ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ದೆಹಲಿಗೆ ತೆರಳುತ್ತಿದ್ದು, ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ" ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೋಮವಾರ ತಿಳಿಸಿದ್ದಾರೆ.
ಬೆಂಗಳೂರು (ಡಿ.19): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ದೆಹಲಿಗೆ ತೆರಳುತ್ತಿದ್ದು, ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ" ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೋಮವಾರ ತಿಳಿಸಿದ್ದಾರೆ.
ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ನಿಗಮ ಮಂಡಳಿ ನೇಮಕ ವಿಚಾರವಾಗಿ ಈಗಾಗಲೇ ಸಭೆ ಮಾಡಿ ಪಟ್ಟಿ ಕಳುಹಿಸಿಕೊಟ್ಟಿದ್ದೇವೆ. ಈ ಮಧ್ಯೆ ಬೇರೆ ಬೇರೆ ರಾಜ್ಯಗಳ ವಿಧಾನಸಭೆ ಚುನಾವಣೆಗಳ ಕಾರಣ ಅದು ಅಂತಿಮವಾಗಿಲ್ಲ. ಈಗ ದೆಹಲಿಯಲ್ಲಿ ಈ ಪಟ್ಟಿ ಅಂತಿಮವಾಗಲಿದೆ ಎಂದು ಹೇಳಿದರು.
ಯತ್ನಾಳ್ ಯಾವ ಪಕ್ಷದಲ್ಲಿದ್ದಾರೋ ಗೊತ್ತಾಗ್ತಿಲ್ಲ ; ಬಿಸಿ ಪಾಟೀಲ್
ಮುಖ್ಯಮಂತ್ರಿಗಳ ಭೇಟಿಗೆ ಪ್ರಧಾನಮಂತ್ರಿಗಳು ಸಮಯಾವಕಾಶ ನೀಡಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಉಪ ಮುಖ್ಯಮಂತ್ರಿ, ಅವರು ಹೋಗಿ ಭೇಟಿ ಮಾಡುತ್ತಾರೆ ಎಂದರು. ಇದೇ 21 ರಂದು ನಡೆಯಲಿರುವ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಇಲ್ಲೂ ಇದೆ, ನಾಗ್ಪುರದಲ್ಲೂ ಇದೆ" ಎಂದು ತಿಳಿಸಿದರು.
ಎಚ್‌ಡಿ ಕುಮಾರಸ್ವಾಮಿ ಕೇಂದ್ರ ಮಂತ್ರಿಯಾದ್ರೆ ರಾಜ್ಯಕ್ಕೂ, ದೇಶಕ್ಕೂ ಒಳ್ಳೆಯದಾಗುತ್ತೆ: ಕೆಎಸ್ ಈಶ್ವರಪ್ಪ
