Asianet Suvarna News Asianet Suvarna News

Coronavirus Update: ಶಾಕಿಂಗ್, ಕರ್ನಾಟಕದಲ್ಲಿ ಕೊರೋನಾ ಭಾರಿ ಏರಿಕೆ, ಹೆಚ್ಚಿದ ಆತಂಕ

* ಕೊರೋನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ
* ಕರ್ನಾಟಕದಲ್ಲಿ ಮತ್ತೆ ಶುರುವಾಯ್ತು ಕೊರೋನಾ ಆತಂಕ
* ರಾಜ್ಯದ ಪಾಸಿಟಿವಿಟಿ ದರ 0.61% 

Coronavirus New Cases rises once again in Karnataka On Dec 30 rbj
Author
Bengaluru, First Published Dec 30, 2021, 8:40 PM IST

ಬೆಂಗಳೂರು, (ಡಿ.30): ಕರ್ನಾಟಕದಲ್ಲಿ ಕೊರೋನಾ ವೈರಸ್(Coroanvirus) ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆ ಕಂಡಿದ್ದು, ಆತಂಕಕ್ಕೆ ಕಾರಣವಾಗಿದೆ.

ಇಷ್ಟು ದಿನ ಪ್ರತಿದಿನ 300 ಅಸುಪಾಸಿನಲ್ಲಿ ಕೊರೋನಾ ಕೇಸ್ ಪತ್ತೆಯಾಗುತ್ತಿದ್ದವು, ಆದ್ರೆ, ಇಂದು (ಡಿ.30)  ಬರೋಬ್ಬರಿ 707 ಹೊಸ ಕೋವಿಡ್ ಪ್ರಕರಣಗಳು ದೃಢಟ್ಟಿವೆ.ಇದರಿಂದ ಒಮಿಕ್ರಾನ್ ಮಧ್ಯೆ ಕೊರೋನಾ ಆತಂಕವೂ ಸಹ ಹೆಚ್ಚಾಗಿದೆ.

Omicron Threat: ಬೆಂಗ್ಳೂರಲ್ಲಿ ಕೊರೋನಾ ಸ್ಫೋಟ: ಮೂರುವರೆ ತಿಂಗಳ ಬಳಿಕ 400 ಕೇಸ್‌..!

ಈ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 3006505ಗೆ ಏರಿಕೆಯಾಗಿದ್ರೆ, ಸಾವನ್ನಪ್ಪಿದವರ ಸಂಖ್ಯೆ 38327ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಗುರುವಾರ 252 ಜನರು ಸೇರಿದಂತೆ ಇದುವರೆಗೆ 2959926 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಪ್ರಸ್ತುತ 8223 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ಪಾಸಿಟಿವಿಟಿ ದರ 0.61% ರಷ್ಟಿದ್ರೆ, ಸಾವಿನ ಪ್ರಮಾಣ ಸರಾಸರಿ ಶೇ 0.42 ಇದೆ.

ಬೆಂಗಳೂರಿನಲ್ಲಿ ಸೋಂಕು ಎಷ್ಟಿದೆ?
ಬೆಂಗಳೂರು ನಗರದಲ್ಲಿ ಗುರುವಾರ ಒಂದೇ ದಿನ 565 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 104 ಮಂದಿ ಚೇತರಿಸಿಕೊಂಡಿದ್ದಾರೆ. ಇಂದು ಒಂದೇ ದಿನ ಮೂವರು ಸಾವನ್ನಪ್ಪಿದ್ದಾರೆ. ನಗರದಲ್ಲಿ ಈವರೆಗೆ 12,6,2,962 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 16,395 ಮಂದಿ ಸಾವನ್ನಪ್ಪಿದ್ದಾರೆ. 12,39,720 ಮಂದಿ ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಪ್ರಸ್ತುತ 6,846 ಸಕ್ರಿಯ ಪ್ರಕರಣಗಳಿವೆ.

Covid-19 Surge in India : ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ಕೇಂದ್ರದ ವಾರ್ನಿಂಗ್!

ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್?
ಬೆಂಗಳೂರು ನಗರ 565, ಉಡುಪಿ 19, ಹಾಸನ 17, ಮೈಸೂರು 16, ಕೊಡಗು 12, ದಕ್ಷಿಣ ಕನ್ನಡ 11, ಮಂಡ್ಯ, ಧಾರವಾಡ, ಬೆಳಗಾವಿ 8, ಉತ್ತರ ಕನ್ನಡ, ತುಮಕೂರು 6, ಬಳ್ಳಾರಿ, ಕೋಲಾರ 5, ಬೆಂಗಳೂರು ಗ್ರಾಮಾಂತರ 4, ಶಿವಮೊಗ್ಗ, ವಿಜಯಪುರ, ಚಿಕ್ಕಮಗಳೂರು, ಕಲಬುರಗಿ 3, ಚಿತ್ರದುರ್ಗ 2, ಚಾಮರಾಜನಗರ, ದಾವಣಗೆರೆ, ಯಾದಗಿರಿ 1.

