ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಕೊರೋನಾ ಸೋಂಕು: ಆತಂಕ

ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು |  ಕಾಲೇಜಿನಲ್ಲಿ ಆತಂಕ

covid19 case in engineer college Bangalore dpl

ಬೆಂಗಳೂರು(ಜ.02): ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಗರದ ಕೆಲವು ಖಾಸಗಿ ಎಂಜಿನಿಯರಿಂಗ್ ಕಾಲೇಜು ಗಳಲ್ಲಿ ಕೊರೋನಾ ಸೋಂಕು ದೃಢವಾಗಿದ್ದರೂ ಕಾಲೇಜು ಆಡಳಿತ ಮಂಡಳಿಗಳು ವಿದ್ಯಾರ್ಥಿಗಳನ್ನು ಕಾಲೇಜಿಗೆ ಬರುವಂತೆ ಸೂಚಿಸಿರುವುದ ಆತಂಕಕಾರಿ ವಿಚಾರವಾಗಿದೆ.

ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜಿನಲ್ಲಿ ಐವರು ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ. ಹೀಗಿದ್ದರೂ ಆಫ್ ಲೈನ್ ತರಗತಿ ಹಾಗೂ ಪರೀಕ್ಷೆ ಗಳಿಗೆ ಹಾಜರಾಗುವಂತೆ ಸೂಚಿಸಲಾಗಿದೆ. ಇದರಿಂದ ಬೇರೆ ವಿದ್ಯಾರ್ಥಿಗಳಿಗೂ ಸೋಂಕು ಹರಡುವ ಸಾಧ್ಯತೆ ಇದೆ. ಯಾವ ಆಧಾರದಲ್ಲಿ ಕಾಲೇಜಿಗೆ ಹಾಜರಾಗುವಂತೆ ಹೇಳುತ್ತಿದ್ದೀರಿ. ಸೋಂಕಿತ ವಿದ್ಯಾರ್ಥಿಗಳು ಬಳಸಿರುವ ಬೆಂಚು, ಶೌಚಾಲಯ ಸೇರಿದಂತೆ ಇನ್ನಿತರ ವಸ್ತುಗಳನ್ನು ಮುಟ್ಟಿದ್ದರೆ, ಕಾಲೇಜಿನ ಬೇರೆ ವಿದ್ಯಾರ್ಥಿಗಳ ಪರಿಸ್ಥಿತಿ ಬಗ್ಗೆ ಆಲೋಚನೆ ಮಾಡಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ಸಾಕಷ್ಟುವಿದ್ಯಾರ್ಥಿಗಳು ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಟ್ವಿರ್ಟ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೈಟ್‌ ಕೊಡಿಸೋದಾಗಿ ಜ್ಯೋತಿಷಿಗೇ ಟೋಪಿ ಹಾಕಿದ ನಟ

ಎಂಜಿನಿಯರಿಂಗ್ ಕಾಲೇಜುಗಳಲ್ಲಿಯೇ ಈ ಪರಿಸ್ಥಿತಿ ಯಾದರೆ, ಇನ್ನು ಶುಕ್ರವಾರದಿಂದ ಎಸ್‌ ಎಸ್‌ ಎಲ್‌ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಹಾಗೂ 6ರಿಂದ 9ನೇ ತರಗತಿ ಮಕ್ಕಳಿಗೆ ಶಾಲಾವರಣದಲ್ಲಿ ವಿದ್ಯಾಗಮ ಯೋಜನೆ ಆರಂಭಿಸಲಾಗಿದೆ. ಇದು ಮತ್ತಷ್ಟುಅಪಾಯಕಾರಿ ಬೆಳವಣಿಗೆಯಾಗಿದೆ. ರಾಜ್ಯ ಸರ್ಕಾರ ಮಕ್ಕಳನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದೆ ಎಂದು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

Latest Videos
Follow Us:
Download App:
  • android
  • ios