Chitradurga: ಮುರುಘಾ ಮಠದ ಆಡಳಿತದಲ್ಲಿ ಹಸ್ತಕ್ಷೇಪ ಮಾಡದಂತೆ ಶ್ರೀಗಳಿಗೆ ಕೋರ್ಟ್ ಆದೇಶ

ಶ್ರೀ ಶಿವಮೂರ್ತಿ ಮುರುಘಾ ಶರಣರ ಪೋಕ್ಸೋ ಪ್ರಕರಣದ ಕುರಿತು ವಿಚಾರಣೆ ಮಾಡಿದ ಚಿತ್ರದುರ್ಗ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯವು ಮುರುಘಾಮಠ, SJM ವಿದ್ಯಾಪೀಠದ ಆಡಳಿತದಲ್ಲಿ ಮುರುಘಾ ಶ್ರೀ ಹಸ್ತಕ್ಷೇಪ ಮಾಡದಂತೆ ಆದೇಶ ಹೊರಡಿಸಿದೆ.

Court order to Shri not to interfere in administration of Muruga Mutt sat

ಚಿತ್ರದುರ್ಗ (ಡಿ.15): ಚಿತ್ರದುರ್ಗ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹತ್ಯಠದ ಪೀಠಾಧಿಪತಿ ಮತ್ತು ಎಸ್.ಜೆ.ಎಂ. ವಿದ್ಯಾಪೀಠದ ಅಧ್ಯಕ್ಷರು ಆಗಿರುವ ಶ್ರೀ ಶಿವಮೂರ್ತಿ ಮುರುಘಾ ಶರಣರ ಪೋಕ್ಸೋ ಪ್ರಕರಣದ ಕುರಿತು ವಿಚಾರಣೆ ಮಾಡಿದ ಚಿತ್ರದುರ್ಗ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯವು ಮುರುಘಾಮಠ, SJM ವಿದ್ಯಾಪೀಠದ ಆಡಳಿತದಲ್ಲಿ ಮುರುಘಾ ಶ್ರೀ ಹಸ್ತಕ್ಷೇಪ ಮಾಡದಂತೆ ಆದೇಶ ಹೊರಡಿಸಿದೆ.

ಇಂದು ನ್ಯಾಯಾಲಯದಲ್ಲಿ ಮುರುಘಾ ಮಠದ ಶ್ರೀಗಳ ಪೋಕ್ಸೋ ಪ್ರಕರಣವನ್ನು ವಿಚಾರಣೆ ಮಾಡಿದ ನ್ಯಾಯಾಧೀಶೆ ಬಿ.ಕೆ.ಕೋಮಲಾ ಅವರು, ಮುರುಘಾಮಠದ ಪೀಠಾದ್ಯಕ್ಷ, SJM ವಿದ್ಯಾಪೀಠದ ಅಧ್ಯಕ್ಷರಾಗಿರುವ ಮುರುಘಾಶ್ರೀಗಳು ಪ್ರಕರಣದ ವಿಚಾರಣೆ ಸಂಪೂರ್ಣ ಮುಗಿಯುವವರೆಗೆ ಮುರುಘಾಮಠ, SJM ವಿದ್ಯಾಪೀಠದ ಆಡಳಿತದಲ್ಲಿ ಮುರುಘಾ ಶ್ರೀ ಹಸ್ತಕ್ಷೇಪ ಮಾಡಬಾರದು. ಸರ್ಕಾರಿ ವಕೀಲೆ ನಾಗವೇಣಿಅವರು ಮಠದ ಪೀಠಾದ್ಯಕ್ಷ ಸ್ಥಾನದಿಂದ ಶ್ರೀಗಳ ವಜಾಕ್ಕೆ ವಾದ ಮಂಡಿಸಿದರು. ಆದರೆ,  ಧಾರ್ಮಿಕ ಕೇಂದ್ರ ದುರ್ಬಳಕೆ 1988 ಕಾಯ್ದೆ ಅಳವಡಸಿದ ಹಿನ್ನೆಲೆಯಲ್ಲಿ ಶ್ರೀಗಳ ಪೀಠ ವಜಾ ಕುರಿತು ಯಾವುದೇ ಆದೇಶ ಹೊರಡಿಸಲಿಲ್ಲ.

