Asianet Suvarna News Asianet Suvarna News

31 ರವರೆಗೆ ಎಲ್ಲಾ ಸರ್ಕಾರಿ, ಖಾಸಗಿ ಶಾಲೆ ಶಿಕ್ಷಕರಿಗೆ ರಜೆ

31ರವರೆಗೆ ಎಲ್ಲಾ ಸರ್ಕಾರಿ, ಖಾಸಗಿ ಶಾಲೆ ಶಿಕ್ಷಕರಿಗೆ ರಜೆ | ಬೋಧಕೇತರ ಸಿಬ್ಬಂದಿಗೂ ರಜೆ ಘೋಷಿಸಿದ ಸರ್ಕಾರ

Covid 19 Karnataka govt declares holiday to teachers till March 31
Author
Bengaluru, First Published Mar 23, 2020, 9:02 AM IST

ಬೆಂಗಳೂರು (ಮಾ. 23): ಕೊರೋನಾ ವೈರಸ್‌ ಹರಡುವ ಭೀತಿ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಮಾ.31 ರ ವರೆಗೆ ಸರ್ಕಾರ ರಜೆ ಘೋಷಿಸಿದೆ.

ಈಗಾಗಲೇ ಒಂದರಿಂದ 6 ನೇ ತರಗತಿ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ. 7ರಿಂದ 10ನೇ ತರಗತಿ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ಅಲ್ಲದೆ, ಎಲ್ಲಾ ಕ್ಷೇತ್ರಗಳಲ್ಲಿ ಮನೆಯಿಂದ ಕೆಲಸ ಮಾಡಿಸುವುದು ಅಥವಾ ರಜೆ ಘೋಷಿಸಿರುವುದರಿಂದ ಶಿಕ್ಷಕರಿಗೂ ರಜೆ ನೀಡಬೇಕು ಎಂದು ಶಿಕ್ಷಕರ ಸಂಘಟನೆಗಳು ಒತ್ತಾಯ ಮಾಡಿದ್ದವು.

ಬೆಂಗಳೂರಲ್ಲಿ 120 ವರ್ಷದ ಹಿಂದೆಯೇ 3 ಸಾವಿರ ಜನರ ಬಲಿ ಪಡೆದಿತ್ತು ಈ ರೋಗ!

ಶಿಕ್ಷಕರ ಮನವಿಗೆ ಸ್ಪಂದಿಸಿರುವ ಸರ್ಕಾರ ಇದೀಗ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಕೂಡ ಮುಂದೂಡಿರುವುದರಿಂದ ಮಾ.31ರ ವರೆಗೆ ಬೋಧಕ, ಬೋಧಕೇತರ ಸಿಬ್ಬಂದಿಗೆ ರಜೆ ನೀಡಿದೆ. ಮನೆಯಿಂದಲೇ ಆನ್‌ಲೈನ್‌ ಮೂಲಕ ಬೋಧನೆ ಮತ್ತು ಆನ್‌ಲೈನ್‌ ಮೌಲ್ಯಮಾಪನಕ್ಕೆ ಅಗತ್ಯವಿರುವ ಪಠ್ಯವಸ್ತು ಅಭಿವೃದ್ಧಿಪಡಿಸುವುದು. ಮುಂದಿನ ಶೈಕ್ಷಣಿಕ ವರ್ಷಕ್ಕೆ ಅಗತ್ಯವಿರುವ ಪಠ್ಯ ಯೋಜನೆ, ಟಿಪ್ಪಣಿಯನ್ನು ಸಿದ್ಧಪಡಿಸುವುದು ಹಾಗೂ ತಾವು ಬೋಧಿಸುವ ವಿಷಯದ ಪಠ್ಯವಸ್ತುವನ್ನು ಅಭಿವೃದ್ಧಿಪಡಿಸುವಂತೆ ತಿಳಿಸಿದೆ.

ಶಿಕ್ಷಕರು ತಮ್ಮ ಕರ್ತವ್ಯವ ಕೇಂದ್ರ ಸ್ಥಾನ ಬಿಡಬಾರದು ಹಾಗೂ ಸರ್ಕಾರದ ಸೇವೆ ಅಗತ್ಯವಿದ್ದಾಗ ಕಡ್ಡಾಯವಾಗಿ ಬಳಸಿಕೊಳ್ಳಲಾಗುವುದು ಎಂದು ಸೂಚಿಸಿದ್ದಾರೆ. ರಜೆ ನೀಡಿರುವುದಕ್ಕೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಂ.ನಾರಾಯಣ ಸ್ವಾಮಿ ಹಾಗೂ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಮಂಜನಾಥ್‌ ಅಭಿನಂದನೆ ಸಲ್ಲಿಸಿದ್ದಾರೆ.

Follow Us:
Download App:
  • android
  • ios