ರಾಜ್ಯದಲ್ಲಿ ನೈಟ್, ವೀಕೆಂಡ್‌ ಕರ್ಫ್ಯೂ ಜಾರಿ: ಇಲ್ಲಿದೆ ಹೊಸ ಮಾರ್ಗಸೂಚಿ

* ಕೇರಳ ಹಾಗೂ ಮಹಾರಾಷ್ಟ್ರ ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ
* ರಾಜ್ಯದಲ್ಲಿ ನೈಟ್ ಕರ್ಫ್ಯೂ, ವೀಕೆಂಡ್‌ ಲಾಕ್‌ಡೌನ್ ಜಾರಿ
* ರಾತ್ರಿ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಬಗ್ಗೆ ಗೈಡ್‌ಲೈನ್ಸ್‌ ಪ್ರಕಟ

Coronavirus New Guidelines Released by Karnataka Govt on Night and Weekend Curfew rbj

ಬೆಂಗಳೂರು, (ಆ.06): ಕೊರೋನಾ 3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಮುಂಜಾಗ್ರತೆಗಾಗಿ ರಾಜ್ಯ ಸರ್ಕಾರ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು (ಆ. 6) ರಾತ್ರಿ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಬಗ್ಗೆ ಗೈಡ್‌ಲೈನ್ಸ್‌ ಪ್ರಕಟಿಸಿದ್ದಾರೆ. 

ಕೊರೋನಾ ಭೀತಿ: ರಾಜ್ಯದಲ್ಲಿ ನೈಟ್ ಕರ್ಫ್ಯೂ, ಕೆಲ ಜಿಲ್ಲೆಗಳಲ್ಲಿ ವೀಕೆಂಡ್ ಲಾಕ್‌ಡೌನ್

ಆಗಸ್ಟ್ 16ರವರೆಗೂ ಹೊಸ ಮಾರ್ಗಸೂಚಿ ಅನ್ವಯ ಆಗಲಿದೆ. ರಾತ್ರಿ 10ರ ಬದಲಿಗೆ 9 ಗಂಟೆಯಿಂದ ಮುಂಜಾನೆ 5ರವರೆಗೆ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಇರಲಿದ್ದು, ಇಂದಿನಿಂದಲೇ ಜಾರಿಯಾಗಲಿದೆ. ಇನ್ನು ಮಹಾರಾಷ್ಟ್ರ, ಕೇರಳ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಇರಲಿದೆ. 

 ಕೇರಳ ಹಾಗೂ ಮಹಾರಾಷ್ಟ್ರ ಗಡಿಯಲ್ಲಿರುವ ಬರುವ ಕಲಬುರಗಿ, ವಿಜಯಪುರ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಬೆಳಗಾವಿ, ಚಾಮರಾಜನಗರ ಹಾಗೂ ಬೀದರ್‌ ಜಿಲ್ಲೆಗಳಲ್ಲಿ ವೀಕೆಂಡ್  ಕರ್ಫ್ಯೂ ಜಾರಿಯಲ್ಲಿರಲಿದೆ.

ಅಗತ್ಯವಸ್ತುಗಳ ಖರೀದಿಗೆ ಸಮಯ ನಿಗದಿ ಮಾಡಲಾಗಿದೆ. ಆ ವೇಳೆ, ಬೆಳಗ್ಗೆ 5 ರಿಂದ ಮಧ್ಯಾಹ್ನ 2 ರವರೆಗೆ ಖರೀದಿಗೆ ಅವಕಾಶ ನೀಡಲಾಗುತ್ತದೆ. ಇನ್ನು ಬೆಂಗಳೂರಿನಲ್ಲಿ ಯಾವುದೇ ವೀಕೆಂಡ್ ಕರ್ಫ್ಯೂ ಇರುವುದಿಲ್ಲ. ಆದರೆ, ಪ್ರತಿ  ದಿನ ನೈಟ್ ಕರ್ಫ್ಯೂ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆ ವರೆಗೆ ಇರಲಿದೆ. 

ವೀಕೆಂಡ್ ಕರ್ಫ್ಯೂ ಗೈಡ್‌ಲೈನ್ಸ್‌ ಪ್ರಕಟ

* ಬೀದಿಬದಿ ವ್ಯಾಪಾರಿಗಳಿಗೆ ಮಧ್ಯಾಹ್ನ 2ರವರೆಗೆ ಅವಕಾಶ ನೀಡಲಾಗುತ್ತದೆ. 
* ಬೆಳಗ್ಗೆ 5 ರಿಂದ ಮಧ್ಯಾಹ್ನ 2 ರವರೆಗೆ ಮದ್ಯ ಪಾರ್ಸೆಲ್​ಗೆ ಮಾತ್ರ ಅವಕಾಶ
* ದಿನದ 24 ಗಂಟೆಯೂ ಹೋಮ್ ಡೆಲಿವರಿಗೆ ಅವಕಾಶ ಇರಲಿದೆ.
* ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಪಾರ್ಸೆಲ್‌ಗೆ ಮಾತ್ರ ಅವಕಾಶ.
* ರೈಲು, ವಿಮಾನ ಹಾರಾಟಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ. 
* ವೀಕೆಂಡ್‌ನಲ್ಲಿ ಸರ್ಕಾರಿ, ಖಾಸಗಿ ಬಸ್ ಸಂಚಾರ ಇರುತ್ತೆ. 
* ರೈಲು, ವಿಮಾನ ಟಿಕೆಟ್ ತೋರಿಸಿ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. 
* ಮದುವೆಯಲ್ಲಿ 100 ಜನರು  ಹಾಗೂ ಅಂತ್ಯಕ್ರಿಯೆಯಲ್ಲಿ 20 ಜನಕ್ಕೆ ಭಾಗಿಯಾಗಲು ಅವಕಾಶ
*  ಜಾತ್ರೆ, ದೇಗುಲಗಳಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಅವಕಾಶವಿಲ್ಲ.
 

Latest Videos
Follow Us:
Download App:
  • android
  • ios