Asianet Suvarna News Asianet Suvarna News

ಕರ್ನಾಟಕದ 470 ಕಿ.ಮೀ ರಸ್ತೆ ನಿರ್ಮಾಣಕ್ಕೆ ₹8006 ಕೋಟಿ ಹಣ: ಕೇಂದ್ರ ಸಚಿವ ಜೋಶಿ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ 2024-25ರ ವಾರ್ಷಿಕ ಯೋಜನೆಯಲ್ಲಿ ಕರ್ನಾಟಕದ 470ಕಿ.ಮೀ ರಸ್ತೆ ಅಭಿವೃದ್ಧಿಗಾಗಿ ಈ 8006 ಕೋಟಿ ಮಂಜೂರಿ ಮಾಡಿದೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ 

Crore for Construction of 470 km Road in Karnataka Says Union Minister Pralhad Joshi grg
Author
First Published Jul 2, 2024, 5:30 AM IST

ಹುಬ್ಬಳ್ಳಿ(ಜು.02):  ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ 2024-25ರ ವಾರ್ಷಿಕ ಯೋಜನೆಯಲ್ಲಿ ಕರ್ನಾಟಕದ 470ಕಿ.ಮೀ ರಸ್ತೆ ಅಭಿವೃದ್ಧಿಗಾಗಿ ಈ 8006 ಕೋಟಿ ಮಂಜೂರಿ ಮಾಡಿದೆ. ಉಳಿದಂತೆ ಹೊಸದಾಗಿ 459 ಕಿ.ಮೀ ಉದ್ದದ ಹೊಸ ರಸ್ತೆ ನಿರ್ಮಾಣಕ್ಕೆ ವಿಸ್ತ್ರತ ಯೋಜನಾ ವರದಿ (ಡಿಪಿಆರ್) ಅನ್ನು ಸಿದ್ಧಪಡಿಸಲು ಈ 15 ಕೋಟಿ ಮಂಜೂರಿ ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. 

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ ಈ ಹಿಂದೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ. 

ಕಾಂಗ್ರೆಸ್‌ನಿಂದ ಸೇಡಿನ ರಾಜಕಾರಣ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ಇದೀಗ ಕಾಮಗಾರಿಗೆ ಅನುಮೋದನೆ ದೊರಕಿದೆ. ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. 

Latest Videos
Follow Us:
Download App:
  • android
  • ios