ಭಾರತದಲ್ಲಿ ಕೊರೋನಾ ಅಂಕಿ-ಸಂಖ್ಯೆ
ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೊಸ ದಾಖಲೆ ಬರೆದಿದೆ. ಕಳೆದೊಂದು ತಿಂಗಳಿನಲ್ಲೇ ಮೊದಲ ಬಾರಿಗೆ ಒಂದೇ ದಿನದಲ್ಲಿ 10,000ಕ್ಕೂ ಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿವೆ. ಇದರ ಮಧ್ಯೆ ಓಮಿಕ್ರಾನ್ ರೂಪಾಂತರ ಸೋಂಕಿತರ ಸಂಖ್ಯೆಯು 961ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 13,154 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಒಂದೇ ದಿನದಲ್ಲಿ 268 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದು, ಇದೇ ಅವಧಿಯಲ್ಲಿ 7,486 ಸೋಂಕಿತರು ಗುಣಮುಖರಾಗಿದ್ದಾರೆ.

ಡಿಸೆಂಬರ್ 29ರ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಈವರೆಗೂ 3,42,58,778 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ 4,80,860 ಮಂದಿ ಸೋಂಕಿನಿಂದ ಜೀವ ಬಿಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕರ್ನಾಟಕ ಸೇರಿ 8 ರಾಜ್ಯಗಳಿಗೆ ಕೇಂದ್ರ ಆರೋಗ್ಯ ಇಲಾಖೆ ಪತ್ರ
ದೇಶದಲ್ಲಿ ಒಮಿಕ್ರಾನ್ (Omicron) ಸೋಂಕು ಹರಡುವಿಕೆ ತೀವ್ರವಾಗುತ್ತಿರುವ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ಸೋಂಕು ಹೆಚ್ಚಾಗುತ್ತಿರುವ ಎಂಟು ರಾಜ್ಯಗಳಿಗೆ ಇಲಾಖೆಯ ಕಾರ್ಯದರ್ಶಿ ರಾಜೇಶ್ ಭೂಷಣ ಪತ್ರ ಬರೆದಿದ್ದು ಎಚ್ಚರವಹಿಸುವಂತೆ ಸೂಚನೆ ನೀಡಿದ್ದಾರೆ.

ದೆಹಲಿ, ಹರಿಯಾಣ, ತಮಿಳುನಾಡು, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಗುಜರಾತ್, ಕರ್ನಾಟಕ ಮತ್ತು ಜಾರ್ಖಂಡ್‌ಗೆ ಪತ್ರ ಬರೆಯಲಾಗಿದ್ದು ವ್ಯಾಕ್ಸಿನೇಷನ್‌ ವ್ಯಾಪ್ತಿ ಹೆಚ್ಚಿಸಬೇಕು. ಟೆಸ್ಟಿಂಗ್ ಹೆಚ್ಚು ಮಾಡಬೇಕು ಮತ್ತು ಆಸ್ಪತ್ರೆಗಳಲ್ಲಿ ಬೆಡ್‌ಗಳನ್ನು ಸಿದ್ಧವಾಗಿಡಬೇಕು ಎಂದು ಸೂಚಿಸಲಾಗಿದೆ.

ದೇಶದ ಎಲ್ಲ ರಾಜ್ಯಗಳಲ್ಲಿ ಸದ್ಯ ಒಮಿಕ್ರಾನ್ ಪತ್ತೆಯಾಗುತ್ತಿದ್ದು, ಮುಂಬೈ, ದೆಹಲಿ ಸೇರಿದಂತೆ 14 ಮಹಾನಗರಗಳಲ್ಲಿ ಸೋಂಕು ಹೆಚ್ಚುತ್ತಿದೆ. ಬೆಂಗಳೂರು ಮತ್ತು ಅಹಮದಾಬಾದ್‌ನಲ್ಲಿ ಓಮಿಕ್ರಾನ್ ಹರಡುವಿಕೆ ವೇಗವಾಗುತ್ತಿರುವ ಹಿನ್ನೆಲೆಯಲ್ಲಿ ಈ ಪತ್ರವನ್ನು ಬರೆಯಲಾಗಿದ್ದು ತಕ್ಷಣದ ಕ್ರಮಕ್ಕೆ ಸಲಹೆ ನೀಡಿದೆ.

Follow Us:
Download App:
  • android
  • ios