ಪಡೆದುಕೊಳ್ಳುವಂತೆ ಕಾರ್ಮಿಕರಿಗೆ ತಿಳಿಸಲಾಗಿದೆ ಎಂದು ಸಂಘ ತಿಳಿಸಿದೆ.

ಕರ್ನಾಟಕದಲ್ಲಿ ಕೊರೋನಾ ಹೆಚ್ಚಳ, ಇಂದಿನಿಂದ ಮಾಸ್ಕ್‌ ಕಡ್ಡಾಯ ಮಾಡಿದ ಸರ್ಕಾರ

ಸಂಘದ ಅಧ್ಯಕ್ಷ ಪಿ.ಸಿ.ರಾವ್‌ ಮಾತನಾಡಿ, ‘ಸರ್ಕಾರ ತಿಳಿಸಲಿರುವ ಮಾರ್ಗಸೂಚಿ ಪಾಲಿಸಲಾಗುವುದು. ಕಾರ್ಮಿಕರಿಗೆ ಅಗತ್ಯ ಲಸಿಕೆಯನ್ನು ಹಾಕಿಸಲು ಕ್ರಮ ಕೈಗೊಳ್ಳಲಾಗುವುದು. ಜತೆಗೆ ಹೋಟೆಲ್‌ ಉದ್ಯಮಕ್ಕೆ ಅಗತ್ಯ ಸಹಕಾರ ನೀಡುವಂತೆ ಕೇಳಿಕೊಳ್ಳಲಾಗಿದೆ’ ಎಂದು ತಿಳಿಸಿದರು.

‘ವಾರದಲ್ಲಿ ಹೋಟೆಲ್‌ ಮಾಲಿಕರ ಜೊತೆ ಆಂತರಿಕ ಸಭೆ ನಡೆಸಿ ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವಂತೆ ಸೂಚಿಸಲಿದ್ದೇವೆ’ ಎಂದು ಸಂಘದ ಕಾರ್ಯದರ್ಶಿ ವೀರೇಂದ್ರ ಕಾಮತ್‌ ಹೇಳಿದರು.

ಪಾಸಿಟಿವಿಟಿ ಮತ್ತಷ್ಟುಕುಸಿತ

ಬೆಂಗಳೂರು: ನಗರದಲ್ಲಿ ಭಾನುವಾರ 19 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ.1.06 ದಾಖಲಾಗಿದೆ. ಸೋಂಕಿನಿಂದ 40 ಗುಣಮುಖರಾಗಿದ್ದು, ಮೃತಪಟ್ಟವರದಿಯಾಗಿಲ್ಲ.

ಮತ್ತೆ ಕೋವಿಡ್‌ ಭೀತಿ: ಬೆಂಗಳೂರು ವಿವಿಯಲ್ಲಿ ಮಾಸ್ಕ್ ಕಡ್ಡಾಯ

ನಗರದಲ್ಲಿ 1,181 ಸಕ್ರಿಯ ಸೋಂಕು ಪ್ರಕರಣಗಳಿದ್ದು, ಎಲ್ಲರೂ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 4480 ಮಂದಿ ಕೋವಿಡ್‌ ವಿರುದ್ಧ ಲಸಿಕೆ ಪಡೆದುಕೊಂಡಿದ್ದಾರೆ. 232 ಮಂದಿ ಮೊದಲ ಡೋಸ್‌, 204 ಮಂದಿ ಎರಡನೇ ಡೋಸ್‌ ಮತ್ತು 4044 ಮಂದಿ ಮೂರನೇ ಡೋಸ್‌ ಲಸಿಕೆ ಪಡೆದಿದ್ದಾರೆ. ನಗರದಲ್ಲಿ 1721 ಮಂದಿಗೆ ಕೊರೋನಾ ಸೋಂಕು ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 1,530 ಆರ್‌ಟಿಪಿಸಿಆರ್‌ ಹಾಗೂ 191 ಮಂದಿಗೆ ರಾರ‍ಯಪಿಡ್‌ ಆ್ಯಂಟಿಜನ್‌ ಪರೀಕ್ಷೆ ನಡೆಸಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.