Asianet Suvarna News Asianet Suvarna News

ದೆಹಲಿ ಕನ್ನಡರಿಗರ ಪಾಡೋ ಕೇಳೋರಿಲ್ಲ : ಕರ್ನಾಟಕ ಸರ್ಕಾರಕ್ಕೆ ಮನವಿ

ಕೊರೋನಾ ಮಹಾಮಾರಿ ಉಲ್ಬಣಿಸಿದೆ. ದೆಹಲಿ, ಕರ್ನಾಟಕದಲ್ಲಿ ಈಗಾಗಲೇ ಲಾಕ್‌ಡೌನ್ ಮಾಡಲಾಗಿದೆ. ದೆಹಲಿಯಲ್ಲಿ ವಾಸವಾಗಿರುವ ಕನ್ನಡಿಗರು ಕೊರೋನಾ ಸಮಯದಲ್ಲಿ ನೆರವು ನೀಡಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಕೋರಿದ್ದಾರೆ. 

Covid Risk delhi Kannadigas Seeks Help from Karnataka Govt snr
Author
Bengaluru, First Published Apr 29, 2021, 10:36 AM IST

ಬೆಂಗಳೂರು (ಏ.29):  ಕೊರೊನಾ ಮಹಾಮಾರಿ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಾವು ನೋವುಗಳ ಸಂಖ್ಯೆಯೂ ಅತ್ಯಧಿಕ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಇತ್ತ ಕೊರೋನಾ ಹೆಚ್ಚಳ ಹಿನ್ನೆಲೆ ದೆಹಲಿಯಲ್ಲಿ ಕನ್ನಡಿಗರ ಪಾಡು ಕೇಳುವವರೇ ಇಲ್ಲದಂತಾಗಿದೆ.

ದೆಹಲಿಯಲ್ಲಿ ಕೊರೊನಾದಿಂದ ಕನ್ನಡಿಗರು ಪ್ರಾಣಕಳೆದುಕೊಳ್ಳುತ್ತಿದ್ದಾರೆ.  ಕೊರೋನಾ ಬಂದರೆ ಸೂಕ್ತ ಸಮಯದಲ್ಲಿ ಚಿಕಿತ್ಸೆ, ಆಸ್ಪತ್ರೆ ಯಾವುದೂ ಸಿಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

ನಿನ್ನೆಯಷ್ಟೆ ಇಬ್ಬರು ಕನ್ನಡಿಗರು ದೆಹಲಿಯಲ್ಲಿ  ಪ್ರಾಣ ಕಳೆದುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಮನವಿ ದೆಹಲಿ ಕನ್ನಡಿಗರು ಮನವಿ ಮಾಡುತ್ತಿದ್ದಾರೆ.

ಬೆಡ್‌ ಸಿಗದೆ ಆ್ಯಂಬುಲೆನ್ಸ್‌ನಲ್ಲಿ ನರಳಾಡಿ ಜೀವ ಬಿಟ್ಟ ವೃದ್ಧೆ ...

ದೆಹಲಿಯಲ್ಲಿರುವ ಕರ್ನಾಟಕ ಭವನಗಳನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿ.  ಕೊರೊನಾ ಹಿನ್ನೆಲೆ ಕರ್ನಾಟಕ ಭವನಕ್ಕೆ ಯಾರೂ ಆಗಮಿಸುವುದಿಲ್ಲ. ಈ ನಿಟ್ಟಿನಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ಮನವಿ ಮಾಡಿದ್ದಾರೆ. 

ದುಡಿಮೆಗಾಗಿ ಎರಡು ಸಾವಿರಾರು ಕಿಲೋ ಮೀಟರ್ ದೂರದಿಂದ ಬಂದಿದ್ದು, ಕರ್ನಾಟಕ ಸರ್ಕಾರ ದೆಹಲಿ ಕನ್ನಡಿಗರ ಕಷ್ಟಕ್ಕೆ ಸ್ಪಂದಿಸಲಿ ಎಂದು ಕೋರಿದ್ದಾರೆ.  

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Follow Us:
Download App:
  • android
  • ios