Asianet Suvarna News Asianet Suvarna News

ಡೆಂಗ್ಯೂ ಪ್ರಕರಣ ಹೆಚ್ಚಳ; ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಿಟಿ ರವಿ, ಕೋಟಾ ಶ್ರೀನಿವಾಸ ಪೂಜಾರಿ

ನೂತನ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಇಂದು ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡೆಂಗ್ಯೂ ಪೀಡಿತರ ಯೋಗಕ್ಷೇಮ ವಿಚಾರಿಸಿದರು.

CT Ravi MP Kota Srinivasa Poojari visit Chikmagalur district hospital due to increase in dengue cases rav
Author
First Published Jun 11, 2024, 8:02 PM IST

- ವರದಿ : ಆಲ್ದೂರು ಕಿರಣ್ 

ಚಿಕ್ಕಮಗಳೂರು (ಜೂ.11) : ನೂತನ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಇಂದು ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡೆಂಗ್ಯೂ ಪೀಡಿತರ ಯೋಗಕ್ಷೇಮ ವಿಚಾರಿಸಿದರು. ಕಳೆದ ಹಲವು ದಿನಗಳಿಂದ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಡೆಂಗ್ಯೂ ಪೀಡಿತರ ಸಂಖ್ಯೆ ಹೆಚ್ಚಾಗಿದ್ದು, ಆಸ್ಪತ್ರೆಗಳು ತುಂಬಿ ತುಳುಕುವಂತಾಗಿದೆ. ಈ ಹಿನ್ನೆಲೆಯಲ್ಲಿ ಇಬ್ಬರೂ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಧೈರ್ಯ ತುಂಬಿದರಲ್ಲದೆ, ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಚಿಕಿತ್ಸೆ, ಔಷದೋಪಚಾರ ನೀಡುವಂತೆ ಸೂಚಿಸಿದರು.

ತ್ರಿಶತಕ ದಾಟಿರುವ ಡೆಂಗ್ಯೂ ಪ್ರಕರಣ

ಚಿಕ್ಕಮಗಳೂರು ಜಿಲ್ಲೆಯಲ್ಲಿ 350ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ಧಢೃವಾಗಿದ್ದು ಸಾವಿರಾರು ಜನರಲ್ಲಿ ಡೆಂಗ್ಯೂ ರೋಗದ ಲಕ್ಷಣಗಳು ಪತ್ತೆ ಆಗಿದೆ.ದಿನದಿಂಧ ದಿನಕ್ಕೆ ಪ್ರಕರಣಗಳು ಹೆಚ್ಚಾಗಿದ್ದು ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ ಸಂಸದರು, ಶಾಸಕರು ರೋಗಿಗಳಿಗೆ ಮತ್ತು ಅವರ ಸಂಬಂಧಿಕರೊಂದಿಗೆ ಮಾತನಾಡಿ ಸೂಕ್ತ ಚಿಕಿತ್ಸೆ, ಔಷಧಿ, ಮಾತ್ರೆಗಳು ದೊರೆಯುತ್ತಿರುವ ಬಗ್ಗೆ ಮಾಹಿತಿ ಪಡೆದರು. ಶುಚಿತ್ವ ಕಾಪಾಡಿಕೊಂಡು ಉತ್ತಮ ರೀತಿ ಸ್ಪಂದಿಸುವಂತೆ ವೈದ್ಯರು ಮತ್ತು ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

ಡೆಂಗ್ಯೂ ಜ್ವರಕ್ಕೆ ಕಾಫಿನಾಡಿನ ಜನರು ತತ್ತರ; ಇದೇ ಮೊದಲ ಬಾರಿಗೆ 350 ಪ್ರಕರಣ ದಾಖಲು!

ಖಾಸಗಿ ಆಸ್ಪತ್ರೆಗಳಲ್ಲೂ ಡೆಂಗ್ಯೂ ರೋಗಿಗಳು : 

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಚಿಕ್ಕಮಗಳೂರು ನಗರ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕಳೆದ ಹದಿನೈದು ದಿನಗಳಿಂದ ವ್ಯಾಪಕವಾಗಿ ಡೆಂಗ್ಯೂ ಹರಡುತ್ತಿದೆ. ಈ ಸಂಬಂಧ ಬೆಳಗ್ಗೆ ಜಿಲ್ಲಾಧಿಕಾರಿಗಳ ಜೊತೆಗೆ ಮಾತನಾಡಿದ್ದೇನೆ ಎಂದರು.ಸರ್ಕಾರಿ ಆಸ್ಪತ್ರೆ ಸೇರಿದಂತೆ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲೂ ಡೆಂಗ್ಯೂ ರೋಗಿಗಳು ಇದ್ದಾರೆ. ನಗರಸಭೆ, ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಯುದ್ಧೋಪಾದಿಯಲ್ಲಿ ಕ್ರಮ ತೆಗೆದುಕೊಂಡರೆ ಮಾತ್ರ ಇದು ನಿಯಂತ್ರಣಕ್ಕೆ ಬರಬಹುದು. ಲಾರ್ವಗಳನ್ನು ಪತ್ತೆ ಮಾಡಿ ನಾಶಪಡಿಸುವ ಕೆಲಸ ಆಗಬೇಕು. ಇಲ್ಲವಾದಲ್ಲಿ ದೊಡ್ಡ ಪ್ರಮಾಣದಲ್ಲಿ ಡೆಂಗ್ಯೂ ಪೀಡಿತರಾಗುವ ಸಾಧ್ಯತೆ ಇದೆ. ಪ್ರತಿ ಮನೆ ಮನೆಯಲ್ಲಿ ಲಾರ್ವ ಪರೀಕ್ಷೆ ನಡೆಸಿ ಜನರಿಗೆ ತಿಳುವಳಿಕೆ ನೀಡಿ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಕೆಲಸ ಆಗಬೇಕು ಎಂದು ಆಗ್ರಹಿಸಿದರು.ಜಿಲ್ಲಾ ಸರ್ಜನ್ ಡಾ.ಮೋಹನ್ ಕುಮಾರ್ ಮತ್ತಿತರೆ ವೈದ್ಯರು ಹಾಗೂ ಬಿಜೆಪಿ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.

Latest Videos
Follow Us:
Download App:
  • android
  • ios