ಹಳ್ಳಿ ಆಸ್ಪತ್ರೆಗಳಲ್ಲೂ ಕೊರೋನಾ ಲಸಿಕೆ: ಸಚಿವ ಸುಧಾಕರ್‌

ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರದಲ್ಲಿ ವ್ಯವಸ್ಥೆ| ಸಭೆಯಲ್ಲಿ ಚರ್ಚಿಸಿ ಶೀಘ್ರ ಕ್ರಮ| ಸದ್ಯ ಕೋವಿಡ್‌ 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಪೂರ್ವ ಕಾಯಿಲೆ ಹೊಂದಿರುವವರಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ| ಲಸಿಕೆ ಪಡೆಯಲು ಹಿರಿಯ ನಾಗರಿಕರಿಗೆ ನೈತಿಕ ಸ್ಫೂರ್ತಿ ತುಂಬುವ ಕೆಲಸವೂ ನಡೆಯುತ್ತಿದೆ: ಆರೋಗ್ಯ ಸಚಿವ ಕೆ. ಸುಧಾಕರ್‌| 

Coronavirus Vaccine in Village Hospitals Says K Sudhakar grg

ಬೆಂಗಳೂರು(ಮಾ.05): ಹೆಚ್ಚು ಹೆಚ್ಚು ಹಿರಿಯ ನಾಗರಿಕರು ಕೋವಿಡ್‌ ಲಸಿಕೆ ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿಯೂ ಕೋವಿಡ್‌ ಲಸಿಕೆ ದೊರೆಯುವಂತೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್‌, ಸದ್ಯಕ್ಕೆ ತಾಲೂಕು ಆಸ್ಪತ್ರೆಗಳಲ್ಲಿ ಮಾತ್ರ ಕೋವಿಡ್‌ ಲಸಿಕೆ ನೀಡಲಾಗುತ್ತಿದೆ. ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲಸಿಕಾ ಕೇಂದ್ರ ತೆರೆಯುವ ಕುರಿತಂತೆ ಸಭೆ ನಡೆಸಿ ಚರ್ಚಿಸಲಾಗುವುದು ಎಂದು ತಿಳಿಸಿದರು.

ಮನೆಯಲ್ಲೇ ವ್ಯಾಕ್ಸಿನ್‌ ಪಡೆದ ಸಚಿವ: ಯಾರ ಮನೆಗೂ ಹೋಗಿ ಲಸಿಕೆ ನೀಡುವಂತಿಲ್ಲ ಎಂದ ಸುಧಾಕರ್‌

ಸದ್ಯ ಕೋವಿಡ್‌ ಲಸಿಕೆಯನ್ನು 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಪೂರ್ವ ಕಾಯಿಲೆಗಳನ್ನು ಹೊಂದಿರುವವರಿಗೆ ಮಾತ್ರ ನೀಡಲಾಗುತ್ತಿದೆ. ಲಸಿಕೆ ಪಡೆಯಲು ಹಿರಿಯ ನಾಗರಿಕರಿಗೆ ನೈತಿಕ ಸ್ಫೂರ್ತಿ ತುಂಬುವ ಕೆಲಸವೂ ನಡೆಯುತ್ತಿದೆ. ಲಸಿಕೆ ಪಡೆದವರಿಗೆ ಮುಂದೆ ಸೋಂಕು ಬಂದರೂ ಹೆಚ್ಚು ಸಮಸ್ಯೆ ಉಂಟಾಗುವುದಿಲ್ಲ. ಇನ್ನು ಮುಂದೆ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆಯಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.
 

Latest Videos
Follow Us:
Download App:
  • android
  • ios