ಅಶ್ಲೀಲ ಪದ ಬಳಕೆ ಕೇಸ್: ನಾಳೆ ವಿಚಾರಣೆಗೆ ಹಾಜರಾಗಲು ಸಿ.ಟಿ.ರವಿಗೆ ನೋಟಿಸ್
ಕೆಲ ದಿನಗಳ ಹಿಂದೆ ಈ ಪ್ರಕರಣ ಸಂಬಂಧ ಸಿಐಡಿ ವಿಚಾರಣೆಗೆ ರವಿ ಹಾಜರಾಗಿದ್ದರು. ಆ ವೇಳೆ ಅವರಿಗೆ ಧ್ವನಿ ಪರೀಕ್ಷೆಗೆ ಸ್ಯಾಂಪಲ್ ನೀಡುವಂತೆ ಅಧಿಕಾರಿ ಸೂಚಿಸಿದ್ದರು. ಇದಕ್ಕೆ ಆಕ್ಷೇಪಿಸಿದ ರವಿ ಅವರು, ಧ್ವನಿ ಪರೀಕ್ಷೆಗೊಳಪಡಲು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ತನಿಖೆಗೆ ಅಸಹಕಾರ ತೋರಿದ್ದಾರೆಂದು ರವಿ ವಿರುದ್ಧ ನ್ಯಾಯಾಲಯಕ್ಕೆ ಸಿಐಡಿ ಅರ್ಜಿ ಸಲ್ಲಿಸಿದೆ.
ಬೆಂಗಳೂರು(ಡಿ.16): ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಿಗೆ ನಿಂದನೆ ಪ್ರಕರಣದ ಸಿಐಡಿ ತನಿಖೆಗೆ ಅಸಹಕಾರ ತೋರಿದ ಆರೋಪ ಹಿನ್ನೆಲೆಯಲ್ಲಿ ನಾಳೆ(ಶುಕ್ರವಾರ) ಖುದ್ದು ವಿಚಾರಣೆಗೆ ಹಾಜರಾಗುವಂತೆ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರಿಗೆ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೋಟಿಸ್ ಜಾರಿಗೊಳಿಸಿದೆ.
ಧ್ವನಿ ಪರೀಕ್ಷೆಗೆ ರವಿ ವಿರೋಧಿಸಿದ್ದರು. ಹೀಗಾಗಿ ಅಸಹಕಾರ ತೋರಿದ್ದಾರೆಂದು ಕೋರ್ಟ್ಗೆ ಸಿಐಡಿ ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಕೈಗೆತ್ತಿ ಕೊಂಡ ನ್ಯಾಯಾಲಯ, ನೋಟಿಸ್ ನೀಡಿದೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲ ಅಧಿವೇಶನದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರಿಗೆ ಅಸಂಸದೀಯ ಪದ ಬಳಸಿ ನಿಂದಿಸಿದ ಆರೋಪಕ್ಕೆ ರವಿ ತುತ್ತಾಗಿದ್ದಾರೆ.
ಸಿ.ಟಿ. ರವಿ, ಹೆಬ್ಬಾಳ್ಕರ್ ಕೇಸ್ ಪರಿಣಾಮ: ಸಭಾಪತಿ ಹೊರಟ್ಟಿ ಬದಲಿಗೆ ಕಾಂಗ್ರೆಸ್ ಪ್ಲ್ಯಾನ್!