Chitradurga: ಮುರುಘಾ ಮಠಕ್ಕೆ ಆಡಳಿತಾಧಿಕಾರಿಯಾಗಿ ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್. ವಸ್ತ್ರದ್‌ ನೇಮಕ

ಎರಡು ದಿನದ ಹಿಂದೆ ಆಡಳಿತಾಧಿಕಾರಿ ನೇಮಕ: ಮಠದಲ್ಲಿ ಅಭ್ಯಾಸ ಮಾಡುತ್ತಿದ್ದ ಬಾಲಕಿಯರ ಮೇಲೆ ಅತ್ಯಾಚಾರ ಮಾಡಿರುವ ಆರೋಪದಡಿ ಪೋಕ್ಸೋ ಪ್ರಕರಣದಡಿ ಚಿತ್ರದುರ್ಗದ ಮುರುಘ ರಾಜೇಂದ್ರ ಮಠದ ಪೀಠಾಧ್ಯಕ್ಷ ಶ್ರೀ ಶಿವಮೂರ್ತಿ ಶರಣರು ಜೈಲು ಸೇರಿದ ಹಿನ್ನೆಲೆಯಲ್ಲಿ ಮಠದ ಆಡಳಿತ, ಹಣಕಾಸು ವ್ಯವಹಾರ ಮತ್ತು ಸ್ಥಿರಾಸ್ತಿಯನ್ನು ರಕ್ಷಣೆ ಮಾಡುವ ಹಿತದೃಷ್ಟಿಯಿಂದ ಡಿ.೧೩ರಂದು ಮಠಕ್ಕೆ ಪಿ.ಎಸ್. ವಸ್ತ್ರದ್‌ (ನಿವೃತ್ತ ಐಎಎಸ್‌ ಅಧಿಕಾರಿ) ಅವರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಮಠದ ಪೀಠಾಧ್ಯಕ್ಷರು ನ್ಯಾಯಾಂಗ ಬಂಧನದಲ್ಲಿರುವ ಹಿನ್ನೆಲೆಯಲ್ಲಿ ಸಂಸ್ಥೆಯ ನಿರ್ವಹಣೆ, ದೈನಿಕ ಕಾರ್ಯಚಟುವಟಿಕೆ, ಮಠದ ಮೇಲುಸ್ತುವಾರಿ ನಡೆಸುವದು ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮಠದ ಚರ ಸ್ಥಿರ ಆಸ್ತಿಗಳ ಸಂರಕ್ಷಣೆ ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಮಠದ ಆಡಳಿತ ಆಸ್ತಿ ಸಂರಕ್ಷಣೆ ಹಿತದೃಷ್ಟಿಯಿಂದ ಹಾಗೂ ಸಂಸ್ಥೆಯ ಹಣ ದುರುಪಯೋಗ ಆಗದಂತೆ ಲೆಕ್ಕಪತ್ರಗಳನ್ನು ನಿರ್ವಹಿಸುವ ಹೊಣೆಯನ್ನು ನೀಡಲಾಗಿತ್ತು.

ಮುರುಘಾ ಮಠಕ್ಕೆ ಹೊಸ ಪೀಠಾಧಿಪತಿ ನೇಮಕಕ್ಕೆ ವೀರಶೈವ ಮಹಾಸಭಾ ಆಗ್ರಹ: 30 ಜಿಲ್ಲೆಗಳಿಂದ ಪಾದಯಾತ್ರೆ ನಿರ್ಣಯ

