ಬೆಳಗಾವಿ (ಏ.06):  ಕೋವಿಡ್‌-19 ವ್ಯಾಕ್ಸಿನ್‌ ಪಡೆದ ನಂತರವೂ ವಿಧಾನ ಪರಿಷತ್‌ ಸರ್ಕಾರಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರಿಗೆ ಕೊರೋನಾ ಸೋಂಕಿರುವುದು ಇರುವುದು ದೃಢಪಟ್ಟಿದ್ದು, ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ, ಡಿಸಿಎಂ ಗೋವಿಂದ ಕಾರಜೋಳ ಸೇರಿದಂತೆ ಬಿಜೆಪಿ ನಾಯಕರಿಗೆ ಕೊರೋನಾ ಭೀತಿ ಶುರುವಾಗಿದೆ. 

ಇತ್ತೀಚೆಗಷ್ಟೇ ಕೋವಿಡ್‌ ಲಸಿಕೆ ತೆಗೆದುಕೊಂಡಿದ್ದ ಕವಟಗಿಮಠ, ತಮಗೆ ಕೊರೋನಾ ದೃಢಪಟ್ಟಿರುವುದನ್ನು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ರಾಜ್ಯದಲ್ಲಿ ಕೊರೊನಾ 2ನೇ ಅಲೆ ಆರ್ಭಟ: ಏ.5ರ ಅಂಕಿ-ಸಂಖ್ಯೆ ಇಲ್ಲಿದೆ

ಕವಟಗಿಮಠ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಗಲ ಅವರ ಪರವಾಗಿ ಬೆಳಗಾವಿ, ಬೈಲಹೊಂಗಲ, ಸವದತ್ತಿ ಮತ್ತು ರಾಮದುರ್ಗದಲ್ಲಿ ಪ್ರಚಾರ ಕೈಗೊಂಡಿದ್ದರು. ಕವಟಗಿಮಠ ಜೊತೆಗೆ ಡಿಸಿಎಂ ಗೋವಿಂದ ಕಾರಜೋಳ, ಸಚಿವರಾದ ಜಗದೀಶ ಶೆಟ್ಟರ್‌, ಉಮೇಶ ಕತ್ತಿ, ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಸೇರಿದಂತೆ ಬಿಜೆಪಿ ನಾಯಕರು ಪ್ರಚಾರ ನಡೆಸಿದ್ದರು.