ಕೆಲ ದಿನಗಳ ಹಿಂದೆ ಈ ಪ್ರಕರಣ ಸಂಬಂಧ ಸಿಐಡಿ ವಿಚಾರಣೆಗೆ ರವಿ ಹಾಜರಾಗಿದ್ದರು. ಆ ವೇಳೆ ಅವರಿಗೆ ಧ್ವನಿ ಪರೀಕ್ಷೆಗೆ ಸ್ಯಾಂಪಲ್ ನೀಡುವಂತೆ ಅಧಿಕಾರಿ ಸೂಚಿಸಿದ್ದರು. ಇದಕ್ಕೆ ಆಕ್ಷೇಪಿಸಿದ ರವಿ ಅವರು, ಧ್ವನಿ ಪರೀಕ್ಷೆಗೊಳಪಡಲು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ತನಿಖೆಗೆ ಅಸಹಕಾರ ತೋರಿದ್ದಾರೆಂದು ರವಿ ವಿರುದ್ಧ ನ್ಯಾಯಾಲಯಕ್ಕೆ ಸಿಐಡಿ ಅರ್ಜಿ ಸಲ್ಲಿಸಿದೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಎಂಎಲ್ಸಿಗೂ ಕೋರ್ಟ್ ನೋಟಿಸ್
ಇನ್ನು ಸಚಿವರಿಗೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ನಿಂದನೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಪಕ್ಷದ ಪರಿಷತ್ ಸದಸ್ಯ ನಾಗರಾಜ್ ಯಾದವ್ ಅವರಿಗೆ ಸಿಐಡಿ ನೋಟಿಸ್ ನೀಡಿದೆ. ಈ ಕೃತ್ಯ ನಡೆದ ವೇಳೆ ಸದನದಲ್ಲಿ ನಾಗರಾಜ್ ಸಹ ಇದ್ದರು. ಹೀಗಾಗಿ ಪ್ರಕರಣದ ಕುರಿತು ಮಾಹಿತಿ ಪಡೆಯಲು ಗುರುವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆ ಹಾಜರಾಗುವಂತೆ ಯಾದವ್ ಅವರಿಗೆ ಸಿಐಡಿ ಸೂಚಿಸಿದೆ.
ಸಿ.ಟಿ.ರವಿ ಕೇಸಲ್ಲಿ ನನ್ನ ತೀರ್ಪೇ ಅಂತಿಮ, ಸಿಐಡಿ ಏಕೆ?: ಪರಂಗೆ ಹೊರಟ್ಟಿ ಪತ್ರ
ಬೆಂಗಳೂರು: ಬೆಳಗಾವಿ ಅಧಿವೇಶನ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಮತ್ತು ಮೇಲ್ಮನೆ ಸದಸ್ಯ ಸಿ.ಟಿ.ರವಿ ನಡುವಿನ ಆಕ್ಷೇಪಾರ್ಹ ಹೇಳಿಕೆ ಪ್ರಕರ ಣದ ತನಿಖೆಯನ್ನು ಸಿಐಡಿಗೆ ನೀಡಿರುವ ಸರ್ಕಾರದ ಕ್ರಮಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಅವರು ಆಕ್ಷೇಪ ವ್ಯಕ್ತಪಡಿಸಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ಗೆ ಪತ್ರ ಬರೆದಿದ್ದಾರೆ.
ಸರ್ಕಾರದ ಈ ಕ್ರಮ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷಕ್ಕೆ ಅವಕಾಶ ಮಾಡಿಕೊಡುತ್ತಿರುವಂತೆ ಭಾಸವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿರುವ ಅವರು, ಸದನದಲ್ಲಿ ನಡೆದ ಘಟನೆಯಲ್ಲಿ ಸಭಾಪತಿ ತೀರ್ಪೇ ಅಂತಿಮ ಎಂದು ಹೇಳಿದ್ದರು.
ಈ ಸಂಬಂಧ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರಿಗೆ ಪತ್ರ ಬರೆದಿರುವ ಹೊರಟ್ಟಿ ಅವರು, ಅಧಿವೇಶನದಲ್ಲಿ ನಡೆದ ಯಾವವಿಷಯ ಸಿಐಡಿ ತನಿಖೆಗೆ ನೀಡಲಾಗಿದೆಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸದನದಲ್ಲಿ ನಡೆದ ಘಟನೆಯನ್ನು ಚರ್ಚಿಸುವ ಮತ್ತು ಮುಕ್ತಾಯ ಮಾಡುವ ಕುರಿತು ತೀರ್ಮಾನಿಸುವ ಸಾರ್ವಭೌಮತ್ವ ಅಧಿಕಾರ ಸದನಕ್ಕೆ ಇರುತ್ತದೆ. ಡಿ.19ರಂದು ನಡೆದ ಘಟನೆಗೆ ಸಂಬಂಧಿಸಿ ಪರಾಮರ್ಶಿಸಿಕೊಂಡು ಪೀಠದಿಂದ ತೀರ್ಪು ನೀಡಲಾಗಿದೆ. ಸದನದ ಆವರಣದೊಳಗೆ ಶಿಸ್ತು ಸಂರಕ್ಷಿಸುವುದು, ಕಲಾಪ ವ್ಯವಹಾರ ನಿಯಂತ್ರಿಸುವ ಅಧಿಕಾರ ಸಭಾಪತಿಗಿದೆ. ಸಭಾಪತಿ ತೀರ್ಪೇ ಇದರಲ್ಲಿ ಅಂತಿಮ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಸಿಟಿ ರವಿ-ಹೆಬ್ಬಾಳ್ಕರ್ ಅವಾಚ್ಯ ಶಬ್ದ ಪ್ರಕರಣ; ಸಿಐಡಿ ತನಿಖೆಗೆ ಆಕ್ಷೇಪ ಎತ್ತಿದ್ದ ಹೊರಟ್ಟಿಗೆ ಗೃಹ ಸಚಿ ತಿರುಗೇಟು!
