ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್‌ಗೆ ಕೊರೋನಾ ಸೋಂಕು

ಬಿಬಿಎಂಪಿ ವಿಶೇಷ ಆಯುಕ್ತ ಡಿ.ರಂದೀಪ್‌ಗೆ ಕೊರೋನಾ ಸೋಂಕು ದೃಢ|ಸೋಂಕು ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆ.24ರಂದು ಕೊರೋನಾ ಪರೀಕ್ಷೆಗೆ ಒಳಗಾಗಿದ್ದೆ. ಇದೀಗ ವರದಿಯಲ್ಲಿ ಕೊರೋನಾ ಪಾಸಿಟಿವ್‌ ಬಂದಿದೆ. ಎಲ್ಲ ಮುನ್ನೆಚ್ಚರಿಕಾ ಕ್ರಮಕೈಗೊಂಡು ಹೋಂ ಐಸೋಲೇಷನ್‌ನಲ್ಲಿ ಇದ್ದೇನೆ ಎಂದು ತಿಳಿಸಿದ ರಂದೀಪ್‌

Coronavirus Confirm to Special Commissioner of BBMP D Randip

ಬೆಂಗಳೂರು(ಆ.29): ಬಿಬಿಎಂಪಿಯ ವಿಶೇಷ ಆಯುಕ್ತ (ಆರೋಗ್ಯ ಹಾಗೂ ಘನತ್ಯಾಜ್ಯ ನಿರ್ವಹಣೆ) ಡಿ.ರಂದೀಪ್‌ಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಈ ಸಂಬಂಧ ಟ್ವಿಟರ್‌ನಲ್ಲಿ ಖುದ್ದು ಮಾಹಿತಿ ನೀಡಿರುವ ರಂದೀಪ್‌, ಸೋಂಕು ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆ.24ರಂದು ಕೊರೋನಾ ಪರೀಕ್ಷೆಗೆ ಒಳಗಾಗಿದ್ದೆ. ಇದೀಗ ವರದಿಯಲ್ಲಿ ಕೊರೋನಾ ಪಾಸಿಟಿವ್‌ ಬಂದಿದೆ. ಎಲ್ಲ ಮುನ್ನೆಚ್ಚರಿಕಾ ಕ್ರಮಕೈಗೊಂಡು ಹೋಂ ಐಸೋಲೇಷನ್‌ನಲ್ಲಿ ಇದ್ದೇನೆ. ಈ ನಡುವೆ ನನಗೆ ಹತ್ತಿರದ ಸಂಪರ್ಕದಲ್ಲಿದ್ದವರು ಕ್ವಾರಂಟೈನ್‌ ಆಗಿ ಮತ್ತು ಕೊರೋನಾ ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.

ಮಹದೇವಪುರ ವಲಯ ವಿಶೇಷ ಆಯುಕ್ತರೂ ಆಗಿರುವ ರಂದೀಪ್‌, ಮಹದೇವಪುರ ಕಚೇರಿ, ಲ್ಯಾಬ್‌ಗಳು, ಜ್ವರ ತಪಾಸಣಾ ಕೇಂದ್ರಗಳಿಗೆ ಭೇಟಿ ನೀಡಿದ್ದರು. ಈ ವೇಳೆ ಸೋಂಕು ತಗುಲಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಗರ್ಭಿಣಿ, 50 ವರ್ಷ ಮೇಲ್ಪಟ್ಟ ಪೌರ ಕಾರ್ಮಿಕರಿಗೆ ವೇತನ ಸಹಿತ ರಜೆ

ಚೋಳನ್‌ಗೆ ಉಸ್ತುವಾರಿ?

ರಂದೀಪ್‌ ಅವರು ಬಿಬಿಎಂಪಿಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತರೂ ಆಗಿದ್ದರು. ಇದೀಗ ಕೊರೋನಾ ಸೋಂಕಿಗೆ ತುತ್ತಾಗಿರುವುದರಿಂದ ಗುಣಮುಖರಾಗುವವರೆಗೂ ಪಾಲಿಕೆಯ ವಿಶೇಷ ಆಯುಕ್ತ (ಹಣಕಾಸು ಹಾಗೂ ತಂತ್ರಜ್ಞಾನ) ರಾಜೇಂದ್ರ ಚೋಳನ್‌ ಅವರಿಗೆ ಆರೋಗ್ಯ ವಿಭಾಗದ ಉಸ್ತುವಾರಿ ನೀಡುವ ಸಾಧ್ಯತೆಯಿದೆ ಎಂದು ಪಾಲಿಕೆ ಮೂಲಗಳು ತಿಳಿಸಿವೆ.
 

Latest Videos
Follow Us:
Download App:
  • android
  • ios