ರಾಜ್ಯದಲ್ಲಿ ಕೋವಿಡ್ ಹೊಸ ಮಾರ್ಗಸೂಚಿ ಜಾರಿ ನಿಮಯ ಗಂಭೀರವಾಗಿ ಪರಿಗಣಿಸಲು ಮನವಿ ವಿಮಾನ ನಿಲ್ದಾಣಗಳಲ್ಲಿ ನಿಗಾ , ಹೆಚ್ಚು ಪರೀಕ್ಷೆ  

ಬೆಂಗಳೂರು(ಏ.26) ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, ‘ಸಾರ್ವಜನಿಕ ಪ್ರದೇಶಗಳಲ್ಲಿ, ಜನ ಜಂಗುಳಿ ಹೆಚ್ಚಿರುವ ಕಡೆಗಳಲ್ಲಿ ಹಾಗೂ ಒಳಾಂಗಣ ಪ್ರದೇಶಗಳಲ್ಲಿ ಮಾಸ್‌್ಕ ಮತ್ತು ಸಾಮಾಜಿಕ ಅಂತರವನ್ನು ಕಡ್ಡಾಯ ಮಾಡಲಾಗಿದೆ. ಜನತೆ ಗಂಭೀರವಾಗಿ ನಿಯಮಾವಳಿ ಪಾಲಿಸಬೇಕು ಎಂದರು.

ರಾಜ್ಯದಲ್ಲಿ ಪ್ರತಿದಿನ 10,000 ಕೊರೋನಾ ಪರೀಕ್ಷೆಗಳು ನಡೆಯುತ್ತಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರೋಗ ಲಕ್ಷಣ ಇರುವವರಿಗೆ ಪರೀಕ್ಷೆ ಮಾಡಲಾಗುತ್ತಿದೆ. ದಕ್ಷಿಣ ಕೊರಿಯಾ, ಥಾಯ್ಲೆಂಡ್‌ ಮತ್ತು ಜಪಾನ್‌ ದೇಶಗಳಲ್ಲಿ ದಿನದಿಂದ ದಿನಕ್ಕೆ ಪ್ರಕರಣಗಳು ಹೆಚ್ಚುತ್ತಿದೆ. ಹೀಗಾಗಿ, ಆ ದೇಶಗಳಿಂದ ಬರುವವರ ಬಗ್ಗೆ ವಿಮಾನ ನಿಲ್ದಾಣಗಳಲ್ಲಿ ನಿಗಾ ಇರಿಸಲಾಗಿದೆ. ಎರಡು ವಾರಗಳ ಮಟ್ಟಿಗೆ ಸೋಂಕು ದೃಢಪಟ್ಟರು ಮತ್ತು ಇತರೆ ಪ್ರಯಾಣಿಕರ ಟೆಲಿ ಮಾನಿಟರಿಂಗ್‌ ಕೂಡ ಮಾಡಲಾಗುತ್ತಿದೆ. ಅವಶ್ಯಕತೆ ಇದ್ದರೆ ಸೋಂಕಿತರಿಗೆ ವಿಶೇಷ ಮೇಲ್ವಿಚಾರಣೆಯ ಜೊತೆಗೆ ಚಿಕಿತ್ಸೆ ಕೂಡ ನೀಡಲಾಗುವುದು ಎಂದರು.

ಶಾಲೆಗಳಲ್ಲಿ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ನಿಷೇಧ, ಜಾರ್ಖಂಡ್ ಮಾರ್ಗಸೂಚಿ ಪ್ರಕಟ!

ಮುನ್ನೆಚ್ಚರಿಕಾ ಡೋಸ್‌ ಪಡೆಯಿರಿ:
ಲಸಿಕೆ ತೆಗೆದುಕೊಳ್ಳದೇ ಇರುವುದು ಸೋಂಕು ಉಲ್ಬಣಕ್ಕೆ ಕಾರಣ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಹೀಗಾಗಿ, ಎಲ್ಲರೂ ಮೂರು ಡೋಸ್‌ ಲಸಿಕೆಗಳನ್ನು ಪಡೆಯಬೇಕು. ಎರಡು ಮತ್ತು ಮೂರನೇ ಡೋಸ್‌ ಲಸಿಕೆ ಪಡೆಯದ ನಿರ್ಲಕ್ಷ್ಯ ವಹಿಸುತ್ತಿರುವವರು ಎಚ್ಚೆತ್ತುಕೊಳ್ಳಬೇಕು. ಇನ್ನು ಶೀಘ್ರದಲ್ಲಿಯೇ ಐದು ವರ್ಷ ಮೇಲ್ಪಟ್ಟಮಕ್ಕಳಿಗೂ ಲಸಿಕೆ ಬರಲಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್‌. ಅಶೋಕ್‌, ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ. ಎಂ.ಕೆ. ಸುದರ್ಶನ್‌ ಹಾಗೂ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಉಪ ತಳಿ ಪತ್ತೆಯಾಗಿಲ್ಲ: ಡಾ.ಕೆ. ಸುಧಾಕರ್‌
ರಾಜ್ಯದಲ್ಲಿ ಒಮಿಕ್ರೋನ್‌ ಉಪತಳಿಗಳು ಪತ್ತೆಯಾಗಿಲ್ಲ. ಈ ಬಗ್ಗೆ ಪ್ರಯೋಗಾಲಯದಿಂದ ಅಧಿಕೃತ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ನೀಡಲಾಗಿದೆ. ಹೀಗಾಗಿ, ಉಪತಳಿ ಆತಂಕ ಸದ್ಯ ರಾಜ್ಯಕ್ಕಿಲ್ಲ. ವಂಶವಾಹಿ ಪರೀಕ್ಷೆಗಳು ನಿರಂತರವಾಗಿ ನಡೆಯುತ್ತಿದ್ದು, ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಹೆಚ್ಚಳ ಆಧರಿಸಿ ರಾಜ್ಯದಲ್ಲಿ ಸೋಂಕು ಪರೀಕ್ಷೆ ಹೆಚ್ಚಳ ಮಾಡಲಾಗುವುದು ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.