ಜಿಲ್ಲಾಧಿಕಾರಿ ವರದಿ ಸಲ್ಲಿಕೆ: ರಾಜ್ಯದ ಅಡ್ವೋಕೇಟ್‌ ಜನರಲ್‌ ಅಭಿಪ್ರಾಯ ಹಾಗೂ ಸರ್ಕಾರದ ಸೂಚನೆ ಮೇರೆಗೆ ಮಠಕ್ಕೆ ಆಡಳಿತಾಧಿಕಾರಿ ನೇಮಕ ಕುರಿತು ಜಿಲ್ಲಾಧಿಕಾರಿ ದಿವ್ಯಾಪ್ರಭು ಅವರು ನ.10ರಂದು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಈ ವರದಿಯಲ್ಲಿ ಜಗದ್ಗುರು ಮುರುಘರಾಜೇಂದ್ರ ಮಠದ ಟ್ರಸ್ಟಿ ಶಿವಮೂರ್ತಿ ಮುರುಘಾ ಶರಣರು ಸೆ.1ರಿಂದ ನ್ಯಾಯಾಂಗ ಬಂಧನದಲ್ಲಿರುವುದರಿಂದ ಮಠದ ಒಟ್ಟು ಸ್ಥಿರಾಸ್ತಿಗೆ ಮತ್ತು ಮಠದ ಹಣಕಾಸು ನಿರ್ವಹಣೆಯನ್ನು ನೋಡಿಕೊಳ್ಳುವುದು ಕಷ್ಟವಾಗಿದೆ. ಇದು ಸಾರ್ವಜನಿಕ ಟ್ರಸ್ಟ್ ಆಗಿರುವುದರಿಂದ ಆಸ್ತಿಗಳ ನಿರ್ವಹಣೆಗಳ ತೊಡಕುಂಟಾಗುತ್ತಿದೆ. ದುರಾಡಳಿತ ಹಾಗೂ ಹಣಕಾಸು ದುರುಪಯೋಗ ಆದಲ್ಲಿ ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆಯಾಗುವ ಸಂಭವ ಇರುತ್ತದೆ. ಆದ ಕಾರಣ ಟ್ರಸ್ಟ್ ಮತ್ತು ವಿದ್ಯಾಸಂಸ್ಥೆಯ ನಿರ್ವಹಣೆಗೂ ಸಹ ತೊಂದರೆ ಉಂಟಾಗುತ್ತದೆ. ಸದರಿ ಸಂಸ್ಥೆಗೆ ಶ್ರೀ ಶಿವಮೂರ್ತಿ ಮುರುಘಾ ಶರಣರು ಮಠದ ಅಜೀವ ಪೀಠಾಧಿಪತಿ ಹಾಗೂ ವಿದ್ಯಾ ಸಂಸ್ಥೆಗೆ ಅಜೀವ ಅಧ್ಯಕ್ಷರು ಆಗಿರುವುದರಿಂದ ಮಠದ ಹಾಗೂ ವಿದ್ಯಾ ಸಂಸ್ಥೆಗಳ ಅನಾನುಕೂಲಗಳನ್ನು ತಪ್ಪಿಸಲು ಸಾರ್ವಜನಿಕ ಹಿತದೃಷ್ಟಿಯಿಂದ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವುದು ಅವಶ್ಯಕತೆ ಇದೆ ಎಂದು ವರದಿಯಲ್ಲಿ ತಿಳಿಸಿದ್ದರು.

ಆಡಳಿತ ನೋಡಿಕೊಳ್ಳಲು ಸಮಸ್ಯೆಯಿಲ್ಲ: ಇನ್ನು ಚಿತ್ರದುರ್ಗ ಮುರುಘಾ ಮಠಕ್ಕೆ ಶಿವಮೂರ್ತಿ ಶರಣರು ಅಜೀವ ಪೀಠಾಧ್ಯಕ್ಷರಾಗಿದ್ದು, ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹಿನ್ನೆಲೆಯಲ್ಲಿ ಶ್ರೀಗಳನ್ನು ವಜಾ ಮಾಡುವ ಬಗ್ಗೆ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿರಲಿಲ್ಲ. ಆದರೆ, ಸಾರ್ವಜನಿಕರು, ವೀರಶೈವ ಮಹಾಸಭಾ ಮತ್ತು ವಿವಿಧ ಸಂಘಟನೆಗಳಿಂದ ಮಠದ ಆಸ್ತಿ ಸಂರಕ್ಷಣೆಗೆ ಆಡಳಿತಾಧಿಕಾರಿ ನೇಮಕ ಮಾಡಲಾಗಿತ್ತು. ಆದರೆ, ಶ್ರೀಗಳು ಮಠದ ಕಾರ್ಯ ನಿರ್ವಹಣೆ ಮಾಡಲು ಪ್ರಭಾರಿಯಾಗಿ ಸ್ವಾಮೀಜಿ ಒಬ್ಬರನ್ನು ನೇಮಕ ಮಾಡಿದ್ದರು. ಇವರಿಂದ ಮಠದ ಸಂಪೂರ್ಣ ಆಡಳಿತ ನಿರ್ವಹಣೆಗೆ ಸಮಸ್ಯೆ ಆಗಬಹುದು ಎಂದು ಪರಿಗಣಿಸಿ ಈಗ ಪೀಠಾಧ್ಯಕ್ಷ ಮುರುಘಾ ಶ್ರೀಗಳಿಗೆ ಹಸ್ತಕ್ಷೇಪ ಮಾಡದಂತೆ ನ್ಯಾಯಾಲಯ ಆದೇಶಿಸಿದೆ. 

Latest Videos
Follow Us:
Download App:
  • android
  • ios