ದೇಶದ ಆಸ್ತಿಯಾಗಿರುವ ಪ್ರತಿಭಾವಂತ ಯುವಕರು ಸಮಾಜದ ಋುಣವನ್ನು ಧರ್ಮದಿಂದ ತೀರಿಸಬೇಕು. ದೇವರು ಕೊಟ್ಟಿರುವ ಅವಕಾಶದಲ್ಲಿ ಸಮಾಜದ ಋುಣ ತೀರಿಸಲು ಶ್ರಮಿಸಬೇಕೆಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಬೆಂಗಳೂರು (ಜೂ.11): ದೇಶದ ಆಸ್ತಿಯಾಗಿರುವ ಪ್ರತಿಭಾವಂತ ಯುವಕರು ಸಮಾಜದ ಋುಣವನ್ನು ಧರ್ಮದಿಂದ ತೀರಿಸಬೇಕು. ದೇವರು ಕೊಟ್ಟಿರುವ ಅವಕಾಶದಲ್ಲಿ ಸಮಾಜದ ಋುಣ ತೀರಿಸಲು ಶ್ರಮಿಸಬೇಕೆಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಶನಿವಾರ ಮಹಾಲಕ್ಷ್ಮಿ ಲೇಔಟ್ ಬಿಜಿಎಸ್ ಸಿಇಟಿ ಸಭಾಂಗಣದಲ್ಲಿ ನಡೆದ ಯುಪಿಎಸ್‌ಸಿ ತೇರ್ಗಡೆಯಾದ ಕರ್ನಾಟಕದ ಅಭ್ಯರ್ಥಿಗಳ ಅಭಿನಂದನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಪತ್ರಿಕಾ ರಂಗ ಕೆಲಸ ಮಾಡುತ್ತದೆ. ನಾವು ಶಾಸಕಾಂಗ ಮಾಡುವ ಕಾನೂನನ್ನು ನೀವು ಕಾರ್ಯಾಂಗದವರು ಜಾರಿ ಮಾಡಬೇಕು. ನಮ್ಮ ತಪ್ಪನ್ನು ತಿದ್ದಲು ನ್ಯಾಯಾಂಗ ಇದೆ. ಮೂರು ಅಂಗಗಳು ಕೆಲಸ ಮಾಡದಿದ್ದರೆ ಟೀಕೆ ಮಾಡಲು ಪತ್ರಿಕಾಂಗ ಇದೆ. ಅಪಾಯದಲ್ಲಿ ಧೈರ್ಯ, ಕಷ್ಟದಲ್ಲಿ ತಾಳ್ಮೆ, ನಷ್ಟದಲ್ಲಿ ಸಹನೆ, ತೊಂದರೆಯಲ್ಲಿ ಶಾಂತಿ, ದುಃಖದಲ್ಲಿ ಸಮಾಧಾನದಿಂದ ಇರುವುದನ್ನು ಮೈಗೂಡಿಸಿಕೊಳ್ಳಬೇಕು ಎಂದರು.
ಉನ್ನತ ಶಿಕ್ಷಣಕ್ಕೆ ಹೊಸ ರೂಪ, ಉದ್ಯೋಗಾಧಾರಿತ ಪಠ್ಯಕ್ರಮ ಅಳವಡಿಕೆ: ಸಚಿವ ಸುಧಾಕರ್
ನಿಮಗೆ ಬದುಕಿನಲ್ಲಿ ಯಾರು ಸಹಾಯ ಮಾಡಿದ್ದಾರೆ ಅವರನ್ನು ಸ್ಮರಿಸಬೇಕು. ಉಪಕಾರ ಸ್ಮರಣೆ ಇಲ್ಲವಾದರೆ ಆತ್ಮಸಾಕ್ಷಿ ಒಪ್ಪುವುದಿಲ್ಲ. ಜನ ಕಷ್ಟಇದ್ದಾಗ ಮಾತ್ರ ಅಧಿಕಾರಿಗಳ ಬಳಿ ಬರುತ್ತಾರೆ. ಇದೇ ಕಾರಣಕ್ಕೆ ಕೆಂಗಲ್ ಹನುಮಂತಯ್ಯ ಅವರು ವಿಧಾನಸೌಧದ ಮುಂದೆ ಸರ್ಕಾರಿ ಕೆಲಸ ದೇವರ ಕೆಲಸ ಎಂದು ಬರೆದಿದ್ದಾರೆ. ನೀವು ನ್ಯಾಯ ಪೀಠದ ಸ್ಥಾನದಲ್ಲಿ ಇದ್ದಾಗ ನೀವು ನ್ಯಾಯಯತವಾಗಿ ಕೆಲಸ ಮಾಡಬೇಕು ಎಂದು ಹೇಳಿದರು.
ಮಠಗಳು, ಸಂಘ ಸಂಸ್ಥೆಗಳು ಜನರಿಗೆ ಸೇವೆ ಮಾಡುತ್ತಾ ಬಂದಿವೆ. ಎಲ್ಲ ಧರ್ಮ ಹಾಗೂ ವರ್ಗದ ಜನರು ಸಾಮರಸ್ಯದಿಂದ ಬಾಳಲಿ. ಸಮಾಜದಲ್ಲಿ ಶಾಂತಿ ನೆಲೆಸಲಿ. ಸಮಾಜದ ಋುಣ ತೀರಿಸಬೇಕು. ಆಗ ಬದುಕು ಸಾರ್ಥಕ ಎಂದು ಬಾಲಗಂಗಾಧರನಾಥ ಸ್ವಾಮಿಗಳು ಹೇಳಿದ್ದಾರೆ. ಹಣ ಮತ್ತು ಸಂಪತ್ತು ನೀರಿನಂತೆ. ಬದುಕಿನ ದೋಣಿ ಸಾಗಲು ಎಷ್ಟುಬೇಕೊ ಅಷ್ಟುಸಂಗ್ರಹ ಮಾಡಿಕೊಳ್ಳಬೇಕು. ಅತಿಯಾಗಿ ಆಸೆ ಮಾಡಿದರೆ, ದೋಣಿ ಮುಳುಗುತ್ತದೆ ಎಂದು ನಮ್ಮ ಸ್ವಾಮಿಗಳು ಹೇಳಿದ್ದಾರೆ. ಅವರು ಹಾಕಿಕೊಟ್ಟರುವ ಮಾರ್ಗದರ್ಶನದಲ್ಲಿ ನಾವು ಸಾಗಬೇಕಿದೆ ಎಂದು ಹೇಳಿದರು.
ಕಾಂಗ್ರೆಸ್ ಗ್ಯಾರಂಟಿಗೆ ಚಾಲನೆ ನೀಡಲು ಮಧ್ಯಪ್ರದೇಶದಿಂದ ಬರ್ತಾರೆ ಡಿಕೆಶಿ
ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಶ್ರಿ ನಿರ್ಮಲಾನಂದ ಸ್ವಾಮೀಜಿ, ಕೃಷಿ ಸಚಿವ ಚೆಲುವರಾಯಸ್ವಾಮಿ, ಜ್ಞಾನಪೀಠ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ, ಮಾಜಿ ಸಚಿವ ಎಚ್.ಎಂ.ರೇವಣ್ಣ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜ್ ಉಪಸ್ಥಿತರಿದ್ದರು.
