ಕೊರೋನಾ ಮಹಾಮಾರಿ ಅಟ್ಟಹಾಸ ಜೋರಾಗಿದೆ. ಸಾವು ನೋವಿನ ಸಂಖ್ಯೆಯೂ ಅಧಿಕವಾಗುತ್ತಿದೆ. ಈ ನಿಟ್ಟಿನಲ್ಲಿ ಇಲ್ಲಿ ಕಾರ್ಯ ನಿರ್ವಹಿಸುವ 50 ವರ್ಷ ವಯಸ್ಸಿನ ಮೇಲ್ಪಟ್ಟ ಸಿಬ್ಬಂದಿಗೆ ದಿನಬಿಟ್ಟು ದಿನ ಕೆಲಸಕ್ಕೆ ಆಗಮಿಸಲು ಸೂಚನೆ ನೀಡಲಾಗಿದೆ. 

ಬೆಂಗಳೂರು (ಏ.24): ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ 50 ವರ್ಷ ಮೇಲ್ಪಟ್ಟ ನೌಕರರು ದಿನ ಬಿಟ್ಟು ದಿನ ಕಚೇರಿಗೆ ಬರುವಂತೆ ಹಾಗೂ ಅದಕ್ಕಿಂತ ಕಡಿಮೆ ವಯಸ್ಸಿನವರು ಬೆಳಗ್ಗೆ 10ರಿಂದ ಸಂಜೆ 4 ರವರೆಗೆ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೋವಿಡ್‌ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತನ್ನ ಸಿಬ್ಬಂದಿಗೆ ಮಾರ್ಗಸೂಚಿಗಳನ್ನು ಹೊರಡಿಸಿದೆ. ಪರಿಷತ್ತಿನಲ್ಲಿ ಸುಮಾರು 50 ಮಂದಿ ನೌಕರರು ಇದ್ದಾರೆ. 

ಕಸಾಪ ಚುನಾವಣೆಗೂ ಇನ್ನು ಸಾಮಾಜಿಕ ಜಾಲತಾಣ ಬಳಕೆ ...

ಆದರೆ ಈ ಆದೇಶ ಈಗಾಗಲೇ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಗಾಗಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಅನ್ವಯಿಸುವುದಿಲ್ಲ ಎಂದು ಪರಿಷತ್‌ ಅಧ್ಯಕ್ಷ ಡಾ.ಮನು ಬಳಿಗಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.