*  ದತ್ತಪೀಠಕ್ಕೆ ಅರ್ಚಕರ ನೇಮಕ ಮಾಡುವಂತೆ ಸುದೀರ್ಘ ಕಾಲದಿಂದ ಒತ್ತಾಯ*  ಸಿದ್ದರಾಮಯ್ಯ ನೇತೃತ್ವದ ಹಿಂದಿನ ಕಾಂಗ್ರೆಸ್‌ ಸರ್ಕಾರ ಹಿಂದೂಗಳ ಕೋರಿಕೆ ಪುರಸ್ಕರಿಸಲಿಲ್ಲ*  ಇದೀಗ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಅದನ್ನು ಪುರಸ್ಕರಿಸಿದೆ 

ಬೆಂಗಳೂರು(ಜು.02): ದತ್ತಪೀಠದ ವಿವಾದ ಪರಿಹಾರ ಮಾಡುವ ವಿಚಾರವಾಗಿ ರಾಜ್ಯ ಸಚಿವ ಸಂಪುಟ ಉಪಸಮಿತಿಯ ವರದಿಯನ್ನು ಸಂಪುಟ ಸಭೆಯಲ್ಲಿ ಮಂಡಿಸಿರುವುದನ್ನು ಸ್ವಾಗತಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಇದು ನಾಲ್ಕು ದಶಕಗಳ ಸುದೀರ್ಘ ಹೋರಾಟಕ್ಕೆ ಸಿಕ್ಕಿದ ಗೆಲುವು ಎಂದು ಹೇಳಿದ್ದಾರೆ.

ಹೈಕೋರ್ಟ್‌ ಸೂಚನೆ ಹಿನ್ನೆಲೆಯಲ್ಲಿ ಸಂಪುಟ ಉಪಸಮಿತಿ ರಚನೆಯಾಗಿತ್ತು. ಆ ಉಪ ಸಮಿತಿಯು ಸಮಸ್ಯೆ ಪರಿಹಾರಕ್ಕೆ ಶಿಫಾರಸು ಮಾಡಿದೆ. ಉಪಸಮಿತಿ ಕೊಟ್ಟಿರುವ ವರದಿಯ ಕುರಿತು ಹೈಕೋರ್ಚ್‌ ಮುಂದೆ ಪ್ರಮಾಣಪತ್ರ ಸಲ್ಲಿಸಲು ಸಚಿವ ಸಂಪುಟ ಸಭೆಯು ತೀರ್ಮಾನಿಸಿದ್ದು ಸಂತಸ ತಂದಿದೆ ಎಂದು ಅವರು ತಿಳಿಸಿದ್ದಾರೆ.

ದತ್ತಪೀಠ ವಿವಾದ: ಮುಸ್ಲಿಂರನ್ನು ಒದ್ದು ಓಡಿಸಬೇಕು: ಪ್ರಮೋದ್‌ ಮುತಾಲಿಕ್‌

ದತ್ತಪೀಠಕ್ಕೆ ಅರ್ಚಕರ ನೇಮಕ ಮಾಡುವಂತೆ ಸುದೀರ್ಘ ಕಾಲದಿಂದ ಒತ್ತಾಯಿಸಲಾಗುತಿತ್ತು. ಆದರೆ, ಸಿದ್ದರಾಮಯ್ಯ ಅವರ ನೇತೃತ್ವದ ಹಿಂದಿನ ಕಾಂಗ್ರೆಸ್‌ ಸರ್ಕಾರವು ಹಿಂದೂಗಳ ಈ ಕೋರಿಕೆಯನ್ನು ಪುರಸ್ಕರಿಸಲಿಲ್ಲ. ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರವು ಅದನ್ನು ಪುರಸ್ಕರಿಸಿದೆ. ಇದು ದೀರ್ಘ ಕಾಲದ ಹೋರಾಟಕ್ಕೆ ಸಂದ ಜಯ ಎಂದು ಅವರು ಪ್ರಕಟಣೆ ಮೂಲಕ ಹೇಳಿದ್ದಾರೆ.