ಹಿಂದೂ ದೇವತೆಗಳ ವಿರುದ್ಧ ಆಕ್ಷೇಪಾರ್ಹ ಸಂದೇಶ ಆರೋಪ ಹಿನ್ನೆಲೆಯಲ್ಲಿ  ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ವಿರುದ್ಧ ತನಿಖೆ

 ಬೆಂಗಳೂರು (ಆ.19):  ಹಿಂದೂ ದೇವತೆಗಳ ವಿರುದ್ಧ ಆಕ್ಷೇಪಾರ್ಹ ಸಂದೇಶ ಆರೋಪ ಹಿನ್ನೆಲೆಯಲ್ಲಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತನಿಖೆಗೆ ಆದೇಶಿಸಿದೆ. 

ಬುಧವಾರ ವಿಚಾರಣೆ ನಡೆಸಿದ ನ್ಯಾಯಾಲಯವು ಕೊಡಿಗೆಹಳ್ಳಿ ಪೊಲೀಸರಿಗೆ ತನಿಖೆಗೆ ನಡೆಸುವಂತೆ ಸೂಚಿಸಿದ್ದು, ಸೆ.13ರೊಳಗೆ ತನಿಖಾ ವರದಿ ಸಲ್ಲಿಸುವಂತೆ ತಿಳಿಸಿದೆ. 

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನ; ಸಮಾಧಿಗೆ ನಮನ ಸಲ್ಲಿಸಿದ ಶಾಸಕಿ ಅಂಜಲಿ ನಿಂಬಾಳ್ಕರ್!

ಕಳೆದ ವರ್ಷ ಅವರು ವಾಟ್ಸ್‌ ಆ್ಯಪ್‌ ಗ್ರೂಪ್‌ನಲ್ಲಿ ಹಿಂದೂ ದೇವತೆಗಳ ವಿರುದ್ಧ ಆಕ್ಷೇಪಾರ್ಹ ಸಂದೇಶ ರವಾನೆ ಮಾಡಿದ್ದರು ಎನ್ನಲಾಗಿತ್ತು. ಈ ಸಂಬಂಧ ಗೋವಿಂದರಾಮ್‌ ಎಂಬುವವರು ಖಾಸಗಿ ದೂರು ನೀಡಿದ್ದರು. ದೂರಿನ ವಿಚಾರಣೆ ಕೈಗೊಂಡ ನ್ಯಾಯಾಲಯವು ತನಿಖೆ ನಡೆಸುವಂತೆ ಸೂಚಿಸಿದೆ.