ಮೇ.12ರಿಂದ ಕರ್ನಾಟಕ ಲಾಕ್? : ಚರ್ಚಿಸಿ ಶೀಘ್ರ ನಿರ್ಧಾರವೆಂದ ಡಿಸಿಎಂ

ದಿನವೂ ಸೋಂಕಿತರ ಸಂಖ್ಯೆ ಏರುತ್ತಲಿದ್ದು, ಮರಣ ಪ್ರಮಾಣವು ಏರಿದ್ದು ಆತಂಕ ಸೃಷ್ಟಿ ಮಾಡಿದೆ. ಇದೇ ವೇಳೆ ಮತ್ತೆ ಲಾಕ್‌ಡೌನ್ ಬಗ್ಗೆ ಅಶ್ವತ್ಥ್ ನಾರಾಯಣ್ ಸುಳಿವನ್ನು ನೀಡಿದ್ದಾರೆ. ಈ ಬಗ್ಗೆ ಚರ್ಚಿಸಿ ನಿರ್ಧಾರ ಮಾಡಲಾಗುವುದು ಎಂದಿದ್ದಾರೆ. 

Covid high risk Karnataka likely lock After May 12 snr

ಬೆಂಗಳೂರು (ಮೇ.06): ರಾಜ್ಯದಲ್ಲಿ ಕೊರೋನಾ ಮಹಾಮಾರಿ ಅಟ್ಟಹಾಸ ಹೆಚ್ಚಾಗುತ್ತಲೇ ಇದೆ. ದಿನವೂ ಸೋಂಕಿತರ ಸಂಖ್ಯೆ ಏರುತ್ತಲಿದ್ದು, ಮರಣ ಪ್ರಮಾಣವು ಏರಿದ್ದು ಆತಂಕ ಸೃಷ್ಟಿ ಮಾಡಿದೆ. ಈ ನಿಟ್ಟಿನಲ್ಲಿ ಮತ್ತೆ ಲಾಕ್‌ಡೌನ್ ಬಗ್ಗೆ ಚರ್ಚೆ ನಡೆಸುವುದಾಗಿ ಡಿಸಿಎಂ ಅಶ್ವತ್ಥ್ ನಾರಾಯಣ್ ಹೇಳಿದರು.

ಬೆಂಗಳೂರಿನಲ್ಲಿಂದು ಮಾತನಾಡಿದ ಡಿಸಿಎಂ ಅಶ್ವತ್ಥ್ ನಾರಾಯಣ್ ರಾಜ್ಯದಲ್ಲಿ ಲಾಕ್ ಡೌನ್ ವಿಚಾರದ ಬಗ್ಗೆ ಇದೂವರೆಗೂ ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ.  ಮೇ 12ರ ವರೆಗೆ ಈಗಿರುವ ನಿಯಮಗಳೇ ಮುಂದುವರೆಯುತ್ತದೆ. ಈಗಾಗಲೇ ಅನೇಕ ಕಠಿಣ ನಿಯಮ ಜಾರಿ ಆಗಿದೆ. ಹೀಗಿದ್ದರೂ ಕೇಸ್ ಹೆಚ್ಚಳ ಆಗುತ್ತಿದ್ದು,  ಮೇ 12 ಒಳಗೆ ಸಿಎಂ ಜೊತೆ ಸಭೆ ಮಾಡುತ್ತೇವೆ ಎಂದರು. 

ಜನತಾ ಕರ್ಫ್ಯೂ ವಿಫಲ, ಪೂರ್ಣ ಲಾಕ್‌ಡೌನ್‌ಗೆ ಚಿಂತನೆ: ಡಾ.ಸುಧಾಕರ್ ...

ರಾಜ್ಯದಲ್ಲಿ ಜನತಾ ಕರ್ಫ್ಯೂ ಹೇರಿದ್ದರು ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿಲ್ಲ. ಏರುಗತಿಯಲ್ಲೇ ಸಾಗುತ್ತಿದೆ. ಈ ನಿಟ್ಟಿನಲ್ಲಿ ಲಾಕ್‌ಡೌನ್ ಮಾಡಬೇಕೆ ಬೇಡವೇ ಎನ್ನುವ ಬಗ್ಗೆ ತಜ್ಞರು, ಆರೋಗ್ಯ ಇಲಾಖೆ ಸೇರಿದಂತೆ ಎಲ್ಲರ ಅಭಿಪ್ರಾಯ ತೆಗೆದುಕೊಳ್ಳುತ್ತೇವೆ ಎಂದು ಅಶ್ವತ್ಥ್ ನಾರಾಯಣ್ ಹೇಳಿದರು. 

ಸಿಎಂ ಜೊತೆ ಸಭೆ ಮಾಡಿದ ಬಳಿಕ ರಾಜ್ಯದಲ್ಲಿ ಮೇ 12ರ ಬಳಿಕ ಯಾವ ಕ್ರಮ ತೆಗೆದುಕೊಳ್ಳಬೇಕು ಅಂತ ತೀರ್ಮಾನ  ಮಾಡುತ್ತೇವೆ ಎಂದು ಡಿಸಿಎಂ ಅಶ್ವಥ್ ನಾರಾಯಣ ಹೇಳಿದರು. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Latest Videos
Follow Us:
Download App:
  • android
  • ios