4 ನೇ ಅಲೆ ಅಷ್ಟೊಂದು ಪ್ರಭಾವ ಬೀರುವ ಸಾಧ್ಯತೆ ಇಲ್ಲ: ಡಾ.ದೇವಿ ಶೆಟ್ಟಿ

ಮಾಸ್ಕ್ ಹಾಕದ್ದಕ್ಕೆ ದಂಡ ಹಾಕುವ ಪರಿಸ್ಥಿತಿ ಸದ್ಯಕ್ಕಿಲ್ಲ: ಸುಧಾಕರ್‌
ಕೋವಿಡ್‌ 4ನೇ ಅಲೆ ತಪ್ಪಿಸಿಕೊಳ್ಳಬೇಕು, ಯಾವುದೇ ತೊಂದರೆ ಆಗಬಾರದು ಎಂದರೆ ಎಲ್ಲರೂ ಕಡ್ಡಾಯವಾಗಿ ಸಮಯಕ್ಕೆ ಸರಿಯಾಗಿ ಲಸಿಕೆ ಹಾಕಿಸಿಕೊಳ್ಳಬೇಕು. ಮಾಸ್‌್ಕ ಧರಿಸಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೆಲವೆಡೆ ಕೊರೋನಾ ಪ್ರಕರಣಗಳು ಹೆಚ್ಚುತ್ತಿವೆ. ಎಲ್ಲರೂ ಕೋವಿಡ್‌ ಮಾರ್ಗಸೂಚಿ ಪಾಲಿಸಬೇಕು. ಜನಸಂದಣಿ ಇರುವೆಡೆ, ಕಾರ್ಯಕ್ರಮಗಳಲ್ಲಿ, ಒಳಾಂಗಣ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮಾÓ್ಕ… ಧರಿಸಿ. ಮಾಸ್‌್ಕ ಕಡ್ಡಾಯ ಮಾಡಿ, ದಂಡ ವಿಧಿಸುವ ಪರಿಸ್ಥಿತಿ ರಾಜ್ಯದಲ್ಲಿ ಇನ್ನೂ ಬಂದಿಲ್ಲ. ಆದರೆ, ಕೋವಿಡ್‌ ಎಲ್ಲೋ ದೂರದಲ್ಲಿದೆ, ವಿದೇಶದಲ್ಲಿದೆ ಎಂಬ ನಿರ್ಲಕ್ಷ್ಯ ಬೇಡ. ಜನರು ಮಾÓ್ಕ… ಧರಿಸಿಕೊಳ್ಳುವುದು ಒಳಿತು ಎಂದರು.

ವಿದೇಶಗಳಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿವೆ. ಆದ್ದರಿಂದ ನಮ್ಮ ಜನರು ಸಂಪೂರ್ಣ ಲಸಿಕಾಕರಣಕ್ಕೆ ಒಳಪಡಬೇಕು. ಒಂದನೇ ಡೋಸ್‌ ಪಡೆದಿರುವವರು ಅಸಡ್ಡೆ ಮಾಡದೇ ಎರಡನೇ ಡೋಸ್‌ ಪಡೆದುಕೊಳ್ಳಬೇಕು. ಮೂರನೇ ಡೋಸ್‌ ಪಡೆಯಲು ಅರ್ಹತೆ ಹೊಂದಿರುವವರು ತಡ ಮಾಡದೇ ಲಸಿಕೆ ಪಡೆದುಕೊಳ್ಳಬೇಕು ಎಂದರು.

5ರಿಂದ 12 ವರ್ಷದ ಮಕ್ಕಳಿಗೆ ಶೀಘ್ರ ಲಸಿಕೆ:
5ರಿಂದ 12 ವರ್ಷದೊಳಗಿನ ಮಕ್ಕಳಿಗೆ ಸದ್ಯದಲ್ಲೇ ಕೋವಿಡ್‌ ಲಸಿಕೆ ನೀಡಲಾಗುವುದು. ಎಳೆಯ ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಪೂರಕವಾದ ವ್ಯವಸ್ಥೆಯನ್ನು ಮಾಡಿಕೊಳ್ಳುತ್ತಿದೆ. ಈಗಾಗಲೇ 12 ವರ್ಷ ಮೇಲ್ಪಟ್ಟವರಿಗೆ ಲಸಿಕೆಯನ್ನು ಯಶಸ್ವಿಯಾಗಿ ನೀಡಲಾಗಿದೆ ಎಂದು ತಿಳಿಸಿದರು.

ಲಸಿಕಾಕರಣ ಆಗದ ದೇಶಗಳಲ್ಲಿ ಕೊರೋನಾ ಬೇರೆ ಬೇರೆ ಪ್ರಭೇದ ಕಾಣಿಸಿಕೊಳ್ಳುತ್ತಿದೆ. ಭಾರತದಲ್ಲಿ ಮೂರನೇ ಅಲೆ ಕಾಣಿಸಿಕೊಂಡರೂ ಸಾವು ನೋವು ಸಂಭವಿಸಿಲ್ಲ. ಇದಕ್ಕೆ ಕಾರಣ ಲಸಿಕಾಕರಣ ಎಂದರು.