ಸಂವಿಧಾನಿಕ ಹುದ್ದೆಯಾಗಿರುವ ಸಭಾಪತಿಯವರಿಗೆ ಸಂಸದೀಯ ಪದ್ಧತಿ ಮತ್ತು ಪ್ರಕ್ರಿಯೆಯಲ್ಲಿ ಸಾರ್ವಭೌಮತ್ವ ಅಧಿಕಾರ ಇದೆ. ಸದನದಲ್ಲಿ ಅವ್ಯವಸ್ಥಿತ ನಡತೆಗಾಗಿ ಅಥವಾ ಇತರೆ ನಿಂದನೆಗಳಿಗಾಗಿ ಅದರ ಸದಸ್ಯರನ್ನು ಶಿಕ್ಷಿಸುವ ಅಧಿಕಾರ ಸದನಕ್ಕೆ ಇರುತ್ತದೆ. ಆದರೆ, ಸಂಸದೀಯ ಪದ್ದತಿ ಮತ್ತು ಪ್ರಕ್ರಿಯೆಯಲ್ಲಿ ಹಾಗೂ ಸಂವಿಧಾನದಲ್ಲಿ ಸಭಾಪತಿಯವರಿಗೆ ಇರುವ ವಿಶೇಷ ಅಧಿಕಾರಕ್ಕೆ ಚ್ಯುತಿ ಬರುವಂತೆ ಪ್ರಕರಣವನ್ನು ಸಿಐಡಿಗೆ ವಹಿಸುವ ಮೂಲಕ ಪ್ರಕರಣವನ್ನು ಸಾಂವಿಧಾನಿಕ ಘರ್ಷಣೆಗೆ ಅವಕಾಶ ಮಾಡಿಕೊಡಲಾಗುತ್ತಿದೆ ಎಂಬಂತೆ ಭಾಸವಾಗುತ್ತಿದೆ ಎಂದಿದ್ದಾರೆ.
ವಿನಾಕಾರಣ ಶಾಸಕಾಂಗ ಮತ್ತು ಕಾರ್ಯಾಂಗದ ನಡುವೆ ಸಂಘರ್ಷ ಉಂಟಾಗುವ ಪ್ರಮೇಯ ನಿರ್ಮಾಣವಾಗಬಾರದು. ವಿಧಾನಮಂಡಲದ ಸದನದಲ್ಲಿ ನಡೆದ ಘಟನೆ ಸಭಾಪತಿಯವರ ಕಾರ್ಯವ್ಯಾಪ್ತಿಗೆ ಬರುವುದು ತಮಗೂ ತಿಳಿದ ವಿಚಾರ. ಕಾರ್ಯಾಂಗ ಮತ್ತು ಶಾಸಕಾಂಗ ಸಂವಿಧಾನದ ಚೌಕಟ್ಟಿನಲ್ಲಿ ಪರಸ್ಪರ ಗೌರವದೊಂದಿಗೆ ನಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕಾಗುತ್ತದೆ. ತಾವು ಸಹ ಸಂವಿಧಾನದವಿವಿಧಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿರುವ ಅನುಭವವುಳ್ಳರಾಗಿದ್ದು, ಸಂವಿಧಾನದಡಿ ಕರ್ತವ್ಯ. ನಿರ್ವಹಿಸುತ್ತೀರಿ ಎಂಬ ವಿಶ್ವಾಸ ಇದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.