ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಮತ್ತೆ ಏರಿಕೆ ಕಾಣುತ್ತಿದ್ದು, ಇಂದು ಹೊಸದಾಗಿ 5 ಪಾಸಿಟಿವ್ ಕೇಸ್‌ಗಳು ದಾಖಲಾಗಿವೆ. ಬೆಂಗಳೂರಿನಲ್ಲಿ 32 ಸಕ್ರಿಯ ಪ್ರಕರಣಗಳು ದೃಢಪಟ್ಟಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲು ಸೂಚಿಸಿದೆ.
ಬೆಂಗಳೂರು (ಮೇ.24): ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಮತ್ತೆ ಏರಿಕೆ ಕಾಣುತ್ತಿದ್ದು, ಇಂದು ಹೊಸದಾಗಿ 5 ಪಾಸಿಟಿವ್ ಕೇಸ್‌ಗಳು ದಾಖಲಾಗಿವೆ. ಈ ಪೈಕಿ ಬೆಂಗಳೂರಿನಲ್ಲಿ 32 ಸಕ್ರಿಯ ಪ್ರಕರಣಗಳು ದೃಢಪಟ್ಟಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ ಒಂದು ಕೇಸ್ ವರದಿಯಾಗಿದೆ. ಒಟ್ಟಾರೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.

ಅಲ್ಲದೆ, ಬೆಂಗಳೂರಿನಲ್ಲಿ ಕೋವಿಡ್-19 ಸೋಂಕಿನಿಂದ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ದೃಢಪಡಿಸಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಸ್ಯಾನಿಟೈಸರ್ ಬಳಸುವುದು ಸೇರಿದಂತೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲು ಆರೋಗ್ಯ ಇಲಾಖೆ ಸೂಚಿಸಿದೆ.
ಕರ್ನಾಟಕದಲ್ಲಿ ಕೊವಿಡ್‌ಗೆ ಮೊದಲ ಬಲಿ:
ಕರ್ನಾಟಕದಲ್ಲಿ ಕೊವಿಡ್-19 ಗೆ ಮೊದಲ ಬಲಿಯಾಗಿ 85 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಉಸಿರಾಟದ ಸಮಸ್ಯೆ ಹಾಗೂ ಇತರೆ ಖಾಯಿಲೆಗಳಿಂದ ಬಳಲುತ್ತಿದ್ದ ಈ ವ್ಯಕ್ತಿ, ಕೊಮಾರ್ಬಿಡ್ ಲಕ್ಷಣಗಳನ್ನು ಹೊಂದಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ, ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ.
ಕೊರೊನಾ ತಡೆಗಟ್ಟಲು ಎಲ್ಲರೂ ಜಾಗರೂಕರಾಗಿರಿ
