ಬೆಂಗಳೂರು(ಸೆ.27):  ರಾಜ್ಯದ ಮತ್ತೋರ್ವ ಜನಪ್ರತಿನಿಧಿಗೆ ಮಹಾಮಾರಿ ಕೊರೋನಾ ವೈರಸ್‌ ವಕ್ಕರಿಸಿದೆ. ಹೌದು, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರಿಗೆ ಕೊರೋನಾ ವೈರಸ್‌ ದೃಢಪಟ್ಟಿದೆ. 

ಈ ಬಗ್ಗೆ ಸ್ವತಃ ದಿನೇಶ್‌ ಗುಂಡೂರಾವ್‌ ಅವರೇ ಸಾಮಾಜಿಕ ಜಾಲತಾಣ ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕೋವಿಡ್ ಟೆಸ್ಟ್‌ನಲ್ಲಿ ನನಗೆ ಯಾವುದೇ ರೋಗ ಲಕ್ಷಣಗಳಿಲ್ಲದ ಸೋಂಕು ತಗುಲಿರುವುದು ದೃಢಪಟ್ಟಿದೆ. ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. 

ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್‌ಗೆ ಕೊರೋನಾ ಭೀತಿ...!

 

ತಮಗೆ ಕೊರೋನಾ ಪಾಸಿಟಿವ್‌ ಬಂದಿರುವ ಹಿನ್ನೆಲೆಯಲ್ಲಿ ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಇನ್ನಿತರರಿಗೆ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ ಎಂದು ವಿನಂತಿಸುತ್ತೇನೆ ಎಂದು ತಿಳಿಸಿದ್ದಾರೆ.