ಗೋವಿಂದ ಕಾರಜೋಳಗೆ ಕೊರೋನಾ ಸೋಂಕು ದೃಢ| ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲು| ನನ್ನ ಸಂಪರ್ಕದಲ್ಲಿರುವವರು ಮುಂಜಾಗೃತೆ ವಹಿಸಿ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಬೇಕು ಹಾಗೂ ಕ್ವಾರಂಟೈನ್‌ನಲ್ಲಿದ್ದು, ಮುಂಜಾಗ್ರತೆ ವಹಿಸಬೇಕು ಎಂದು ಮನವಿ ಮಾಡಿದ ಡಿಸಿಎಂ| 

ಬೆಂಗಳೂರು(ಸೆ.23): ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಮಂಗಳವಾರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Scroll to load tweet…

ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಯಾವುದೇ ಆತಂಕಪಡುವ ಅಗತ್ಯವಿಲ್ಲ. ತಮ್ಮೆಲ್ಲರ ಹಾರೈಕೆಯಿಂದಾಗಿ ಸೋಂಕಿನಿಂದ ಶೀಘ್ರ ಗುಣಮುಖನಾಗಿ ಎಂದಿನಂತೆ ಕಾರ್ಯ ಪ್ರವೃತ್ತನಾಗುತ್ತೇನೆ ಎಂದು ತಿಳಿಸಿದ್ದಾರೆ. 

Scroll to load tweet…

ನನ್ನ ಸಂಪರ್ಕದಲ್ಲಿರುವವರು ಮುಂಜಾಗೃತೆ ವಹಿಸಿ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಬೇಕು ಹಾಗೂ ಕ್ವಾರಂಟೈನ್‌ನಲ್ಲಿದ್ದು, ಮುಂಜಾಗ್ರತೆ ವಹಿಸಬೇಕು ಎಂದು ಕಾರಜೋಳ ಅವರು ಟ್ವೀಟರ್‌ ಮೂಲಕ ಮನವಿ ಮಾಡಿದ್ದಾರೆ.