ಧರ್ಮಸ್ಥಳ ವಿರುದ್ದ ಅಪಪ್ರಚಾರ ಮಾಡಿದ ಆರೋಪಡಿ ಯೂಟ್ಯೂಬರ್ ಸಮೀರ್ ಎಂಡಿ ಬಂಧನ ಭೀತಿಯಿಂದ ಪಾರಾಗಿದ್ದಾರೆ. ಮಂಗಳೂರು ಕೋರ್ಟ್ ಸಮೀರ್ ಎಂಡಿಗೆ ನಿರೀಕ್ಷಾ ಜಾಮೀನು ಮಂಜೂರು ಮಾಡಿದೆ.

ಬೆಂಗಳೂರು (ಆ.21) ಧರ್ಮಸ್ಥಳ ವಿರುದ್ಧ ಎಐ ವಿಡಿಯೋ ಸೃಷ್ಟಿಸಿ ಅಪಪ್ರಚಾರ ಮಾಡಿದ ಆರೋಪ ಎದುರಿಸುತ್ತಿರುವ ಯೂಟ್ಯೂಬರ್ ಸಮೀರ್ ಎಂಡಿ ಬಂಧನ ಭೀತಿಯಿಂದ ಪಾರಾಗಿದ್ದಾರೆ. ಸಮೀರ್ ಬಂಧನಕ್ಕೆ ಧರ್ಮಸ್ಥಳದಿಂದ ಬೆಂಗಳೂರಿಗೆ ಆಗಮಿಸಿದ್ದ ಪೊಲೀಸರು ಸಮೀರ್ ಮನೆ ಹುಡುಕಾಡಿದ್ದರು. ಪೊಲೀಸರು ಬರುತ್ತಿದ್ದಂತೆ ಎಸ್ಕೇಪ್ ಆಗಿದ್ದ ಸಮೀರ್ ಎಂಡಿ ವಕೀಲರ ಮೂಲಕ ಮಂಗಳೂರು ಕೋರ್ಟ್‌ಗೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದರು. ಇದದೀಗ ಮಂಗಳೂರು ಕೋರ್ಟ್ ಇದೀಗ ಸಮೀರ್ ಎಂಡಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಎರಡು ದಿನದಲ್ಲಿ ಪೊಲೀಸರ ಮುಂದೆ ಹಾಜರಾಗಲು ಸೂಚನೆ

ಸಮೀರ್ ಎಂಡಿಗೆ ಮಂಗಳೂರು ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಬಂಧನ ಭೀತಿಯಿಂದ ಸಮೀರ್ ಎಂಡಿ ಪಾರಾಗಿದ್ದಾರೆ. ಆದರೆ ಇದೇ ವೇಳೆ ಕೋರ್ಟ್, ಇನ್ನೆರಡು ದಿನದಲ್ಲಿ ಸಮೀರ್ ಎಂಡಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಬೇಕು ಎಂದು ಕೋರ್ಟ್ ಸೂಚಿಸಿದೆ.

ಸಮೀರ್ ಮಾಡಿದ ಅಪಪ್ರಚಾರವೇನು?

ಧರ್ಮಸ್ಥಳದಲ್ಲಿ ಸಾವಿರಾರು ಹೆಣ್ಣುಮಕ್ಕಳು, ಮಹಿಳೆಯರನ್ನು ಹತ್ಯೆ ಮಾಡಿ ಪ್ರಕರಣ ಮುಚ್ಚಿಹಾಕಿದ್ದಾರೆ. ಈ ಮಾಹಿತಿ ಕೇಳಿ ನಿಮ್ಮ ರಕ್ತ ಕುದಿಯುತ್ತಿಲ್ಲವೇ? ಇದರ ವಿರುದ್ಧ ಜನರು ದಂಗೆ ಏಳಬೇಕು, ಪ್ರತಿಭಟನೆ ಮಾಡಬೇಕು ಎಂದು ಗಂಭೀರ ಆರೋಪ ಮಾಡಿದ್ದರು.

ಸಮೀರ್ ಎಂಡಿ ವಿರುದ್ದ ಸ್ವಯಂಪ್ರೇರಿತ ದೂರು ದಾಖಲು

ಧರ್ಮಸ್ಥಳ ಪ್ರಕರಣದಲ್ಲಿ ಸಮೀರ್ ಎಂಡಿ ಎಐ ಟೂಲ್ ಮೂಲಕ ನಕಲಿ ವಿಡಿಯೋ ಸೃಷ್ಟಿಸಿ ಪೋಸ್ಟ್ ಮಾಡಲಾಗಿತ್ತು. ಧರ್ಮಸ್ಥಳದಲ್ಲಿ ಸಾವಿರಾರು ಶವ ಹೂತಿಟ್ಟಿರುವುದಾಗಿ ಆರೋಪಿಸಿದ್ದ. ಮಹಿಳೆಯರು, ಮಕ್ಕಳ ಮೇಲೆ ಅತ್ಯಾ*ರ ಎಸಗಿ ಹತ್ಯೆ ಮಾಡಲಾಗಿತ್ತು. ಈ ಮೃತೇದಹಳನ್ನು ಧರ್ಮಸ್ಥಳ ಕಾಡಿನಲ್ಲಿ ಹೂತಿಡಲಾಗಿದೆ. ಯಾವುದೇ ಕಾನೂನು ಪ್ರಕ್ರಿಯೆ ಮಾಡದೇ ರಹಸ್ಯವಾಗಿ ಹೂತಿಡಲಾಗಿದೆ ಎಂದು ಸಮೀರ್ ಎಂಡಿ ಆರೋಪಿಸಿದ್ದ. ಧರ್ಮಸ್ಥಳದಲ್ಲಿ ನಡೆಯುತ್ತಿರುವ ಈ ಗಂಭೀರ ಅಪರಾಧಗಳ ಬಗ್ಗೆ ಸಮಾಜ ಪ್ರತಿಭಟನೆ ನಡೆಸಬೇಕು, ನಿಮ್ಮ ರಕ್ತ ಕುದಿಯುತ್ತಿಲ್ಲವೇ ಎಂದು ಸಮೀರ್ ಎಂಡಿ ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದ. ಧರ್ಮಸ್ಥಳ ವಿರುದ್ಧ ಎಐ ವಿಡಿಯೋ ಸೃಷ್ಟಿಸಿ ಅಪಪ್ರಚಾರ ಮಾಡುತ್ತಿರುವ ಕುರಿತು ಧರ್ಮಸ್ಥಳ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿತ್ತು.

ಮಹೇಶ್ ಶೆಟ್ಟಿ ತಿಮರೋಡಿ ಅರೆಸ್ಟ್

ಧರ್ಮಸ್ಥಳ ಪ್ರಕರಣದಲ್ಲಿ ಗುರುತಿಸಿಕೊಂಡಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನು ಉಡುಪಿಯ ಬ್ರಹ್ಮಾವರ ಪೊಲೀಸರು ಬಂಧಸಿದ್ದಾರೆ. ಬಿಜೆಪಿ ಹಾಗೂ ಆರ್‌ಎಸ್‌ಎಸ್ ನಾಯಕ ಬಿಲ್ ಸಂತೋಷ್ ವಿರುದ್ದ ಮಾನಹಾನಿಕಾರ ಹೇಳಿಕೆ ನೀಡಿದ ಪ್ರಕರಣ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ಅರೆಸ್ಟ್ ಆಗಿದ್ದಾರೆ.