ಶೀಘ್ರ ಮಾಲೂರಿನಲ್ಲಿ ಭಾರತ್‌ ಬಯೋಟೆಕ್‌ ಕಂಪನಿ ಕೊವ್ಯಾಕ್ಸಿನ್‌ ಲಸಿಕೆ ತಯಾರಿಕಾ ಘಟಕ  ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮಾಹಿತಿ  ಲಸಿಕೆ ತಯಾರಾದರೆ ರಾಜ್ಯಕ್ಕೆ ಒಳ್ಳೆಯದಾಗಲಿದೆ - ಡಿಸಿಎಂ

ಬೆಂಗಳೂರು (ಮೇ.15): ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಭಾರತ್‌ ಬಯೋಟೆಕ್‌ ಕಂಪನಿ ಕೊವ್ಯಾಕ್ಸಿನ್‌ ಲಸಿಕೆ ತಯಾರಿಕಾ ಘಟಕ ಸ್ಥಾಪಿಸಲಿದೆ ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಮುಖ್ಯಸ್ಥರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮಾಲೂರಿನಲ್ಲಿ ಕೋವ್ಯಾಕ್ಸಿನ್‌ ಘಟಕ ಬರುತ್ತದೆ. ಅಲ್ಲಿಗೆ ರೈಲು ಸೇರಿದಂತೆ ಉತ್ತಮ ಸಂಪರ್ಕ ವ್ಯವಸ್ಥೆ ಇದೆ. ಅಲ್ಲಿ ಲಸಿಕೆ ತಯಾರಾದರೆ ರಾಜ್ಯಕ್ಕೆ ಒಳ್ಳೆಯದಾಗಲಿದೆ. ಈಗಾಗಲೇ ಕೋವಿಶೀಲ್ಡ್‌ ತಯಾರಿಸುವ ಸೀರಂ ಮಾತ್ರವಲ್ಲದೆ, ಯಾವುದೇ ಲಸಿಕೆ ತಯಾರಿಕೆ ಕಂಪನಿ ರಾಜ್ಯಕ್ಕೆ ಬಂದು ಘಟಕ ಸ್ಥಾಪಿಸಲು ಮುಂದಾದರೆ ಅಗತ್ಯವಾದ ಎಲ್ಲ ಸಹಕಾರ ನೀಡಲಾಗುವುದು. ಅತ್ಯಂತ ಕ್ಷಿಪ್ರಗತಿಯಲ್ಲಿ ಎಲ್ಲ ಅನುಮತಿಗಳನ್ನು ನೀಡಲಾಗುವುದು ಎಂದು ತಿಳಿಸಿದರು.

ಲಸಿಕೆ ಉತ್ಪಾದನೆಗೆ ಬೇರೆ ಬೇರೆ ಕಂಪನಿಗಳಿಗೆ ಆಹ್ವಾನ

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 100 ಹಾಸಿಗೆಗಳ ಆಸ್ಪತ್ರೆ

ಎರಡನೇ ಅಲೆ ಹಾಗೂ ಸಂಭನೀಯ ಮೂರನೇ ಅಲೆ ಎದುರಿಸಲು ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಅತ್ಯುತ್ತಮ ವೈದ್ಯಕೀಯ ಮೂಲಸೌಕರ್ಯಗಳನ್ನು ಸರ್ಕಾರಸ್ಥಾಪಿಸಲಿದೆ.ಪ್ರತಿ ವಿಧಾನಸಭೆ ಕ್ಷೇತ್ರದಲ್ಲೂ ಕನಿಷ್ಠ 100 ಹಾಸಿಗೆಗಳ ಆಸ್ಪತ್ರೆ ಹಾಗೂ ಆಕ್ಸಿಜನ್‌, ಐಸಿಯು ಬೆಡ್‌ಗಳೂ ಇರುವಂತೆ ಕ್ರಮ ವಹಿಸಲಾಗಿದೆ ಎಂದರು.

'ಕೋವ್ಯಾಕ್ಸಿನ್‌ ಬ್ರೆಜಿಲ್‌ ವೈರಸ್‌ ಮೇಲೆ ಪರಿಣಾಮಕಾರಿ!' ...

40 ಕೋಟಿ ಡೋಸ್‌ ಉತ್ಪಾದನೆ: ನೀತಿ ಆಯೋಗ ಈಗಾಗಲೇ ತಿಳಿಸಿರುವಂತೆ ಅಗಸ್ಟ್‌ ತಿಂಗಳಲ್ಲಿ 40 ಕೋಟಿ ಡೋಸ್‌ ಲಸಿಕೆ ದೇಶದಲ್ಲಿ ಉತ್ಪಾದನೆ ಆಗಲಿದೆ. ಜೂನ್‌-ಜುಲೈ ತಿಂಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ತಯಾರಾಗಲಿದೆ. ಇದುವರೆಗೂ ದೇಶದಲ್ಲಿ 19 ಕೋಟಿ ಡೋಸ್‌ ವ್ಯಾಕ್ಸಿನ್‌ ಕೊಡಲಾಗಿದೆ. ಕೇಂದ್ರ ಸರ್ಕಾರ ಸಹ ಲಸಿಕೆ ತಯಾರಿಕೆ ಕಂಪನಿಗಳಿಗೆ ಸಾಕಷ್ಟುಉತ್ತೇಜನ ಕೊಡುತ್ತಿದೆ. ಜಾಗತಿಕ ಮಟ್ಟದಲ್ಲಿ ಲಸಿಕೆಗಳ ಮೇಲಿರುವ ಪೇಟೆಂಗ್‌ ವಿನಾಯಿತಿ ಬಗ್ಗೆಯೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿವಿಧ ದೇಶಗಳ ನಾಯಕರ ಜತೆ ಈಗಾಗಲೇ ಯಶಸ್ವಿ ಮಾತುಕತೆ ನಡೆಸಿದ್ದಾರೆ. ಹೀಗಾಗಿ ಇನ್ನಷ್ಟುಲಸಿಕೆ ತಯಾರಿಕೆ ಘಟಕಗಳು ರಾಜ್ಯಕ್ಕೆ ಬರಲಿವೆ ಎಂದು ತಿಳಿಸಿದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona